ಬೆಂಗಳೂರು:ಡಿಜೆಹಳ್ಳಿ, ಕೆಜಿಹಳ್ಳಿ ಸೇರಿದಂತೆ ಇದಾಗಲೇ ಹಲವು ಕಡೆಗಳಲ್ಲಿ ಗಲಭೆ ನಡೆಸುವ ಎಸ್‌ಡಿಪಿಐ ಹಾಗೂ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ತೀವ್ರ ಒತ್ತಡ ಬಂದಿರುವ ಹಿನ್ನೆಲೆಯಲ್ಲಿ, ಇಂದು ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ.
ವಿಷಯದ ಕುರಿತಂತೆ ವಿಸ್ತ್ರೃತ ಚರ್ಚೆ ನಡೆದಿದೆ. ಆದರೆ, ಸಭೆಯಲ್ಲಿ ಯಾವುದೇ ನಿರ್ದಿಷ್ಟ ತೀರ್ಮಾನವನ್ನು ತೆಗೆದುಕೊಂಡಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. ಇವುಗಳ ನಿಷೇಧಕ್ಕೆ ಕುರಿತಂತೆ ಪೊಲೀಸ್‌ ಇಲಾಖೆಯಿಂದ ಹೆಚ್ಚಿನ ಸಾಕ್ಷ್ಯ ಮತ್ತು ಮಾಹಿತಿ ಕೇಳಲಾಗಿದ್ದು, ಅದರ ಆಧಾರದ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು.
ಯಾವುದೇ ಒಂದು ಸಂಘಟನೆ ನಿಷೇಧಿಸಲು ಶಿಫಾರಸು ಮಾಡಬೇಕಾದರೆ ಸಮಗ್ರ ವರದಿ ಬೇಕು. ಒಂದು ಘಟನೆಯನ್ನು ಇಟ್ಟುಕೊಂಡು ನಿಷೇಧ ಮಾಡುವುದು ಸರಿಯಲ್ಲ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯ ಸರಕಾರದ ಮುಂದೆ ಅಂತಹ ಸಮಗ್ರ ವರದಿ ಕೈಸೇರಿಲ್ಲ. ನಮಗೆ ಬರುವ ಮಾಹಿತಿಗಳ ಆಧಾರದ ಮೇಲೆ ಅವುಗಳ ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರದ ಜತೆ ಚರ್ಚಿಸಲಾಗುವುದು ಎಂದು ಮಾಧುಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ:ಬಾಡಿಗೆ ಗಂಡನಿಂದಾಗಿ ಗಲ್ಲುಶಿಕ್ಷೆಗೆ ಗುರಿಯಾದ ನರ್ಸ್‌ ಒಬ್ಬಳ ಕಣ್ಣೀರ ಕಥೆಯಿದು…
ಗಲಭೆಯಲ್ಲಿ ಆಸ್ತಿಪಾಸ್ತಿ ಕಳೆದುಕೊಂಡವರಿಗೆ ಪರಿಹಾರ ನೀಡಲು ಗಲಭೆಕೋರರಿಂದಲೇ ದಂಡ ವಸೂಲಿ ಮಾಡಲಾಗುವುದು. ಗಲಭೆಯಲ್ಲಿ ನೇರವಾಗಿ ಭಾಗಿಯಾದರು ಮತ್ತು ಹಿಂದೆ ನಿಂತು ಪ್ರಚೋದಿಸಿದರಿಂದಲೂ ವಸೂಲಿ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಇನ್ನು ಒಂದು ವಾರದೊಳಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಾಧುಸ್ವಾಮಿ ಹೇಳಿದರು.
ಸಂಘಟನೆಗಳ ನಿಷೇಧ ಮತ್ತು ಗಲಭೆಕೋರರಿಂದ ದಂಡವನ್ನು ವಸೂಲಿ ಮಾಡುವ ಸಂಬಂಧ ಕಾಯ್ದೆಗೆ ಅಗತ್ಯ ತಿದ್ದುಪಡಿ ಮಾಡಲು ಸಿದ್ಧರಿದ್ದೇವೆ. ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದರೆ, ದಂಡ ವಸೂಲಿ ಮಾಡುವ ಬಗ್ಗೆ 1981 ರಲ್ಲಿ ಕಾಯ್ದೆಗೆ ತಿದ್ದುಪಡಿ ಮಾಡಲಾಗಿತ್ತು. ಕ್ಲೇಮ್‌ ಕಮಿಷನರ್‌ ನೇಮಕ ಆದ ಬಳಿಕ ಅವರಿಗೆ ಕಾಯ್ದೆಯನ್ನು ಒದಗಿಸಲಾಗುವುದು. ಈ ಸಂಬಂಧ ಉತ್ತರ ಪ್ರದೇಶ ರಾಜ್ಯದಲ್ಲಿ ಉತ್ತಮ ಕಾಯ್ದೆಯೊಂದನ್ನು ರೂಪಿಸಿದ್ದಾರೆ. ಅದನ್ನೂ ಅಧ್ಯಯನ ನಡೆಸಿ ಅಗತ್ಯವಿದ್ದರೆ, ಕಾಯ್ದೆಗೆ ತಿದ್ದುಪಡಿ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ನನಗೆ ನಾಯಿ ಬೇಕು ನಾಯಿ- ಕಿಮ್‌ನ ಭಯಾನಕ ಆದೇಶ: ಶ್ವಾನಪ್ರಿಯರ ಕಣ್ಣೀರು!

ಬಾಡಿಗೆ ಗಂಡನಿಂದಾಗಿ ಗಲ್ಲುಶಿಕ್ಷೆಗೆ ಗುರಿಯಾದ ನರ್ಸ್‌ ಒಬ್ಬಳ ಕಣ್ಣೀರ ಕಥೆಯಿದು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 17 =
Remember me
