ಯಾದಗಿರಿ:ಸದ್ಯ ರಾಜ್ಯದಲ್ಲಿ ಸಚಿವ ಸಂಪುಟ ಪುನರ್​ರಚನೆ ಹಾಗೂ ಮುಖ್ಯಮಂತ್ರಿ ಬದಲಾವಣೆ ಸುದ್ದಿ ಸದ್ದು ಮಾಡುತ್ತಿದೆ. ಇದರ ನಡುವೆಯೇ ಕೆಲವರು ತಮಗೆ ಉನ್ನತ ಸ್ಥಾನ ಸಿಗಲಿ ಎಂದು ದೇವರ ಮೊರೆ ಹೋಗುತ್ತಿದ್ದಾರೆ.
ಅದರಲ್ಲಿಯೂ ಇದೀಗ ಉಪಮುಖ್ಯಮಂತ್ರಿ ಸ್ಥಾನಕ್ಕೆ ಭಾರಿ ಪೈಪೋಟಿ ನಡೆದಿದೆ. ಈ ಹುದ್ದೆಯ ಆಕಾಂಕ್ಷಿಯಾಗಿರುವ ಸಚಿವ ರಮೇಶ್ ಜಾರಕಿಹೊಳಿ ಅವರು ಒಂದೆಡೆ ಈ ಸ್ಥಾನಕ್ಕಾಗಿ ಭಾರಿ ತಯಾರಿ ನಡೆಸುತ್ತಿದ್ದರೆ, ಇನ್ನೊಂದೆಡೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರೂ ಡಿಸಿಎಂ ಹುದ್ದೆಗಾಗಿ ಪಣ ತೊಟ್ಟಿದ್ದಾರೆ.
ಉಪಮುಖ್ಯಮಂತ್ರಿ ಸ್ಥಾನ ತಮಗೇ ಸಿಗಲಿ ಎನ್ನುವ ಕಾರಣಕ್ಕೆ ಶ್ರೀರಾಮುಲು ಯಾದಗಿರಿ ಜಿಲ್ಲೆಯ ದುರ್ಗಿಗೆ ಪೂಜೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗೋನಾಳ ಗ್ರಾಮದ ಗಡೇ ದುರ್ಗಾದೇವಿ ಶಕ್ತಿ ದೇವತೆ ಎಂದೇ ಪ್ರಸಿದ್ಧಿಯಾಗಿದ್ದು, ಅಲ್ಲಿಗೆ ಹೋಗಿ ದುರ್ಗಾದೇವಿಗೆ ಪೂಜೆ ಸಲ್ಲಿಸುವುದರ ಜತೆಗೇನೇ, ತಮಗೆ ಉಪಮುಖ್ಯಮಂತ್ರಿ ಸ್ಥಾನ ಸಿಗಲಿ ಎಂದು ಶ್ರೀರಾಮುಲು ದೇವತೆಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:“ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿಯದ್ದು ಕರ್ಣನ ಪರಿಸ್ಥಿತಿ”
ಇಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇವರು ದೇವಾಲಯಕ್ಕೆ ಭೇಟಿ ಕೊಟ್ಟು ದೇವಿಯ ದರ್ಶನ ಪಡೆದು ನಂತರ ಅರ್ಚಕರ ಅನುಮತಿ ಪಡೆದು ದೇವಿಯ ಗರ್ಭಗುಡಿಯೊಳಗೆ ಹೋಗಿದ್ದಾರೆ, ಅಲ್ಲಿ ತಾವು ಬರೆದಿರುವ ಪತ್ರವನ್ನು ದೇವಿಯ ಪಾದದ ಬಳಿ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.ಶ್ರೀಮಾಮುಲು ಭೇಟಿ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಅರ್ಚಕ‌ ಮರಿಸ್ವಾಮಿ, ಸಚಿವ ಬಿ.ಶ್ರೀರಾಮುಲು ಅವರು ಕರೊನಾ ಮುಕ್ತಿಗಾಗಿ ಹಾಗೂ ತಮಗೆ ರಾಜಕೀಯದಲ್ಲಿ ಒಳಿತಾಗಲಿ ಎಂದು ಪೂಜೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಇವರಿಗೆ ಉನ್ನತಸ್ಥಾನ ಸಿಗಲಿದೆ ಎಂದಿದ್ದಾರೆ.
ಈ ಹಿಂದೆ ಡಿ.ಕೆ.ಶಿವಕುಮಾರ್ ಗೋನಾಲ ಗ್ರಾಮಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು, ತಮ್ಮನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡುವಂತೆ ಪತ್ರ ಬರೆದಿದ್ದರು ಎನ್ನಲಾಗುತ್ತಿದೆ.
ಹೆಬ್ಬಾವನ್ನೇ ಮಾಸ್ಕ್​ ಆಗಿ ಧರಿಸಿ ಬಸ್​ ಹತ್ತಿದ: ಹೌಹಾರಿಹೋದ ಪ್ರಯಾಣಿಕರು!

ನಸುಕಿನಲ್ಲಿಯೇ ಯೋಧರಿಂದ ಬೇಟೆ: ಮೂರು ಉಗ್ರರ ಹೊಡೆದುರುಳಿಸಿದ ಸೇನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − six =
Remember me
