ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರು ಇದಾಗಲೇ ಮಂಗಳೂರಿಗೆ ಆಗಮಿಸಿದ್ದಾರೆ. ಮಧ್ಯಾಹ್ನ 3.30ರಿಂದ ಸುಮಾರು 3,800 ಕೋಟಿ ವೆಚ್ಚದ ಯೋಜನೆಗಳಿಗೆ ಪ್ರಧಾನಿಯವರು ಚಾಲನೆ ನೀಡಲಿದ್ದಾರೆ.
ಈ ನಡುವೆಯೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಪ್ರಧಾನಿಗೆ ಟ್ವೀಟ್​ ಮೂಲಕ ಪ್ರಶ್ನೆಗಳ ಸುರಿಮಳೆಯನ್ನೇ ಗೈದಿದ್ದಾರೆ.
ಅವರು ಸರಣಿ ಟ್ವೀಟ್​ನಲ್ಲಿ ಬರೆದುಕೊಂಡಿರುವುದು ಇಷ್ಟು…– ಸನ್ಮಾನ್ಯ ಪ್ರಧಾನಮಂತ್ರಿಯವರಿಗೆ ಮಂಗಳೂರಿಗೆ ಸ್ವಾಗತ. ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ.
– ದಕ್ಷಿಣ ಕನ್ನಡದ ಉದ್ಯಮ ಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್​ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ. ಇದು ವಿಕಾಸವೋ? ವಿನಾಶವೋ?
– ಕಾರ್ಪೋರೇಷನ್ ಬ್ಯಾಂಕ್ ಸ್ಥಾಪಕರು- ಹಾಜಿ ಅಬ್ದುಲ್ಲಾ (1906), ಸಿಂಡಿಕೇಟ್ ಬ್ಯಾಂಕ್ ಸ್ಥಾಪಕರು ಟಿಎಂಎ ಪೈ, ಉಪೇಂದ್ರ ಪೈ, ವಾಮನ್ ಕುಡ್ವಾ (1925). ವಿಜಯಾ ಬ್ಯಾಂಕ್ ಸ್ಥಾಪಕರು- ಎ.ಬಿ.ಶೆಟ್ಟಿ (1931). ಪ್ರಧಾನಿಯವರೇ, ನಿಮ್ಮ ನಡೆ ಈ ಅಮರವೀರರಿಗೆ ಬಗೆದ ದ್ರೋಹವಲ್ಲವೇ? ಇದು ವಿಕಾಸವೋ? ವಿನಾಶವೋ?
– ಬಜ್ಪೆ ವಿಮಾನ ನಿಲ್ದಾಣ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಕೊಡುಗೆ.(25-12-1971) ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ಈ ವಿಮಾನ ನಿಲ್ದಾಣವನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಅರ್ಪಿಸಿದ್ದು, (20-10-2020) ಪ್ರಧಾನಿ ನರೇಂದ್ರ ಮೋದಿ ಇದು ವಿಕಾಸವೋ? ವಿನಾಶವೋ?
– ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾಗಾಂಧಿ ಕೊಡುಗೆ (1975). ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ನವಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿರುವುದು ಪ್ರಧಾನಿ ನರೇಂದ್ರ ಮೋದಿ. ಇದು ವಿಕಾಸನೊ? ವಿನಾಶನೊ?
– ಬಜ್ಪೆ ವಿಮಾನ ನಿಲ್ದಾಣ, ಎನ್ ಎಂಪಿಟಿ, ಎನ್ ಎಚ್-66, ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್-ಇವೆಲ್ಲ ಕಾಂಗ್ರೆಸ್ ಸಂಸದರ ಕೊಡುಗೆ. ಬಿಜೆಪಿ ಸಂಸದ ನಳಿನ್ ಕುಮಾರ ಕೊಡುಗೆ ಏನು? ಮಳೆಯಲ್ಲಿ ಮುಳುಗುವ ಮಂಗಳೂರು? ಕೋಮುದ್ವೇಷದ ಬೆಂಕಿಯಲ್ಲಿ ಬೇಯುತ್ತಿರುವ ಮಂಗಳೂರು? ಇದು ವಿಕಾಸವೋ? ವಿನಾಶನೊ?
