ಬೆಂಗಳೂರು:ಡಾ.ರಾಜ್ ಕುಮಾರ್ ಅಭಿನಯದ ‘ದೇವತಾ ಮನುಷ್ಯ’ ಸೇರಿದಂತೆ ಕನ್ನಡದಲ್ಲಿ ಅನೇಕ ಚಿತ್ರಗಳಲ್ಲಿ ನಟಿಸಿರುವ ಹಿರಿಯ ನಟ ಉದಯ್ ಹುತ್ತಿನಗದ್ದೆ (62) ಮೃತಪಟ್ಟಿದ್ದಾರೆ.
ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ವಾಸವಾಗಿದ್ದ ಅವರು ರಾಜಾಜಿನಗರದ ಬಾಷ್ಯಂ ಸರ್ಕಲ್‌ನಲ್ಲಿ ಫೋಟೋಗ್ರಫಿ ಸ್ಟುಡಿಯೋ ನಡೆಸುತ್ತಿದ್ದರು. ಉಸಿರಾಟದ ಸಮಸ್ಯೆಯಿಂದ ಇವರು ಬಳಲುತ್ತಿದ್ದರು.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಬಸರಿಕಟ್ಟೆ ಗ್ರಾಮದವರಾದ ಉದಯ್, ಮೈಸೂರು ಹಾಗೂ ಬೆಂಗಳೂರಿನಲ್ಲಿ ಶಿಕ್ಷಣ ಪಡೆದವರು. ಡಾ.ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಶ್, ಡಾ. ವಿಷ್ಣುವರ್ಧನ್ ಸೇರಿದಂತೆ ಅನೇಕ ಹಿರಿಯ ಕಲಾವಿದರ ಜೊತೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ಅಲ್ಲದೇ, ಅಭಿನಯ ತರಂಗ ನಟನಾ ಶಾಲೆಯಲ್ಲಿ ತರಬೇತಿ ಪಡೆದು, ರಂಗಕರ್ಮಿ ಕೂಡ ಆಗಿದ್ದರು. ಡಾ.ರಾಜ್‌ಕುಮಾರ್ ಅವರು ಅಭಿನಯಿಸಿದ್ದ ‘ದೇವತಾ ಮನುಷ್ಯ’ ಚಿತ್ರದಲ್ಲಿ ಸುಧಾರಾಣಿ ಅವರ ಜೋಡಿಯಾಗಿ ಉದಯ್ ಹುತ್ತಿನಗದ್ದೆ ನಟಿಸಿದ್ದರು. ತಮ್ಮ ಮನೋಜ್ಞ ಅಭಿನಯದಿಂದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದರು.
1987ರಲ್ಲಿ ಆರಂಭ ಸಿನಿಮಾದಲ್ಲಿ ನಾಯಕ ನಟನಾಗಿ ಮಿಂಚಿದ್ದ ಉದಯ್ , ಜಯಭೇರಿ, ಅಮೃತ ಬಿಂದು, ಕರ್ಮ, ಉಂಡುಹೋದ ಕೊಂಡಹೋದ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ‘ಆರಂಭ’ ಸಿನಿಮಾದ ಮೂಲಕ 1980ರ ದಶಕದ ಕೊನೆಯಲ್ಲಿ ಇವರು ನಾಯಕ ನಟರಾಗಿಯೂ ನಟಿಸಿದ್ದಾರೆ. ನಂತರ ಚಿತ್ರರಂಗದಿಂದ ದೂರವಾಗಿ ಚಿಕ್ಕಮಗಳೂರಿನಲ್ಲಿ ಕಾಫಿ ಎಸ್ಟೇಟ್​ನಲ್ಲಿ ತೊಡಗಿಸಿಕೊಂಡಿದ್ದರು.
ಇವರ ನಿಧನಕ್ಕೆ ಸಿನಿ ಕ್ಷೇತ್ರದ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
ಜೈಲಿಗೆ ಕರೆದೊಯ್ಯುವಾಗ ಕಳ್ಳ-ಪೊಲೀಸ್​ ಫ್ರೆಂಡ್​ಷಿಪ್​! ಜೆಸ್ಕಾಂ ಅಧಿಕಾರಿಯ ಭೀಕರ ಕೊಲೆ ಕೇಸ್​ ಬೆಳಕಿಗೆ!

ಸ್ನೇಹಿತೆಯರು ಇಲ್ಲದಾಗ ನೇಣು ಬಿಗಿದುಕೊಂಡು ಟೆಕ್ಕಿ ಆತ್ಮಹತ್ಯೆ: ಕಾರಣ ನಿಗೂಢ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − three =
Remember me
