ಬೆಂಗಳೂರು:‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಮೂಲಕ ಅಸಂಖ್ಯ ಅಭಿಮಾನಿಗಳನ್ನು ಪಡೆದಿದ್ದ ರೇಡಿಯೋ ಜಾಕಿ (ಆರ್​ಜೆ) ರಚನಾ 35ರ ಹರೆಯದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ನೇತ್ರದಾನ ಮಾಡುವ ಮೂಲಕ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿರುವ ರಚನಾ ಕುರಿತಂತೆ ಇನ್ನೋರ್ವ ಪ್ರಸಿದ್ಧ ರೇಡಿಯೋ ಜಾಕಿ ರ‍್ಯಾಪಿಡ್ ರಶ್ಮಿ ಅವರ ಕುರಿತು ಮಾತನಾಡಿದ್ದಾರೆ.
ರಚನಾ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದರು. ಅವರ ಆಹಾರದ ಬಗ್ಗೆಯೂ ಸ್ಪಷ್ಟತೆ ಹೊಂದಿದ್ದರು. ಸರಿಯಾದ ಸಮಯದಲ್ಲಿ ಆಹಾರ ಸೇವನೆ ಮಾಡುತ್ತಿದ್ದರು. ಸಲಾಡ್​ಗಳನ್ನು ತಿನ್ನುವುದನ್ನು ಇಷ್ಟಪಡುತ್ತಿದ್ದರು. ಇಷ್ಟೆಲ್ಲಾ ಆದರೂ ಹೃದಯಾಘಾತ ಹೇಗೆ ಆಯಿತು ಎನ್ನುವುದೇ ಅಚ್ಚರಿ ಎಂದಿದ್ದಾರೆ ರಶ್ಮಿ. ರಚನಾ ಆರ್​ಜೆಯಾಗಿ ವೃತ್ತಿ ಜೀವನವನ್ನು ಆರಂಭಿಸುವ ಮೊದಲು ನಾವು ಬೇರೆ ಬೇರೆ ಕಾರ್ಯಕ್ರಮ ನಡೆಸಿಕೊಡುತ್ತಿದ್ದೆವು. ಆಗಿನಿಂದ ನಾವು ಉತ್ತಮ ಸ್ನೇಹಿತರಾಗಿದ್ದೆವು. ಈಗ ಅವರು ದಿಢೀರ್​ ಮೃತಪಟ್ಟಿರುವುದು ಸಹಿಸಲಾಗುತ್ತಿಲ್ಲ ಎಂದಿದ್ದಾರೆ.
ರಚನಾ ಅವರೊಂದಿಗೆ ದೀರ್ಘಕಾಲದ ಒಡನಾಟ ಇದ್ದರೂ ಕೂಡ ಇತ್ತೀಚೆಗೆ ಅವರೊಂದಿಗೆ ಅಷ್ಟಾಗಿ ಸಂಪರ್ಕದಲ್ಲಿರಲಿಲ್ಲ. ಆದರೆ ಆಕೆ ಒಂದು ಮಗುವನ್ನು ದತ್ತು ಪಡೆಯಲು ಯೋಚಿಸಿದ್ದರು. ಆ ಯೋಚನೆಯಿಂದ ನಾನು ಪ್ರಭಾವಿತಳಾಗಿದ್ದೆ. ಅದಕ್ಕೆ ನನ್ನ ಬೆಂಬಲ ಸೂಚಿಸಿದ್ದೆ. ಆದರೆ ವಿಧಿಯಾಟವೇ ಬೇರೆಯಾಯಿತು. ಜೀವನದಲ್ಲಿ ಹೊಸದೇನನ್ನೋ ಮಾಡಲು ಹೋಗುವರಿಗೂ ಹೀಗಾಗುತ್ತದೆ ಎನ್ನುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.
VIDEO: ಸಮಸ್ತ ಕನ್ನಡಿಗರಿಗೆ ನಮಸ್ಕಾರ… ಇವತ್ತಿನಿಂದ ನಾನು ರಾಧಿಕಾ ಕುಮಾರಸ್ವಾಮಿ ಎನ್ನುವ ಹೊಸ….

‘ಗಂಗೂಬಾಯಿ ಕಾಥಿಯಾವಾಡಿ’ ರಿಲೀಸ್​ಗೆ ಸಿಕ್ತು ಗ್ರೀನ್​ ಸಿಗ್ನಲ್​: ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಗಳು ವಜಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
