ಶಿವಮೊಗ್ಗ:ಶಿವಮೊಗ್ಗ ಹೊರವಲಯದ ಹುಣಸೋಡು ಗ್ರಾಮದ ಬಳಿ ಇರುವ ಕ್ರಷರ್​ನಲ್ಲಿ ನಿನ್ನೆ ರಾತ್ರಿ 10.20ರ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸಂಭವಿಸಿರುವ ಸ್ಫೋಟಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.
ಈ ಘಟನೆಯಲ್ಲಿ ಬಿಹಾರ ಮೂಲದ 8 ಕಾರ್ವಿುಕರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಿರುವ ಸಾಧ್ಯತೆ ಇದೆ ಎನ್ನಲಾಗಿದೆ.ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಹೇಳಿದ್ದಾರೆ.
ಈ ಮಧ್ಯೆ, ಐದು ಮೃತದೇಹಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ. ಇಬ್ಬರ ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿದೆ. ಸದ್ಯ ಐವರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿದ್ದು, ಉಳಿದವರ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಏನಿದು ದುರಂತ?:ಶಿವಮೊಗ್ಗದ ಸಮೀಪ ಕ್ರಷರ್ ಸ್ಫೋಟಕ್ಕೆ 8 ಕಾರ್ವಿುಕರು ಬಲಿ- ಮೃತದೇಹಗಳು ಛಿದ್ರ…
ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ. (1/2)
— B.S.Yediyurappa (@BSYBJP)January 22, 2021

ಕೇಂದ್ರ ಕಲ್ಲಿದ್ದಲು ಸಚಿವ ಪಹ್ಲಾದ್‌ ಜೋಶಿ ಕೂಡ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದಲ್ಲಿ ಡೈನಾಮೈಟ್‌ ಲಾರಿ ಸ್ಫೋಟಗೊಂಡು 6ಕ್ಕೂ ಹೆಚ್ಚು ಕಾರ್ಮಿಕರುಸಾವನ್ನಪ್ಪಿದ್ದು ದುರದೃಷ್ಟಕರ. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಕುಟಂಬದವರಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ.ಈ ದುರ್ಘಟನೆಯಲ್ಲಿ ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.
— Pralhad Joshi (@JoshiPralhad)January 22, 2021

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × 4 =
Remember me
