ಮಂಡ್ಯ: ಕೃಷ್ಣರಾಜಸಾಗರ (ಕೆಆರ್​ಎಸ್​) ಅಣೆಕಟ್ಟಿನಿಂದ 81 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆಯಾಗಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ವಿಶ್ವ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮದ ನಡುಗಡ್ಡೆಗಳು ಭಾಗಶಃ ಮುಳುಗಡೆಯಾಗಿವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ಬರ ಹಿನ್ನೆಲೆಯಲ್ಲಿ ಅಣೆಕಟ್ಟೆಗೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರಿ ಏರಿಕೆಯಾಗಿರುವ ಕಾರಣ, ಕಾವೇರಿ ನದಿಗೆ ನೀರು ಬಿಡಲಾಗಿದೆ.
ಗೂಡು, ಮೊಟ್ಟೆ ರಕ್ಷಣೆ ಮಾಡಿಕೊಳ್ಳಲು ಪಕ್ಷಿ ಸಂಕುಲ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.ಫುಟ್​ಪಾಥ್​ಗೂ ನದಿ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ದೋಣಿ ವಿಹಾರದ ಸ್ಥಳಗಳ ಸಂಪೂರ್ಣ ಮುಳುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷಿಧಾಮಕ್ಕೆ ಪ್ರವಾಸಿಗರ ನಿರ್ಬಂಧ ವಿಧಿಸಲಾಗಿದೆ.
ಕಳೆದ 15 ದಿನಗಳ ಹಿಂದೆ 10 ದಿನಗಳ ಕಾಲ ಪಕ್ಷಿಧಾಮಕ್ಕೆ ನಿರ್ಬಂಧ ಹೇರಲಾಗಿತ್ತು. ಇದೀಗ ಮತ್ತೆ ಕಾವೇರಿ ಭೋರ್ಗರೆತದಿಂದ ನಿಷೇಧ ಹೇರಲಾಗಿದೆ. ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿರುವುದರಿಂದ ನದಿ ಹಂಚಿನ ದೇಗುಲ, ಪ್ರವಾಸಿ ತಾಣಗಳು ಜಲಾವೃತವಾಗಿವೆ. ಪ್ರವಾಹ ಭೀತಿ ಎದುರಾಗುತ್ತಿದ್ದಂತೆ ಶ್ರೀರಂಗಪಟ್ಟಣ ತಾಲೂಕು ಆಡಳಿತ ಅಲರ್ಟ್ ಆಗಿದೆ. ನದಿ ತೀರದ 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಶ್ವೇತ ರವೀಂದ್ರ ಆದೇಶ ಹೊರಡಿಸಿದ್ದಾರೆ.
ಒಳ ಹರಿವು ಹೆಚ್ಚಾದಂತೆ ಹೊರ ಹರಿವಿನ ಪ್ರಮಾಣ ಕೂಡ ಏರಿಕೆಯಾಗಿದ್ದು, ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಆವರಿಸಿದೆ. ಒಂದು ತಿಂಗಳ ಅಂತರದಲ್ಲಿ ಎರಡನೇ ಬಾರಿಗೆ ನೆರೆ ಆತಂಕ ಆವರಿಸಿದೆ. ಸದ್ಯ ಅಣೆಕಟ್ಟೆಗೆ 67,712 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅಣೆಕಟ್ಟೆಯಿಂದ ನದಿಗೆ 81,112 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಕಾವೇರಿ ನದಿ ದಡದಲ್ಲಿರುವ ದೇವಸ್ಥಾನಗಳಿಗೆ ಜಲ ದಿಗ್ಬಂಧನ ಹಾಕಿದೆ. ಶ್ರೀರಂಗಪಟ್ಟಣದ ಗಣಪತಿ, ಚಂದ್ರಮೌಳೇಶ್ವರ ಮತ್ತು ಅಷ್ಟಮಾತೆಯರ ದೇವಸ್ಥಾನಗಳು ಜಲಾವೃತವಾಗಿವೆ. ದೈನಂದಿನ ಪೂಜಾ ಕೈಂಕರ್ಯಗಳು ಸಹ ಬಂದ್ ಆಗಿವೆ. ನದಿ ಬಳಿಗೆ ಬರದಂತೆ ಜನರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.(ದಿಗ್ವಿಜಯ ನ್ಯೂಸ್​)
https://www.vijayavani.net/s-hennumakkaligoo-asthi-nyaya/
ಬೆಲ್ಟ್​, ಕ್ಯಾಪ್​ ತೆಗೆಸಿ ಆರೋಪಿಗಳ ಜತೆ ಪೊಲೀಸರನ್ನು ಕುಳ್ಳರಿಸಿದ ಕೋರ್ಟ್​! ಏಕಿಂತ ಶಿಕ್ಷೆ ಅಂತೀರಾ?

ಸಿದ್ದರಾಮೋತ್ಸವದ ಸಂಭ್ರಮದಲ್ಲಿದ್ದ ಶಾಸಕ ಪಾಟೀಲ್​ಗೆ ಆಘಾತ: ವಾಪಸ್​ ಬರುವಾಗ ಕಾಲು ಮುರಿತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
