ಶಿವಮೊಗ್ಗ: ನಿನ್ನೆ (ಸೋಮವಾರ) ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ್​ ಸಾವರ್ಕರ್ ಹಾಗೂ ಟಿಪ್ಪು ಸುಲ್ತಾನ್​ ಫೋಟೋ ವಿವಾದ ಭುಗಿಲೆದ್ದು, ಇಬ್ಬರು ಹಿಂದೂ ಯುವಕರಿಗೆ ಚಾಕು ಇರಿದಿರುವ ಘಟನೆ ನಡೆದಿತ್ತು. ವೀರ್​ ಸಾವರ್ಕರ್​ ಅವರ ಫೋಟೋ ಅನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಹಿಂದೂ ಸಂಘಟನೆಯ ಕೆಲವು ಯುವಕರು ಅಳವಡಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಆ ಫೋಟೋ ಕಿತ್ತೆಸೆದು ಅಲ್ಲಿ ಟಿಪ್ಪು ಫೋಟೋ ಇಡಲು ಮುಂದಾಗಿದ್ದೇ ಈ ಘಟನೆಗೆ ಕಾರಣವಾಗಿತ್ತು.
ಈ ಫೋಟೋ ವಿವಾದ ಹಿಂದೂ ಮತ್ತು ಮುಸ್ಲಿಂ ಸಮುದಾಯದ ನಡುವೆ ಶಿವಮೊಗ್ಗದಲ್ಲಿ ಕಿಚ್ಚು ಹಚ್ಚಿಸಿ ಹಿಂಸಾಚಾರಕ್ಕೆ ತಿರುಗಿತ್ತು. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ನಿಷೇಧಾಜ್ಱಎ ಜಾರಿ ಮಾಡಲಾಗಿತ್ತು. ಇದರ ಹೊರತಾಗಿಯೂ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ಮನೆಗೆ ಹೊರಟಿದ್ದ ಪ್ರೇಮ್​ ಸಿಂಗ್​ ಮತ್ತು ಪ್ರವೀಣ್​ ಕುಮಾರ್​ ಎನ್ನುವವರಿಗೆ ಚಾಕುವಿನಿಂದ ಇರಿದು ಇನ್ನಷ್ಟು ಹಿಂಸಾಚಾರಕ್ಕೆ ಪ್ರಚೋದನೆ ನೀಡಿರುವ ಘಟನೆ ನಡೆದಿತ್ತು.
ಈ ಘಟನೆಗೆ ಸಂಬಂಧಿಸಿದಂತೆ ಚಾಕು ಇರಿದಿರುವ ಇದುವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರಿಗಾಗಿ ಶೋಧ ಕಾರ್ಯ ನಡೆದಿದೆ. ಈ ಕುರಿತು ಶಿವಮೊಗ್ಗ ಎಸ್ಪಿ ಲಕ್ಷ್ಮೀಪ್ರಸಾದ್ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗ ಜೆಸಿ ನಗರದ ನದೀಮ್ (25) ಹಾಗೂ ಬುದ್ಧ ನಗರದ ಅಬ್ದುಲ್ ರೆಹಮಾನ್ (25), ಜಬೀವುಲ್ಲಾ ಮತ್ತು ಇನ್ನೋರ್ವ ಆರೋಪಿಯನ್ನು ಇದಾಗಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪೈಕಿ ಜಬೀವುಲ್ಲಾ ಪೊಲೀಸರ ಮೇಲೆ ಹಲ್ಲೆ ಮಾಡಿ ಓಡಿಹೋಗಲು ಯತ್ನಿಸುತ್ತಿದ್ದಾಗ ಆತ್ಮ ರಕ್ಷಣೆಗಾಗಿ ಆತನ ಕಾಲಿಗೆ ಗುಂಡೇಟು ಹಾಕಲಾಗಿದೆ. ಈತನಿಗೆ ಈಗಾಗಲೇ ಚಿಕಿತ್ಸೆ ನೀಡಲಾಗಿದ್ದು, ಜೈಲಿನ ವಾರ್ಡ್​ಗೆ ಶಿಫ್ಟ್​ ಮಾಡಲಾಗಿದೆ.
ಆರೋಪಿಗಳ ಹಿನ್ನೆಲೆ, ಅವರು ಯಾವ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಾರೆ ಎಂಬುದು ತನಿಖೆ ನಂತರವಷ್ಟೇ ತಿಳಿದುಬರಲಿದೆ. ಅವರ ವಿರುದ್ಧ ಅವರ ವಿರುದ್ಧ ದಾಖಲಿಸುವುದರ ಜೊತೆಗೆ ಆಸ್ತಿ ಮುಟ್ಟುಗೋಲು ಹಾಕುವ ವಿಚಾರವಾಗಿ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವ ಯೋಚನೆ ಪೊಲೀಸ್​ ಇಲಾಖೆಗಿದೆ.
ಶಿವಮೊಗ್ಗದಲ್ಲಿ ಮೂರು ದಿನ ನಿಷೇಧಾಕ್ಷೆ ಜಾರಿ ಮಾಡಲಾಗಿದೆ. ಮೂರು ದಿನಗಳವರೆಗೆ 40 ವರ್ಷ ಕಡಿಮೆ ವಯಸ್ಸಿನ ಗಂಡಸರನ್ನು ಹಿಂಬದಿಯಲ್ಲಿ ಬೈಕ್​ನಲ್ಲಿ ಕೂರಿಸಿಕೊಂಡು ಸಂಚರಿಸುವಂತಿಲ್ಲ ಎಂದು ಎಸ್ಪಿ ಲಕ್ಷ್ಮೀಪ್ರಸಾದ್ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಎಲ್ಲೆಡೆ ವಾಹನಗಳ ತಪಾಸಣೆ ನಡೆಸುತ್ತೇವೆ. ಭದ್ರತೆಗಾಗಿ 15 ಪ್ಲಟೂನ್​ ಬಂದಿದ್ದು, ಇನ್ನೂ 6 ಪ್ಲಟೂನ್ ಬರಲಿವೆ. ಹೆಚ್ಚುವರಿಯಾಗಿ ಓರ್ವ ಎಸ್​ಪಿ, ಮೂವರು ಹೆಚ್ಚುವರಿ ಎಸ್​ಪಿ ಸಿಐಡಿಯ ಮೂವರು ಡಿವೈಎಸ್​ಪಿ, 10 ಇನ್ಸ್​ಪೆಕ್ಟರ್ ಅವರನ್ನು​ ನಿಯೋಜನೆ ಮಾಡಲಾಗಿದೆ.(ದಿಗ್ವಿಜಯ ನ್ಯೂಸ್​)
ಶಿವಮೊಗ್ಗದಲ್ಲಿ ಚಾಕು ಇರಿತ: ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಹೋಗಿದ್ದ ಆರೋಪಿಗೆ ಗುಂಡೇಟು

ಮನೆ ಮನೆಗೆ ಭಾರತದ ಧ್ವಜ ಹಂಚಿದ್ದಕ್ಕೆ ಕುಟುಂಬಕ್ಕೆ ಕೊಲ್ಲುವ ಬೆದರಿಕೆ: ಗೋಡೆಗೆ ಅಂಟಿಸಿದ ಪತ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − five =
Remember me
