ಬೆಂಗಳೂರು:ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ದುಃಖದಲ್ಲಿ ಭಾಗಿಯಾಗಿ, ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ. ಅಂತಹ ಮಕ್ಕಳೊಂದಿಗೆ ನಾವಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಿರುವ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ.
ಕೋವಿಡ್-19 ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳು ಹಾಗೂ ಅವರನ್ನು ಪಾಲನೆ ಮಾಡುತ್ತಿರುವ ಪಾಲಕರ ಜೊತೆಗೆ ಗೂಗಲ್ ಮೀಟ್ ಮೂಲಕ ವಿಡಿಯೊ ಸಂವಾದ ನಡೆಸಿ, ಅವರಿಗೆ ಸಾಂತ್ವನ ಹೇಳಿ, ಆತ್ಮಸ್ಥೈರ್ಯ ತುಂಬಿ, ಅವರ ಮನಸ್ಸಿನ ನೋವು, ಸಮಸ್ಯೆಗಳನ್ನು ಮನಗಂಡು, ಸರ್ಕಾರದಿಂದ ನೀಡಲಾಗುವ ನೆರವಿನ ಕುರಿತು ಮಾಹಿತಿ ನೀಡಿದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಂದೆ ತಾಯಿಗಳನ್ನು ಕಳೆದುಕೊಂಡ 19 ಮಕ್ಕಳ ಜೊತೆಗೆ ಸಚಿವರು ಸುಮಾರು ಮೂರು ಗಂಟೆಗಳ ಕಾಲ ಪ್ರತಿಯೊಬ್ಬ ಮಗುವಿನ ಜೊತೆಗೂ ವಯಕ್ತಿಕವಾಗಿ ಚರ್ಚೆ ನಡೆಸಿ, ತಂದೆ ತಾಯಿಗಳನ್ನು ಕಳೆದುಕೊಂಡ ಮಕ್ಕಳ ಪೋಷಕರ ಕಷ್ಟಗಳ ಬಗ್ಗೆ ಮಾಹಿತಿ ಪಡೆದರು.
ಕಷ್ಟದ ಸಂದರ್ಭದಲ್ಲಿ ಧೃತಿಗೆಡದೆ ಜೀವನದ ಸವಾಲುಗಳನ್ನು ಎದುರಿಸಿ ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಬೆಳೆಯುವಂತೆ ಮಕ್ಕಳಿಗೆ ಸಚಿವರು ಕಿವಿ ಮಾತು ಹೇಳಿದರು. ಈ ಕುರಿತು ಮಾತನಾಡಿರುವ ಸಚಿವರು ಪೋಷಕರನ್ನು ಕಳೆದುಕೊಂಡ ಆ ಮಕ್ಕಳ ನೋವು ಕಂಡು ಮನಸ್ಸು ಭಾರವಾಯಿತು. ಹೀಗಾಗಿ ಇಂತಹ ಮಕ್ಕಳಿಗೆ ಯಾವುದೇ ರೀತಿಯಲ್ಲಿ ಪೋಷಕರು ಇಲ್ಲ ಎಂಬ ಕೊರಗು ಉಂಟಾಗಬಾರದು ಎಂಬ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ. ಈಗಾಗಲೇ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ‘ಬಾಲ ಸೇವಾ’ ಯೋಜನೆಯನ್ನು ಘೋಷಿಸಿದ್ದಾರೆ. ಸರ್ಕಾರದಿಂದ ಸಿಗಬೇಕಾಗಿದ್ದ ಸೌಲಭ್ಯಗಳನ್ನು ಅತೀ ಶೀಘ್ರದಲ್ಲಿ ನೀಡುತ್ತೇವೆ. ಮುಂದೇನಾದರೂ ಅಗತ್ಯವಿದ್ದಲ್ಲಿ ಅಗತ್ಯ ನೆರವು ನೀಡಲು ಸರ್ಕಾದ ಸದಾ ಸಿದ್ಧವಿದೆ ಎಂದು ಹೇಳಿದರು.
ಜಾಗೃತಿ ಕಾರ್ಯಕ್ರಮ:ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಬಾಲ ಸೇವಾ ಯೋಜನೆಯ ಬಗ್ಗೆ ಪ್ರತಿ ಗ್ರಾಮ ಮಟ್ಟದಲ್ಲಿಯೂ ಎಲ್ಲರಿಗೂ ತಲುಪುವಂತೆ ಮಾಡಲು ಎಲ್ಲ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಲಾಗುವುದು. ಸಾಮಾಜಿಕ ಜಾಲತಾಣ ಹಾಗೂ ಇತರ ಮಾಧ್ಯಮಗಳ ಮೂಲಕ ಜನರಿಗೆ ಮಾಹಿತಿ ಒದಗಿಸಲು ತೀರ್ಮಾನಿಸಲಾಗಿದೆ.
ತಂದೆ ತಾಯಿ ಕಳೆದುಕೊಂಡ ಮಕ್ಕಳಿಗೆ ಘೋಷಣೆ ಮಾಡಿರುವ ಮಾಸಿಕ 3500 ರೂ. ನೀಡುವುದು. 10 ವರ್ಷದ ಒಳಗಿನ ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ವಸತಿ ಶಾಲೆಗಳಲ್ಲಿ ಅ್ಯವಸ್ಥೆ ಕಲ್ಪಿಸುವುದು ಹಾಗೂ 21 ವರ್ಷ ಪೂರೈಸಿರುವ ತಂದೆ ತಾಯಿಗಳನ್ನು ಕಳೆದುಕೊಂಡ ಹೆಣ್ಣು ಮಕ್ಕಳಿಗೆ 1 ಲಕ್ಷ ರೂ. ಸಹಾಯಧನವನ್ನು ನೇರವಾಗಿ ಅವರ ಅಕೌಂಟ್ ಗೆ ತಲುತಲುಪಿಸಲು ಇಲಾಖೆಯಿಂದ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಯೋಜನೆ ಅನುಷ್ಠಾನದಲ್ಲಿ ಯಾವುದೇ ರೀತಿಯ ಮಧ್ಯವರ್ತಿಗಳ ಹಾವಳಿಯಾಗದಂತೆ ಕ್ರಮ ವಹಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕಿ ಪಲ್ಲವಿ ಆಕೃತಿ, ನೋಡಲ್ ಅಧಿಕಾರಿಗಳಾದ ಮೋಹನರಾಜ, ವಿವಿಧ ಜಿಲ್ಲೆಗಳ ಡಿ.ಸಿ.ಪಿ.ಓ. ಹಾಗೂ ಸಿ.ಡಿ.ಪಿ.ಓ ಅಧಿಕಾರಿಗಳು ಹಾಜರಿದ್ದರು.
ಆಯುರ್ವೇದ ಕರೊನಾ ಔಷಧಕ್ಕೆ ವಿದೇಶಿಗರ ದೌಡು- ಆನ್‌ಲೈನ್‌ ಮೂಲಕ ದೇಶಾದ್ಯಂತ ಪೂರೈಕೆಗೆ ಮುಂದಾದ ಸರ್ಕಾರ

ಪ್ರಧಾನಿಜೀ… ಪರೀಕ್ಷೆ ಕ್ಯಾನ್ಸಲ್‌ ಆದ್ರೂ ಅಡ್ಡಿಲ್ಲ, ನೇಹಾಳನ್ನು ಸೀರೆಯಲ್ಲಿ ನೋಡೋ ಆಸೆ ಈಡೇರಿಸಿ ಪ್ಲೀಸ್‌. ಪ್ಲೀಸ್‌…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
