ಬೆಂಗಳೂರು:ಬಿಟ್‌ಕಾಯಿನ್ ಹಗರಣದ ರೂವಾರಿ ಎನ್ನಲಾದ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನ ಸಹೋದರ ಸುದರ್ಶನ್ ರಮೇಶ್ ವಿರುದ್ಧ ಹೊರಡಿಸಲಾಗಿರುವ ಲುಕ್ ಔಟ್ ಸರ್ಕ್ಯೂಲರ್‌ಗೆ (ಎಲ್‌ಒಸಿ) ಸಂಬಂಧಿಸಿದ ಮೂಲ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ವಿದೇಶ ಪ್ರವಾಸಕ್ಕೆ ನಿರ್ಬಂಧ ಹೇರಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ನೆದರ್ಲೆಂಡ್‌ನ ಸಂಸ್ಥೆಯಲ್ಲಿ ಮೆಕ್ಯಾನಿಕಲ್ ಇಂಜಿನಿಯರ್ ಆಗಿರುವ ಸುದರ್ಶನ್ ರಮೇಶ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಗುರುವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ವಾದ ಮಂಡಿಸಿ, ಲುಕ್ ಔಟ್ ಸರ್ಕ್ಯೂಲರ್ ಬಗ್ಗೆ ಮಾಹಿತಿ ನೀಡುತ್ತಿಲ್ಲ. ಇದರಿಂದ, ವಾದ ಮಂಡನೆಗೆ ಕಷ್ಟವಾಗುತ್ತಿದೆ ಎಂದು ತಿಳಿಸಿದರು. ಜತೆಗೆ, ಅರ್ಜಿದಾರರು ಫೆ.12ರೊಳಗೆ ಕೆಲಸಕ್ಕೆ ಹಾಜರಾಗದಿದ್ದರೆ, ಉದ್ಯೋಗದಲ್ಲಿ ಮುಂದುವರಿಸಲಾಗುವುದಿಲ್ಲ ಎಂದು ಉದ್ಯೋಗದಾತ ಸಂಸ್ಥೆ ಹೇಳಿದೆ. ಸರಿಯಾದ ಸಮಯಕ್ಕೆ ನೆದರ್ಲೆಂಡ್‌ಗೆ ತೆರಳದಿದ್ದರೆ ಅರ್ಜಿದಾರರು ಉದ್ಯೋಗವನ್ನೇ ಕಳೆದುಕೊಳ್ಳಬೇಕಾಗುತ್ತದೆ ಎಂದು ಕೋರ್ಟ್ ಗಮನಕ್ಕೆ ತಂದರು. ಕೇಂದ್ರ ಸರ್ಕಾರದ ಪರ ವಕೀಲರು, ಎಲ್‌ಒಸಿ ಗೌಪ್ಯ ದಾಖಲೆಯಾಗಿದ್ದು, ಅದನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಅದಕ್ಕೆ ನ್ಯಾಯಪೀಠ, ಅರ್ಜಿದಾರರ ಪರ ವಕೀಲರಿಗೆ ಎಲ್‌ಒಸಿ ಮಾಹಿತಿಯೇ ಇಲ್ಲವಾದರೆ ಅದನ್ನು ಪ್ರಶ್ನಿಸುವುದು ಹೇಗೆ, ವಾದ ಮಂಡಿಸುವುದಾದರೂ ಹೇಗೆ ಎಂದು ಕೇಂದ್ರ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿತಲ್ಲದೆ, ಅರ್ಜಿಯ ಮುಂದಿನ ವಿಚಾರಣೆ ವೇಳೆ ಎಲ್‌ಒಸಿಗೆ ಸಂಬಂಧಿಸಿದ ಎಲ್ಲ ಮೂಲ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಫೆ.16ಕ್ಕೆ ಮುಂದೂಡಿತು.
ಜತೆಗೆ, ಪ್ರಕರಣ ನ್ಯಾಯಾಲಯದಲ್ಲಿರುವ ಕಾರಣ ಅರ್ಜಿದಾರರನ್ನು ಕೆಲಸದಿಂದ ತೆರವುಗೊಳಿಸದಂತೆ ಉದ್ಯೋಗದಾತ ಸಂಸ್ಥೆಗೆ ಮನವಿ ಮಾಡುವಂತೆ ಅರ್ಜಿದಾರರ ಪರ ವಕೀಲರಿಗೆ ಹೈಕೋರ್ಟ್ ಮೌಖಿಕವಾಗಿ ಸಲಹೆ ನೀಡಿತು.
ಮನವಿ ಏನು?ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳ ಮುಂದೆ ಈಗಾಗಲೇ ಹಾಜರಾಗಿ, ಹಗರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಸಹೋದರನ ವಿರುದ್ಧ ಆರೋಪ ಕೇಳಿ ಬಂದಾಗ ತಾನು ಭಾರತದಲ್ಲೇ ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದೇನೆ. ಹೈಪರ್‌ಟೆನ್ಷನ್ ಹಾಗೂ ಪಾರ್ಕಿನ್ಸನ್ ಸಮಸ್ಯೆಯಿಂದ ಬಳಲುತ್ತಿರುವ ತಂದೆ ಸದ್ಯ ಕೋಮಾ ಸ್ಥಿತಿಯಲ್ಲಿದ್ದಾರೆ. ಅವರಿಗೆ ವೈದ್ಯಕೀಯ ಉಪಚಾರದ ಅಗತ್ಯವಿದ್ದು, ಅದಕ್ಕಾಗಿ ಹಣದ ಅವಶ್ಯಕತೆ ಇದೆ. ಆದ್ದರಿಂದ, ಉದ್ಯೋಗಕ್ಕಾಗಿ ನೆದರ್ಲೆಂಡ್‌ಗೆ ತೆರಳಲು ಸಿದ್ಧತೆ ನಡೆಸಿಕೊಂಡು ಜ.13ರಂದು ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಡುವಾಗ ಇಮಿಗ್ರೇಷನ್ ಹಾಗೂ ಇಡಿ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ. ಆದ್ದರಿಂದ, ವಿದೇಶ ಪ್ರವಾಸ ನಿರ್ಬಂಧಿಸಿ ಇಡಿ ಹೊರಡಿಸಿರುವ ಆದೇಶ ರದ್ದುಪಡಿಸಿ, ಪ್ರವಾಸ ಕೈಗೊಳ್ಳಲು ಅನುಮತಿಸಬೇಕು ಎಂದು ಸುದರ್ಶನ್ ರಮೇಶ್ ಅರ್ಜಿಯಲ್ಲಿ ಕೋರಿದ್ದಾರೆ.
ರಾಜ್ಯದಲ್ಲಿ ದಿಢೀರ್‌ ಸದ್ದು ಮಾಡುತ್ತಿದೆ ಹಿಜಾಬ್‌ ಧಾರಣೆ: ಒಬ್ಬರ ಮೇಲೊಬ್ಬರು ಹೈಕೋರ್ಟ್‌ಗೆ ಅರ್ಜಿ

ಪುನಃ ಸಿಡಿ ಸಂಕಷ್ಟದಲ್ಲಿ ಜಾರಕಿಹೊಳಿ! ವರದಿ ಸಲ್ಲಿಕೆಗೆ ಕೋರ್ಟ್‌ ಅನುಮತಿ, ಶೀಘ್ರದಲ್ಲೇ ‘ಭವಿಷ್ಯ’ ನಿರ್ಧಾರ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:sixteen − one =
Remember me
