ಬೆಂಗಳೂರು:ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರಿಗೆ ಸರ್ಕಾರದ ವತಿಯಿಂದ ನೀಡುವ ಪ್ರಶಸ್ತಿಗೆ ಆರು ಜನ ಹಾಗೂ ಒಂದು ಸಂಸ್ಥೆಯನ್ನು ಆಯ್ಕೆ ಮಾಡಲಾಗಿದೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್​ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ (ಸೆ.30) ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು.
ಮಡಿಕೇರಿಯ ಎಂ.ಎಂ. ಬೋಪಯ್ಯ (ಶಿಕ್ಷಣ), ಧಾರವಾಡದ ಡಾ. ಬಿ.ಕೆ. ಬಸವರಾಜ ರಾಜಋಷಿ (ಸಾಹಿತ್ಯ), ಬಾಗಲಕೋಟೆಯ ವೆಂಕಪ್ಪ ಅಂಬಾಜಿ ಸುಗತೀಕರ್​ (ಕಲೆ), ಕೊಪ್ಪಳದ ಡಾ. ಕೆ.ಜಿ. ಕುಲಕರ್ಣಿ (ಸಮಾಜಸೇವೆ), ಮೈಸೂರಿನ ವಿಜಯ ರಮೇಶ್​ (ಕ್ರೀಡೆ), ಬೆಂಗಳೂರಿನ ಡಾ. ಕೋಡೂರು ವೆಂಕಟೇಶ್​ (ಕಾನೂನು) ಮತ್ತು ಶಿವಮೊಗ್ಗದ ಸಾವಿತ್ರಮ್ಮ ರಾಮಶರ್ಮ ಸೇವಾ ಟ್ರಸ್ಟ್​ನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ಒಂದು ಲಕ್ಷ ರೂ. ನಗದನ್ನು ಒಳಗೊಂಡಿದೆ. ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡಿದ ಹಿರಿಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಸಮಿತಿ ರಚನೆ ಮಾಡಲಾಗಿತ್ತು. ಆ ಸಮಿತಿ ಅರ್ಹರನ್ನು ಆಯ್ಕೆ ಮಾಡಿದೆ ಎಂದು ಸಚಿವ ಹಾಲಪ್ಪ ಆಚಾರ್​ ವಿವರಿಸಿದರು.
ಅನುದಾನ ಹೆಚ್ಚಳರಾಜ್ಯದ 35 ವೃದ್ಧಾಶ್ರಮಗಳಿಗೆ ಸರ್ಕಾರದ ವತಿಯಿಂದ ನೀಡುತ್ತಿದ್ದ ವಾರ್ಷಿಕ 8 ಲಕ್ಷ ರೂ.ಗಳ ಅನುದಾನವನ್ನು 12 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. 65 ವರ್ಷ ಮೀರಿದ 41.61 ಲಕ್ಷ ಹಿರಿಯ ನಾಗರಿಕರಿಗೆ ಮಾಸಾಶನವನ್ನು 1200 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದರು.
ಮೋಹನ್ ಭಾಗವತ್​ರನ್ನು ‘ರಾಷ್ಟ್ರಪಿತ’, ‘ರಾಷ್ಟ್ರ ಋಷಿ’ ಎಂದು ಬಣ್ಣಿಸಿದ್ದ ಇಲ್ಯಾಸಿಗೆ ಜೀವ ಬೆದರಿಕೆ!

ಇತಿಹಾಸ ಬರೆದ ಹು-ಧಾ ಮೇಯರ್​: ಬ್ರಿಟಿಷ್​ ಕಾಲದ ಸಂಪ್ರದಾಯಕ್ಕೆ ಬೈ ಬೈ- ಹೊಸತನಕ್ಕೆ ಮುನ್ನುಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
