ಬೆಂಗಳೂರು:ಐ ಮಾನಿಟರಿ ಅಡ್ವೈಸರಿ (ಐಎಂಎ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಶಾಸಕ ರೋಷನ್ ಬೇಗ್ ಅವರನ್ನು ಕೋರ್ಟ್‌ 3 ದಿನ ಸಿಬಿಐ ಕಸ್ಟಡಿಗೆ ನೀಡಿದೆ.
ಇದೇ ಸೋಮವಾರ ಅವರನ್ನು ಸಿಬಿಐ ವಶಕ್ಕೆ ಪಡೆದಿತ್ತು. ವಿಚಾರಣೆ ಬಳಿಕ ಕೋರಮಂಗಲದ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಿತ್ತು. 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದ ನಂತರ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿತ್ತು.
ಪರಪ್ಪನ ಅಗ್ರಹಾರ ಸೇರಿದ್ದ ಬೇಗ್‌ರನ್ನು ಈ ಪ್ರಕರಣದಲ್ಲಿ ವಿಚಾರಣೆ ನಡೆಸಬೇಕು ಎಂದು ಇಂದು ಸಿಬಿಐ ಕೋರ್ಟ್‌ಗೆ ಮನವಿ ಮಾಡಿತ್ತು. ವಾದವನ್ನು ಪುರಸ್ಕರಿಸಿದ ಕೋರ್ಟ್‌ ಮೂರು ದಿನ ಕಾಲ ಸಿಬಿಐ ಕಸ್ಟಡಿಗೆ ನೀಡಿದೆ.
ಏನಿದು ಕೇಸ್​:ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ಹೆಸರು ಥಳಕು ಹಾಕಿಕೊಂಡಿತ್ತು.ಐಎಂಎ ಸಂಸ್ಥಾಪಕ ಮನ್ಸೂರ್ ಅಲಿಖಾನ್​ ಬಂಧನಕ್ಕೂ ಮೊದಲೇ ವಿಡಿಯೋ ಹರಿ ಬಿಟ್ಟು, ರೋಷನ್ ಬೇಗ್ ಹಣ ಪಡೆದಿದ್ದಾರೆಂದು ಆರೋಪಿಸಿದ್ದರು. ಈ ಕುರಿತು ಎಸ್​ಐಟಿ ಸಹ ರೋಷನ್ ಬೇಗ್ ವಿಚಾರಣೆ ನಡೆಸಿತ್ತು.
ಬಳಿಕ ಇದೇ ಪ್ರಕರಣ ಸಿಬಿಐಗೆ ವರ್ಗಾವಣೆಯಾದ ಬೆನ್ನಲ್ಲೆ ರೋಷನ್ ಬೇಗ್ ವಿಚಾರಣೆ ಮುಂದುವರೆಸಿತ್ತು. ಮನ್ಸೂರ್ ಮಾಡಿದ ಆರೋಪಕ್ಕೆ ಪುಷ್ಟಿ ನೀಡುವಂಥ ಆಧಾರಗಳು ಸಿಕ್ಕ ಬೆನ್ನಲ್ಲೆ ಸಿಬಿಐ ಬೇಗ್​ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು.
ಇದನ್ನೂ ಓದಿ:ಸೆರೆವಾಸಕ್ಕೆ ಒಗ್ಗಿಕೊಳ್ಳೋದು ಕಷ್ಟ ಅಂದ ಬೇಗ್​: ಸಿಬಿಐ ವಶಕ್ಕೆ ಮನ್ಸೂರ್
ಈ ಹಿಂದೆ ಸಿಬಿಐ ಎರಡು ಬಾರಿ ನೋಟಿಸ್‌ ನೀಡಿ ರೋಷನ್‌ ಬೇಗ್‌ ಅವರನ್ನು ವಿಚಾರಣೆ ನಡೆಸಿತ್ತು. ಬಳಿಕ ಯಾವುದೇ ವಿಚಾರಣೆ ನಡೆಸಿರಲಿಲ್ಲ.
ಈ ನಡುವೆ ಮನ್ಸೂರ್‌ ಖಾನ್‌ ನಾನು ರೋಷನ್‌ ಬೇಗ್‌ ಅವರಿಗೆ ಹಣ ನೀಡಿದ್ದೇನೆ. ಈ ಹಣವನ್ನು ರೋಷನ್‌ ಬೇಗ್‌ ಅವರಿಂದ ಪಡೆಯಲೇಬೇಕು ಎಂದು ಹೇಳಿದ್ದಾನೆ. ಒಂದು ವೇಳೆ ಹಣವನ್ನು ಪಡೆಯದೇ ಇದ್ದರೆ ನಿಮ್ಮ ವಿರುದ್ಧವೇ ನ್ಯಾಯಾಧೀಶರಿಗೆ ದೂರು ನೀಡುತ್ತೇನೆ ಎಂದು ಮನ್ಸೂರ್‌ ಖಾನ್‌ ಸಿಬಿಐ ಅಧಿಕಾರಿಗಳ ಮೇಲೆ ಒತ್ತಡ ಹಾಕಿದ್ದ ಎಂದು ಮೂಲಗಳು ಹೇಳಿವೆ.
ಹೊರಗಡೆ ಇಂಟೀರಿಯರ್​ ಡಿಸೈನಿಂಗ್​ ಬೋರ್ಡ್​- ಒಳಗಡೆ ಅಂಗಾಂಗ ಪ್ರದರ್ಶನದ ತರಬೇತಿ!

ವಿಧ್ವಂಸಕ ಕೃತ್ಯಕ್ಕೆ ಯೋಜನೆ ರೂಪಿಸಿದ್ದು ನಿಜ ಎಂದು ಬಾಯ್ಬಿಟ್ಟ ಉಗ್ರ

ಬಿಹಾರ ವಿಧಾನಸಭಾ ಸ್ಪೀಕರ್​ ಆಗಿ ಬಿಜೆಪಿಯ ವಿಜಯ್​ಕುಮಾರ್​ ಆಯ್ಕೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × 2 =
Remember me
