ಬೆಂಗಳೂರು:ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ, ಪ್ರಸಿದ್ಧ ಸಾಹಿತ್ಯ ವಿಮರ್ಶಕ ಪ್ರೊ. ಎಂ.ಎಚ್​.ಕೃಷ್ಣಯ್ಯನವರು ನಿಧನರಾಗಿದ್ದಾರೆ.
ಉತ್ತಮ ಬರಹಗಾರರು, ಸಂಗೀತಗಾರರು, ಶಿಲ್ಪಿಗಳು, ಕಲಾವಿದರೊಂದಿಗೆ ಬೆರೆತು ಅವರ ಬದುಕನ್ನು ಅರಿತು, ಆ ಅರಿವನ್ನು ತಮ್ಮ ಕೃತಿಗಳ ಮೂಲಕ ಕನ್ನಡ ಸಾಹಿತ್ಯಕ್ಕೆ ಕೊಡುಗೆ ನೀಡಿದ ಕೃಷ್ಣಯ್ಯನವರಿಗೆ 85 ವರ್ಷ ವಯಸ್ಸಾಗಿತ್ತು. ಇಂದು ಮಧ್ಯಾಹ್ನ ಅವರು ಅಗಲಿದ್ದಾರೆ. ಇವರ ಅಂತಿಮ ಸಂಸ್ಕಾರವು ಬೆಂಗಳೂರಿನ ಗಾಯತ್ರಿನಗರದ ಹರಿಶ್ಚಂದ್ರ ಘಾಟ್​ನಲ್ಲಿ ನಾಳೆ (ಶನಿವಾರ) 11 ಗಂಟೆಗೆ ನಡೆಯಲಿದೆ.
1937ರ ಜುಲೈ 21ರಂದು ಮೈಸೂರಿನಲ್ಲಿ ಜನಿಸಿದ ಕೃಷ್ಣಯ್ಯನವರು, ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ ಮತ್ತು ಎಂ. ಎ. ಪದವಿಗಳನ್ನು ಪಡೆದಿದ್ದರು. ಇವರು ಪ್ರಾಧ್ಯಾಪಕರಾಗಿ ಬೆಂಗಳೂರು, ಕೋಲಾರ, ಮಂಗಳೂರು, ಮಾಗಡಿ ಮುಂತಾದೆಡೆ ಕಾರ್ಯನಿರ್ವಹಿಸಿದ್ದಾರೆ. ಸಂಕ್ಷಿಪ್ತ ಕನ್ನಡ ಭಾಷೆಯ ಚರಿತ್ರೆ, ಆರ್. ಎಮ್. ಹಡಪದ್, ರೂಪಶಿಲ್ಪಿ ಬಸವಯ್ಯ, ಶೃಂಗಾರ ಲಹರಿ, ಕಲಾ ದರ್ಶನ, ರಂಗಭೂಮಿ ಮತ್ತು ಸೌಂದರ್ಯ ಪ್ರಜ್ಞೆ ಮುಂತಾದ ಬರಹಗಳು ಹಾಗೂ ಕುವೆಂಪು ಸಾಹಿತ್ಯ : ಚಿತ್ರ ಸಂಪುಟದಂತಹ ಸಂಪಾದನೆಗಳು ಸೇರಿ 30ಕ್ಕೂ ಹೆಚ್ಚು ಇವರ ಕೃತಿಗಳು ಪ್ರಕಟವಾಗಿವೆ.
ಕೃಷ್ಣಯ್ಯನವರಿಗೆ ‘ಶೃಂಗಾರ ಲಹರಿ’ ಕೃತಿಗೆ ಲಲಿತ ಕಲಾ ಅಕಾಡೆಮಿ ಪುರಸ್ಕಾರ, ‘ಸಂಕ್ಷಿಪ್ತ ಕನ್ನಡ ಭಾಷೆಯ ಚರಿತ್ರೆ’ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕುವೆಂಪು ಪ್ರಶಸ್ತಿ ಮುಂತಾದ ಹಲವಾರು ಗೌರವಗಳು ಸಂದಿವೆ.
ಶಿಕ್ಷೆ ವಿಧಿಸಲು ಸಂತ್ರಸ್ತರು ಸಾಯುವ ಮುನ್ನ ನೀಡುವ ಹೇಳಿಕೆಯೇ ಸಾಕು: ಹೈಕೋರ್ಟ್​ನಿಂದ ಮಹತ್ವದ ತೀರ್ಪು

ನೋಂದಣಿಯಾಗದ ವಿಲ್​ಗೆ ಮಾನ್ಯತೆ ಇದೆಯೊ, ಇಲ್ಲವೋ? ಕಾನೂನು ಹೇಳುವುದೇನು ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − fourteen =
Remember me
