ಬೆಂಗಳೂರು:ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ವಿದ್ಯಾರ್ಥಿಗಳುhttp://www.karresults.nic.inವೆಬ್​ಸೈಟ್​ನಲ್ಲಿ ಫಲಿತಾಂಶ ನೋಡಬಹುದು. ಜತೆಗೆ ಆಯಾಯ ಕಾಲೇಜುಗಳಲ್ಲೂ ಫಲಿತಾಂಶ ಪ್ರಕಟವಾಗಲಿದೆ.
ಪೂರಕ ಪರೀಕ್ಷೆಗೆ ಒಟ್ಟು 1,85,415 ವಿದ್ಯಾರ್ಥಿ/ವಿದ್ಯಾರ್ಥಿನಿಯರು ಹೆಸರು ನೋಂದಾಯಿಸಿಕೊಂಡಿದ್ದು, 1,75,905 ವಿದ್ಯಾರ್ಥಿ/ವಿದ್ಯಾರ್ಥಿನಿಯರು ಹಾಜರಾಗಿದ್ದರು. 65,233 ಮಕ್ಕಳು ಉತ್ತೀರ್ಣರಾಗಿದ್ದಾರೆ. ಇವರ ಪೈಕಿ 36,637 ವಿದ್ಯಾರ್ಥಿಗಳು ಹಾಗೂ 28,596 ವಿದ್ಯಾರ್ಥಿನಿಯರು.
ತೇರ್ಗಡೆಯಾಗಿರುವವರ ಶೇಕಡಾವಾರು ಫಲಿತಾಂಶ 37.08. ಈ ಪೈಕಿ ವಿದ್ಯಾರ್ಥಿಗಳ ಸಂಖ್ಯೆ ಶೇ.34.91 ಹಾಗೂ ವಿದ್ಯಾರ್ಥಿನಿಯರು ಶೇ.40.30. ನಗರ ಪ್ರದೇಶದಲ್ಲಿ ಶೇ.37.28ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ, ಗ್ರಾಮಾಂತರ ಪ್ರದೇಶದಲ್ಲಿ ಉತ್ತೀರ್ಣರಾದವರ ಶೇಕಡಾವಾರು ಸಂಖ್ಯೆ 36.36.
ಮರುಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಪಿಯು ಮಂಡಳಿಯು ಈ ಕೆಳಕಂಡ ಸೂಚನೆಗಳನ್ನು ನೀಡಿದೆ:
1) ಮರುಮೌಲ್ಯಮಾಪನದಲ್ಲಿ ನಿಗದಿಪಡಿಸಿರುವ ಅಂಕಗಳಿಗಿಂತ ಹೆಚ್ಚಿನ ಅಥವಾ ಕಡಿಮೆ ಅಂಕಗಳು ಬಂದಲ್ಲಿ, ಅಂಕಗಳೊಂದಿಗೆ ಫಲಿತಾಂಶವನ್ನು ಪರಿಷ್ಕರಿಸಿ ಪ್ರಕಟಿಸಲಾಗುವುದು. ಯಾವುದೇ ಕಾರಣಕ್ಕೂ ಈ ಮೊದಲು ಪಡೆದ ಅಂಕಗಳನ್ನು ಮರುಸ್ಥಾಪಿಸಲು ವಿದ್ಯಾರ್ಥಿಗೆ ಅವಕಾಶ ಇರುವುದಿಲ್ಲ.2) ಮರುಮೌಲ್ಯಮಾಪನದ ಬಗ್ಗೆ ಮರುಮೌಲ್ಯಮಾಪಕರ ಸಮಿತಿ ತೆಗೆದುಕೊಂಡ ನಿರ್ಧಾರವೇ ಅಂತಿಮ. ಇದರ ಮೇಲೆ ಮರು ಪರಿಶೀಲನೆ ಅಥವಾ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ.3) ಮರುಮೌಲ್ಯಮಾಪನದ ಫಲಿತಾಂಶವನ್ನು ಇಲಾಖೆಯ ವೆಬ್​ಸೈಟ್​http://pue.karnataka.gov.inಪ್ರಕಟಿಸಲಾಗುವುದು.4) ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದಲ್ಲಿ ಮರುಎಣಿಕೆಗೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.5) ಅಂಕಗಳ ಮರುಎಣಿಗೆಗೆ ಶುಲ್ಕ ಇರುವುದಿಲ್ಲ. ಮರುಎಣಿಕೆ ಫಲಿತಾಂಶವನ್ನು ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುವುದು.6) ಮರು ಎಣಿಕೆ ಮತ್ತು ಮರುಮೌಲ್ಯಮಾಪನ ಕಾರ್ಯ ಪೂರ್ಣಗೊಂಡ ನಂತರ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಪ್ರತಿಯನ್ನು ಡಿಜಿಟಲ್​ ಫಾರ್ಮ್ಯಾಟ್​ ಮೂಲಕ ಡಿಜಿಲಾಕರ್​ನಲ್ಲಿಯೂ ಪಡೆಯಬಹುದಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಿವರವಾದ ಸುತ್ತೋಲೆಯನ್ನು ಇಲಾಖೆ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗಿದೆ.7) 2022ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಮರುಮೌಲ್ಯಮಾಪನ ಉತ್ತರ ಪತ್ರಿಕೆಗಳ ಪ್ರತಿ ಪಡೆಯಲು, ಮರುಮೌಲ್ಯಮಾಪನ ಮತ್ತು ಮರು ಎಣಿಕೆಗಾಗಿ ಅರ್ಜಿ ಸಲ್ಲಿಸುವ ಬಗ್ಗೆ ಇಲಾಖೆ ವೆಬ್​ಸೈಟ್​ ನೋಡಬಹುದು.8) ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳ ಉತ್ತೀರ್ಣ ಪ್ರಮಾಣ ಪತ್ರಗಳನ್ನು ಆಯಾ ಕಾಲೇಜುಗಳಿಗೆ ಮರು ಎಣಿಕೆ ಮತ್ತು ಮರುಮೌಲ್ಯಮಾಪನ ಕಾರ್ಯ ಪೂರ್ಣಗೊಂಡ ನಂತರ ಕಳುಹಿಸಿಕೊಡಲಾಗುವುದು.9) ಇಲಾಖೆಯ ಸಹಾಯವಾಣಿ 080-23083860/ 23083864
ಜ್ಞಾನವಾಪಿ ಮಸೀದಿಯಲ್ಲಿ ಶೃಂಗಾರ ಗೌರಿ, ಶಿವಲಿಂಗ: ವಿಚಾರಣೆ ನಡೆಯಲಿದೆಯೆ? ಎಲ್ಲರ ಚಿತ್ತ ಕೋರ್ಟ್​ನತ್ತ- ಬಿಗಿ ಬಂದೋಬಸ್ತ್​

ರೈತರ ನೆರವಿಗೆ ಧಾವಿಸಿದ ಸರ್ಕಾರ: ಖರೀದಿಸುವ ಹಾಲಿನ ದರದಲ್ಲಿ ಹೆಚ್ಚಳ? ಗ್ರಾಹಕರಿಗಿಲ್ಲ ಹೊರೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × 5 =
Remember me
