ಬೆಂಗಳೂರು :ಬಸವರಾಜ ಬೊಮ್ಮಾಯಿ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ವೇಳೆ ತಿಳಿಸಿದಂತೆಯೇ ರೈತರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿಷ್ಯವೇತನವನ್ನು ಜಾರಿ ಗೊಳಿಸಿದ್ದಾರೆ.
ಈ ಕುರಿತು ಅಧಿಕೃತ ಆದೇಶ ಹೊರಬಿದ್ದಿದೆ. ಕೃಷಿ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ರಫೀ ಅಹಮದ್ ಎಂ.ಎಸ್ ನಡವಳಿಗಳನ್ನು ಹೊರಡಿಸಿದ್ದಾರೆ. ಸಚಿವ ಸಂಪುಟದಲ್ಲಿ ತೆಗೆದುಕೊಂಡಿರುವ ನಿರ್ಣಯದಂತೆ ಈ ಹೊಸ ಶಿಷ್ಯವೇತನ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದಿದ್ದಾರೆ.
ಇದರ ಸಂಪೂರ್ಣ ಡಿಟೇಲ್ಸ್‌ ಹೀಗಿದೆ:
ರೈತರ ಮಕ್ಕಳಿಗೆ ಯಾವ ಕೋರ್ಸ್ ಗೆ ಎಷ್ಟು ಹೊಸ ಶಿಷ್ಯವೇತನ.?
* ಪದವಿಯ ಮುಂಚೆ ಪಿಯುಸಿ, ಐಟಿಐ, ಡಿಪ್ಲೊಮಾ – ವಿದ್ಯಾರ್ಥಿಗಳಿಗೆ ರೂ.2,500, ವಿದ್ಯಾರ್ಥಿನಿಯರಿಗೆ ರೂ.3,000
* ಎಲ್ಲಾ ಬಿಎ, ಬಿಎಸ್ಸಿ, ಬಿಕಾಂ ಇತ್ಯಾದಿ ಹಾಗೂ ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ವೃತ್ತಿಪರ ಕೋರ್ಸ್ ಹೊರತುಪಡಿಸಿ – ವಿದ್ಯಾರ್ಥಿಗಳಿಗೆ ರೂ.5,000. ವಿದ್ಯಾರ್ಥಿನಿಯರಿಗೆ ರೂ.5,500
* ಎಲ್‌ಎಲ್‌ಬಿ, ಪ್ಯಾರಾ ಮೆಡಿಕಲ್, ಬಿ.ಫಾರ್ಮ್, ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ರೂ.7,500, ವಿದ್ಯಾರ್ಥಿನಿಯರಿಗೆ ರೂ.8,000
* ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ರೂ.10,000. ವಿದ್ಯಾರ್ಥಿನಿಯರಿಗೆ ರೂ.11,000
ಷರತ್ತುಗಳು ಹೀಗಿವೆ:
* ವಿದ್ಯಾರ್ಥಿಗಳು ರೈತರ ಮಕ್ಕಳಾಗಿದ್ದು, ಕರ್ನಾಟಕ ರಾಜ್ಯದ ಅನುದಾನದಿಂದ ಪಾವತಿಸುವಂತ ಒಂದು ಶಿಷ್ಯವೇತನಕ್ಕೆ ಮಾತ್ರ ಅರ್ಹರಾಗುತ್ತಾರೆ. ಆದರೆ ಮೆರಿಟ್, ಅರ್ಹತಾ ಪರೀಕ್ಷೆ, ಶೈಕ್ಷಣಿಕ ಪರೀಕ್ಷೆಗಳಲ್ಲಿ ರ್ಯಾಂಕ್‌ ಇತ್ಯಾದಿಗಳ ಆಧಾರದ ಮೇಲೆ ಪಡೆಯುವ ಶಿಷ್ಯವೇತನ, ಪ್ರಶಸ್ತಿ, ಪ್ರತಿಫಲ, ಇವುಗಳನ್ನು ರೈತರ ಮಕ್ಕಳು ಪಡೆದಿದ್ದರೂ, ಈ ಶಿಷ್ಯವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ.
* ರೈತರ ಮಕ್ಕಳ ತಂದೆ-ತಾಯಿ ಇಬ್ಬರು ಕೃಷಿ ಜಮೀನಿನ ಒಡೆಯರಾಗಿದ್ದರೇ, ಈ ಯೋಜನೆಯಲ್ಲಿ ಒಂದು ಶಿಷ್ಯವೇತನಕ್ಕೆ ಮಾತ್ರ ರೈತರ ಮಕ್ಕಳು ಅರ್ಹರಾಗಿರುತ್ತಾರೆ.
* ಈ ಶಿಷ್ಯವೇತನವು ಶಿಕ್ಷಣದ ಯಾವುದೇ ಕೋರ್ಸಿನ ಸೆಮಿಷ್ಟರ್, ಶೈಕ್ಷಣಿಕ ವರ್ಷಗಳಿಗೆ ಮಿತಿಯಾಗಿರತ್ಕದ್ದು.
* ಕೋರ್ಸ್‌ನ ಸೆಮಿಸ್ಟರ್ ನಲ್ಲಿ, ಶೈಕ್ಷಣಿಕ ವರ್ಷದಲ್ಲಿ ಅನುತ್ತೀರ್ಣ ಹೊಂದಿ, ಪುನಹ ಆ ಸೆಮಿಸ್ಟರ್, ಶೈಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸದ ಪುನರಾವರ್ತನೆಯಾದರೇ, ( ಪುನಃ ಪರೀಕ್ಷೆ ತೆಗೆದುಕೊಂಡರೇ ) ವಿದ್ಯಾರ್ಥಿಗಳು ಶಿಕ್ಷವೇತನವನ್ನು ಪಡೆಯಲು ಅರ್ಹರಾಗಿರುವುದಿಲ್ಲ.
* ಈ ಶಿಷ್ಯವೇತನವನ್ನು ಯಾವುದಾದರೂ ಒಂದು ವಿಧದ ಕೋರ್ಸ್‌ಗೆ ನೀಡಲಾಗುವುದು.
ಚಿನ್ನದ ಪದಕವನ್ನು ಮಿಲ್ಕಾಸಿಂಗ್‌ಗೆ ಅರ್ಪಿಸಿದ ನೀರಜ್‌: ಸ್ವರ್ಗದಿಂದ ತಂದೆ ನೋಡುತ್ತಿದ್ದಾರೆಂದು ಕಂಬನಿ ಮಿಡಿದ ಮಗ

ಪ್ರೀತಿಸಿದವನ ಮದ್ವೆಯಾಗಿ ಹೆಣವಾದಳು: ಮೃತದೇಹಕ್ಕಾಗಿ ಐದು ದಿನಗಳಿಂದ ನದಿ ಮುಂದೆ ಹೆತ್ತವರ ಆಕ್ರಂದನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + nineteen =
Remember me
