ಬೆಂಗಳೂರು:ಬಹು ವಿವಾದ ಸೃಷ್ಟಿಸಿರುವ ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯಿಂದ ಚಿಂತಕ ರೋಹಿತ್​ ಚಕ್ರತೀರ್ಥ ಅವರನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ. ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ವಿಸರ್ಜಿಸಿರುವ ಕಾರಣ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.
ದ್ವಿತೀಯ ಪಿಯುಸಿಯಲ್ಲಿ ಅಧ್ಯಾಯ 4.2ರ ಹೊಸ ಧರ್ಮಗಳ ಉದಯ ಪಠ್ಯಭಾಗದ ಪರಿಷ್ಕರಣೆ ಈ ಮೊದಲು ಸರ್ಕಾರ ಮುಂದಾಗಿತ್ತು. ಪಠ್ಯ ಪರಿಷ್ಕರಣೆ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥ ಅವರಿಗೆ ವಹಿಸಲಾಗಿತ್ತು. ಶಾಲೆಗಳ ಪಠ್ಯದ ಪರಿಷ್ಕರಣೆ ವಿವಾದ ಹಿನ್ನೆಲೆಯಲ್ಲಿ ‘ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ಕೈಬಿಡಲು ಸರ್ಕಾರ ಮುಂದಾಗಿದೆ ಎಂದು ಸಚಿವ ನಾಗೇಶ್​ ತಿಳಿಸಿದ್ದಾರೆ.
ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆ ಸಮಿತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ 3 ರಂದು ವಿಸರ್ಜಿಸಿದ್ದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದ್ದ ಮುಖ್ಯಮಂತ್ರಿಗಳು, ‘ಪಠ್ಯ ಪರಿಷ್ಕರಣೆಯ ಕ್ರಮಗಳ ಬಗ್ಗೆ ಎದ್ದಿರುವ ವಿವಾದಗಳ ಕಾರಣಕ್ಕೆ ಅಥವಾ ಯಾವುದೇ ಒತ್ತಡಕ್ಕೆ ಮಣಿದು ಈ ಸಮಿತಿಯನ್ನು ವಿಸರ್ಜಿಸುತ್ತಿಲ್ಲ’ ಎಂದು ಸ್ಪಷ್ಟಪಡಿಸಿದ್ದರು. ‘ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲಕಾಲಕ್ಕೆ ತಕ್ಕಂತೆ ಪರಿಷ್ಕರಿಸಲಾಗುತ್ತದೆ. ರಾಜ್ಯದಲ್ಲಿ ಹಲವು ಬಾರಿ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ’ ಎಂದೂ ಅವರು ಹೇಳಿದ್ದರು.
ಹಿಜಾಬ್​ ವಿಷ್ಯದಲ್ಲಿ ಗಲಾಟೆ: ಕಾಣದ ಕೈಗಳಿಗೆ ಶಾಸಕ ಖಾದರ್​ ನೀಡಿದ್ರು ಶಾಕ್​! ಅವರು ಹೇಳಿದ್ದೇನು ಕೇಳಿ…

ಕಾಂಗ್ರೆಸ್​ಗೆ ಓಪನ್ ಆಫರ್​ ಕೊಟ್ಟ ಎಚ್​ಡಿಕೆ: ಚಡ್ಡಿಯೊಳಗೆ ಏನೂ ಇಲ್ಲ ಎಂದ ಮಾಜಿ ಸಿಎಂ

ಕಾಂಗ್ರೆಸ್​ಗೆ ‘ಆತ್ಮಸಾಕ್ಷಿ ಮತ’: ಸಿದ್ದು ಹೇಳಿಕೆಗೆ ಸಿಎಂ ನಗುವೇ ಉತ್ತರ- ಎಚ್​ಡಿಕೆ ಟಾಂಗ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + ten =
Remember me
