ಬೆಂಗಳೂರು:ಬೆಂಗಳೂರಿನ ಯಶವಂತಪುರ ಹಾಗೂ ಶಿವಮೊಗ್ಗ ನಡುವೆ ಆಗಸ್ಟ್​ 10ರಿಂದ ನೈರುತ್ಯ ರೈಲ್ವೆ ಬೆಂಗಳೂರು ವಿಭಾಗವು ಹೊಸದೊಂದು ರೈಲು ಸಂಚಾರ ಆರಂಭಿಸಲಿದೆ.ನಿತ್ಯವೂ ಈ ರೈಲು ಯಶವಂತಪುರ-ಶಿವಮೊಗ್ಗ ನಡುವೆ ಸಂಚಾರ ನಡೆಸಲಿದ್ದು, ಈ ಕುರಿತು ರೈಲ್ವೆ ಇಲಾಖೆ ಟ್ವೀಟ್​ ಮೂಲಕ ಮಾಹಿತಿ ನೀಡಿದೆ. ರೈಲಿನ ಸಂಖ್ಯೆ 07357/07358. ಇದು ಯಶವಂತಪುರ-ಶಿವಮೊಗ್ಗ ಟೌನ್-ಯಶವಂತಪುರ ನಡುವೆ ಪ್ರತಿನಿತ್ಯ ಸಂಚಾರ ನಡೆಸಲಿದ್ದು, ಆಗಸ್ಟ್ 10 ರಿಂದ ಕಾರ್ಯಾರಂಭ ಮಾಡಲಿದೆ ಎಂದು ಇಲಾಖೆ ಹೇಳಿದೆ.ಎಲ್ಲೆಲ್ಲಿ ನಿಲುಗಡೆ:ಯಶವಂತಪುರದಿಂದ ಹೊರಡುವ ರೈಲು ತುಮಕೂರು, ತಿಪಟೂರು, ಅರಸೀಕೆರೆ, ಕಡೂರು, ಬೀರೂರು, ತರೀಕೆರೆ, ಭದ್ರಾವತಿ ನಿಲ್ದಾಣಗಳಲ್ಲಿ ನಿಲ್ಲಲಿದೆ. ನಂತರ ಶಿವಮೊಗ್ಗ ಟೌನ್​ ತಲುಪಲಿದೆ. ಶಿವಮೊಗ್ಗದಿಂದ ಮರಳಿ ಯಶವಂತಪುರಕ್ಕೆ ಬರುವಾಗಲೂ ಇದೇ ಸ್ಥಳಗಳಲ್ಲಿ ನಿಲುಗಡೆ ಇದೆ.ಯಶವಂತಪುರ ರೈಲು ನಿಲ್ದಾಣದಿಂದ ಬೆಳಗ್ಗೆ 9.15ಕ್ಕೆ ರೈಲು ಹೊರಡಲಿದ್ದು, ಮಧ್ಯಾಹ್ನ 2.30ಕ್ಕೆ ಶಿವಮೊಗ್ಗ ಟೌನ್​ ನಿಲ್ದಾಣವನ್ನು ತಲುಪಲಿದೆ. ಪುನಃ ಮಧ್ಯಾಹ್ನ 3.30ಕ್ಕೆ ಶಿವಮೊಗ್ಗದಿಂದ ಹೊರಟು ರಾತ್ರಿ 9.00ಗಂಟೆಗೆ ಯಶವಂತಪುರ ನಿಲ್ದಾಣವನ್ನು ತಲುಪಲಿದೆ.ಯಾವ ಸ್ಟೇಷನ್‌ನಲ್ಲಿ ಎಷ್ಟು ಹೊತ್ತು ನಿಲ್ಲಲಿದೆ? ಇಲ್ಲಿ ವಿವರ ಇದೆ ನೋಡಿ:

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 × one =
Remember me
