ಬೆಂಗಳೂರು:ಬೆಂಗಳೂರಿನ ಪ್ರತಿಷ್ಠಿತ ಕಣವಾಗಿರುವ ರಾಜರಾಜೇಶ್ವರಿನಗರ ಕ್ಷೇತ್ರದ ಚುನಾವಣೆಯಲ್ಲಿ (ಆರ್​,ಆರ್​.ನಗರ) ಈ ಹಿಂದೆ ಬೃಹತ್​ ಅಕ್ರಮದ ಕುರಿತು ಸುದ್ದಿ ಸುಳಿದಾಡುತ್ತಿತ್ತು. ಈಗ ಮತ್ತೆ ಅಕ್ರಮದ ಘಾಟು ಹೊಡೆಯುತ್ತಿದೆ.
ಈ ಕುರಿತು ಕ್ಷೇತ್ರದ ಮತದಾರರಿಂದ ಚುನಾವಣಾಧಿಕಾರಿಗಳಿಗೆ ದೂರುಗಳು ಬರುತ್ತಿವೆಯಂತೆ. ಕ್ಷೇತ್ರದ ಮತದಾರರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ನಿಮ್ಮ ವೋಟರ್ ಐಡಿ ಹಾಗೂ ಮೊಬೈಲ್ ಸಂಖ್ಯೆ ನೀಡುವಂತೆ ಒತ್ತಾಯಿಸುತ್ತಿರುವುದಾಗಿ ದೂರುಗಳು ದಾಖಲಾಗಿವೆ.
ಈ ಮೊದಲು ನಡೆದಿದ್ದ ವಿಧಾನಸಭಾ ಚುನಾವಣೆ ವೇಳೆ ಅಕ್ರಮ ವೋಟರ್ ಐಡಿ ಕಾರ್ಡ್ ಜಾಲದ ಕುರಿತು ಭಾರಿ ಸುದ್ದಿಯಾಗಿತ್ತು. ಈ ಪ್ರಕರಣ ನಂತರ ಸುಪ್ರೀಂಕೋರ್ಟ್​ ಬಾಗಿಲಿಗೂ ಹೋಗಿತ್ತು. ಕಾಂಗ್ರೆಸ್​ ಅಭ್ಯರ್ಥಿಯಾಗಿದ್ದ ಮುನಿರತ್ನ ವಿರುದ್ಧ ಆಗ ಆರೋಪ ಕೇಳಿಬಂದಿತ್ತು. ಆದರೆ ವಿಚಾರಣೆ ನಡೆಸಿದ್ದ ಕೋರ್ಟ್​, ಈ ಅಕ್ರಮದಲ್ಲಿ ಮುನಿರತ್ನ ಅವರ ಪಾತ್ರವಿಲ್ಲ ಎಂದು ಹೇಳುವ ಮೂಲಕ, ಅವರ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿತ್ತು.
ಇದನ್ನೂ ಓದಿ:ಎನ್​ಕೌಂಟರ್​: ಐವರು ನಕ್ಸಲರನ್ನು ಹೊಡೆದುರುಳಿಸಿದ ಕಮಾಂಡೋ
ಆದರೆ ಬರುವ ನವೆಂಬರ್​ 3ರಂದು ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿದಂತೆ ಮತ್ತದೇ ಆರೋಪಗಳು ಕೇಳಿಬರುತ್ತಿವೆ. ಆದರೆ ಈ ಬಾರಿ ಯಾರಿಂದ ಕರೆ ಬಂದಿದೆ ಎಂಬುದು ಇದುವರೆಗೆ ಸ್ಪಷ್ಟವಾಗಿಲ್ಲ. ಆದರೆ ಮತದಾರರು ಮಾತ್ರ ಕರೆಗಳಿಂದ ಬೇಸತ್ತು ಚುನಾವಣಾಧಿಕಾರಿಗಳಿಗೆ ದೂರು ದಾಖಲು ಮಾಡುತ್ತಿದ್ದಾರೆ.
ಈ ದೂರಿನ ಕುರಿತಂತೆ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ ಅವರು ಮಾತನಾಡಿ, ಅಪರಿಚಿತರು ಕರೆ ಮಾಡಿ ತಮ್ಮ ವೋಟರ್ ಐಡಿ ನಂಬರ್ ಹಾಗೂ ಮೊಬೈಲ್ ಸಂಖ್ಯೆ ಕೇಳುತ್ತಿದ್ದಾರೆ ಎಂಬುದಾಗಿ ಆರ್​ಆರ್​ನಗರ ಕ್ಷೇತ್ರದ ಮತದಾರರು ದೂರು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಬೇರೆಯವರ ವೋಟರ್‌ ಐ.ಡಿ. ಮಾಹಿತಿ ಕೇಳುವುದು ಅಪರಾಧ. ಈ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿಯನ್ನು ನೀಡಲಾಗಿದೆ. ಆರ್.ಆರ್. ನಗರದಲ್ಲಿ ಹಲವು ವರ್ಷಗಳಿಂದ ಅಧಿಕಾರಿಗಳು ಒಂದೇ ಜಾಗದಲ್ಲಿರುವ ಮಾಹಿತಿ ಇದೆ. ಹೀಗಾಗಿ ಕೆಲವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಮಂಜುನಾಥ್​ ಪ್ರಸಾದ್​ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಈ ದೀಪಾವಳಿ ಚೀನಾದಲ್ಲಿ ಕತ್ತಲೋ ಕತ್ತಲು… ₹40 ಸಾವಿರ ಕೋಟಿ ಕಾಣದೇ ಕಂಗಾಲು!

ಇವಳು ನನ್ನ ಮುದ್ದು ಮಗಳೇ… ಆದರೆ ಸತ್ತಿದ್ದಾಳೆ… ನನಗೆ ಬೇಡ… ಭಯಾನಕ ಕೊಲೆಯ​ ಸುತ್ತ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × one =
Remember me