– ದಕ್ಷಿಣ ಕನ್ನಡದ ವಿಕಾಸ ಪುರುಷರು ಕಾಂಗ್ರೆಸ್ ಸಂಸದರಾಗಿದ್ದ ಉಳ್ಳಾಲ ಶ್ರೀನಿವಾಸ ಮಲ್ಯ, ಕೆಮ್ತೂರು ಕಾಂತಪ್ಪ ಶೆಟ್ಟಿ ಮತ್ತು ಬೋಳಾರ ಜನಾರ್ಧನ ಪೂಜಾರಿ. ದಕ್ಷಿಣ ಕನ್ನಡದ ವಿನಾಶ ಪುರುಷ- ಬಿಜೆಪಿ ಸಂಸದ ನಳಿನ್ ಕುಮಾರ ಕಟೀಲ್. ಇದು ವಿಕಾಸವೋ? ವಿನಾಶವೋ?
– ಜೂನ್ ತಿಂಗಳೊಂದರಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೂವರೆ ಕೋಟಿ ಬೆಲೆಯ ಮಾದಕದ್ರವ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾದಕದ್ರವ್ಯ ಸೇವನೆಯಲ್ಲಿ ದೇಶದಲ್ಲಿಯೇ ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ. ಇದು ವಿಕಾಸನೊ? ವಿನಾಶನೊ?
– ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿದೆ. ಹೆಜ್ಜೆಹೆಜ್ಜೆಗೂ ಗುಂಡಿಬಿದ್ದ ರಸ್ತೆಗಳು, ಕುಸಿದು ಬಿದ್ದಿರುವ ಮನೆಗಳು, ನೆರೆಯಲ್ಲಿ ರೈತರ ಬೆಳೆಗಳು ಕೊಚ್ಚಿಹೋಗಿವೆ. ಪ್ರಧಾನಿ ಭೇಟಿಗಾಗಿ ಮಳೆ ಹುಳುಕನ್ನು ಮುಚ್ಚಿಟ್ಟು ರಸ್ತೆಗಳಿಗೆ ತೇಪೆ ಹಾಕಲಾಗಿದೆ. ಇದು ವಿಕಾಸನೊ? ವಿನಾಶನೊ?
– ಕಳೆದ ಮೂರು ವರ್ಷಗಳಲ್ಲಿ ಕಡಲ್ಕೊರೆತ ತಡೆಗೆ ರಾಜ್ಯ ಸರ್ಕಾರ ಖರ್ಚು ಮಾಡಿರುವ ಹಣ ಅಂದಾಜು ರೂ.250 ಕೋಟಿ. ಇದರಲ್ಲಿ 40% ಜನಪ್ರತಿನಿಧಿಗಳ ಜೇಬಿಗೆ, 60% ಕಡಲ ನೀರಿಗೆ. ಕಡಲ್ಕೊರೆತ ಮುಂದುವರಿದಿದೆ. ಇದು ವಿಕಾಸವೋ? ವಿನಾಶನೊ? ಕರಾವಳಿ ಮೀನುಗಾರರ ಮೇಲೆ ಸಿಆರ್ ಜೆಡ್, ಸಿಎಂ ಜೆಡ್ ನಿಯಮಾವಳಿಗಳ ಹೇರಿಕೆ ಮಾಡಲಾಗಿದೆ. ಪ್ರವಾಸೋದ್ಯಮದ ಹೆಸರಲ್ಲಿ ರೆಸಾರ್ಟ್, ಥೀಮ್ ಪಾರ್ಕ್​ಗಳಿಗೆ ಮುಕ್ತ ಪರವಾನಿಗೆ. ಇದು ವಿಕಾಸನೊ? ವಿನಾಶನೊ?
– 48 ಕಿ.ಮೀ. ಅಂತರದಲ್ಲಿ ಬ್ರಹ್ಮರಕೂಟ್ಲು, ಸುರತ್ಕಲ್, ತಲಪಾಡಿ ಮತ್ತು ಹೆಜಮಾಡಿಗಳಲ್ಲಿ 4 ನಿಯಮಬಾಹಿರ ಟೋಲ್ ಗೇಟ್ ಗಳು. ವಾಹನ ಸಂಚಾರಿಗಳ ಜೇಬು ಖಾಲಿ, ಅಕ್ರಮದ ರೂವಾರಿಗಳಾದ ಬಿಜೆಪಿ ಸಂಸದರು ಮತ್ತು ಶಾಸಕರ ಜೇಬು ಭರ್ತಿ. ಇದು ವಿಕಾಸನೊ? ವಿನಾಶನೊ? #AnswerMadiModi ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆಯನ್ನೇ ಗೈದಿದ್ದಾರೆ.
ನೌಕಾಪಡೆಯಲ್ಲಿ ಮತ್ತೊಂದು ಮೈಲಿಗಲ್ಲು: ಬಹು ವಿಶೇಷತೆಯ ಐಎನ್​ಎಸ್​ ವಿಕ್ರಾಂತ್ ಪ್ರಧಾನಿಯಿಂದ ಲೋಕಾರ್ಪಣೆ

ಮಂಗಳೂರಿನಲ್ಲಿ ಪ್ರಧಾನಿ: ಘಮಘಮಿಸುತ್ತಿವೆ ವೆಜ್​ ಪಲಾವ್​, ಸಲಾಡ್, ಲಕ್ಷ ಲಕ್ಷ ಬಿಸ್ಕೆಟ್​, ಚಾಕೋಲೆಟ್​

ಗುಲಾಮಗಿರಿಗೆ ಗುಡ್​ಬೈ- ನೌಕಾಪಡೆಗೆ ಹೊಸ ಧ್ವಜ: ಪ್ರಧಾನಿ ಅನಾವರಣ- ಇದರ ಹಿಂದಿದೆ ಕುತೂಹಲದ ಕಥೆ…

ನೌಕಾಪಡೆಯಲ್ಲಿ ಮತ್ತೊಂದು ಮೈಲಿಗಲ್ಲು: ಬಹು ವಿಶೇಷತೆಯ ಐಎನ್​ಎಸ್​ ವಿಕ್ರಾಂತ್ ಪ್ರಧಾನಿಯಿಂದ ಲೋಕಾರ್ಪಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − ten =
Remember me
