ಬೆಂಗಳೂರು:ಶಾಲಾ ಮಕ್ಕಳಿಗೆ ಶೂಸ್​ ಮತ್ತು ಸಾಕ್ಸ್ ಹಂಚಿಕೆಗೆ 132 ಕೋಟಿ ರೂ.ಗಳನ್ನು ಒದಗಿಸಿ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಮವಸ್ತ್ರದ ವಿಚಾರದಲ್ಲಿ ಸರ್ಕಾರ ಈಗಾಗಲೇ ಸಮವಸ್ತ್ರಕ್ಕೆ ಅನುಮೋದನೆ ನೀಡಿದೆ. ಸಮವಸ್ತ್ರ ತಯಾರಾಗಲು ಸ್ವಲ್ಪ ಸಮಯ ಹಿಡಿಯುತ್ತದೆ. ನಂತರ ವಿತರಣೆಯಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರಿಗೆ ಸಿಎಂ ಬೊಮ್ಮಾಯಿ ಟಾಂಗ್​ ನೀಡಿದ್ದಾರೆ. ಶಾಲಾ ಮಕ್ಕಳಿಗೆ ಶೂಸ್​, ಸಾಕ್ಸ್ ಕೊಡಲು ಸರ್ಕಾರದ ಬಳಿ ಹಣವಿಲ್ಲದಿದ್ದರೇ, ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಬಳಿ ಭಿಕ್ಷೆ ಬೇಡಿ ಹಣ ಸಂಗ್ರಹಿಸಿ ನೀಡುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ, ಈ ಹಿಂದೆ ಕೋವಿಡ್ ಸಮಯದಲ್ಲಿ ಭಿಕ್ಷೆ ಬೇಡಿ ಜನರಿಗೆ ಕೊಡುತ್ತೇವೆ ಎಂದು ಅವರು ಹೇಳಿದ್ದರು‌. ಆ ಹಣ ಎಲ್ಲಿ ಎಂದು ಕೇಳಿದರು. ಎಂದಿನಂತೆಯೇ ಇದು ಕೂಡ ಎಂದು ಮುಖ್ಯಮಂತ್ರಿಗಳು ಮಂದಹಾಸ ಬೀರಿದರು.
ಶಿಕ್ಷಣ ಸಚಿವ ನಾಗೇಶ್ ಅವರು ಮಕ್ಕಳು ಶಾಲೆಗೆ ಹೋಗುವುದು ಪಾಠ ಕಲಿಯಲೇ ಹೊರತು ಶೂಸ್​ ಹಾಕಿಕೊಳ್ಳಲು ಅಲ್ಲ ಎಂದಿದ್ದರು. ಅದಕ್ಕೆ ಪ್ರತಿಕ್ರಿಯೆಯಾಗಿ ಡಿಕೆಶಿ ಭಿಕ್ಷೆ ಎತ್ತಿ ನೀಡುವ ಮಾತನಾಡಿದ್ದರು. ಅದಕ್ಕೆ ಈಗ ಸಿಎಂ ಬೊಮ್ಮಾಯಿ ಈ ರೀತಿ ತಿರುಗೇಟು ನೀಡಿದ್ದಾರೆ.
ಶೂಸ್​, ಸಾಕ್ಸ್ ಕೊಡಲು ನಿಮ್​ ಬಳಿ ಹಣ ಇಲ್ಲದಿದ್ದರೆ, ಕಾಂಗ್ರೆಸ್ ಭಿಕ್ಷೆ ಬೇಡಿ ನೀಡುತ್ತೆ: ಡಿಕೆಶಿ ಟಾಂಗ್

ಆಂಧ್ರದ ರಾಜಕೀಯದಲ್ಲಿ ಕುತೂಹಲದ ತಿರುವು: ಮಗನ ಬಿಟ್ಟು ಮಗಳ ಕೈಹಿಡಿದ ಮುಖ್ಯಮಂತ್ರಿ ಅಮ್ಮ!

Sign in to your account
Please enter an answer in digits:eighteen + 19 =
Remember me
