ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ,ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಇಂದು ಪತ್ರ ಬರೆದಿದ್ದು, ರೈತರ ಹಿತಾಸಕ್ತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್ ಹೆಸರುಕಾಳಿಗೆ ರೂ.7,196 ಕನಿಷ್ಠ ಬೆಂಬಲ ಬೆಲೆಯಾಗಿ ನಿಗದಿಪಡಿಸಿರುವುದರಿಂದ ಕೂಡಲೇ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಒತ್ತಾಯಿಸಿದ್ದಾರೆ.
ಕೇಂದ್ರ ರಾಜ್ಯ ಎರಡೂ ಕಡೆ ಒಂದೇ ಪಕ್ಷದ ಆಡಳಿತವಿದೆ. ರಾಜ್ಯದ ಜನರು 25 ಜನ ಬಿ.ಜೆ.ಪಿ. ಪಕ್ಷದ ಸಂಸದರನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಆದರೆ ಒಬ್ಬರೂ ಸಹ ರೈತರ ಸಂಕಷ್ಟಕ್ಕೆ ಸ್ಪಂದಿಸದೇ ಸಂಪೂರ್ಣ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ. ಈ ನಿರ್ಲಕ್ಷ್ಯ ಧೋರಣೆಯನ್ನು ಬಿಟ್ಟು ಸರ್ಕಾರ ಇಂದಿನಿಂದಲೇ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿ ಹೆಸರು ಕಾಳನ್ನು ನಿಗದಿಪಡಿಸಿದ ಕನಿಷ್ಠ ಬೆಂಬಲ ಬೆಲೆಯನ್ನು ನೀಡಿ ಖರೀದಿಸಬೇಕೆಂದು ಆಗ್ರಹಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ:ಸಾಕ್ಷರತಾ ಪಟ್ಟಿ ಬಿಡುಗಡೆ: ಕೇರಳ ಫಸ್ಟ್​, ಆಂಧ್ರ ಲಾಸ್ಟ್​; ಕರ್ನಾಟಕ ಎಷ್ಟನೇ ಸ್ಥಾನ ಗೊತ್ತಾ?
ಪತ್ರದಲ್ಲಿ ಇರುವುದಿಷ್ಟು…ಹೆಸರು ಮತ್ತು ಉದ್ದು ಬೆಳೆಯನ್ನು ತುಮಕೂರು ಸೇರಿದಂತೆ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದೆ. ಪ್ರಸ್ತುತ ವಿವಿಧ ಎ.ಪಿ.ಎಂ.ಸಿ.ಗಳಲ್ಲಿ ಹೆಸರುಕಾಳು ಕ್ವಿಂಟಲ್‍ಗೆ 2,105 ರೂಪಾಯಿಗಳಿಗೆ ಮಾರಾಟವಾಗುತ್ತಿದೆ. ಎಲ್ಲಾ ಮಾರುಕಟ್ಟೆಗಳ ಇಂದಿನ ಸರಾಸರಿ ಬೆಲೆ 5 ಸಾವಿರ ರೂಪಾಯಿಗಳ ಆಸುಪಾಸಿನಲ್ಲಿದೆ.
ಹೆಸರನ್ನು ಕೊಯ್ಲು ಮಾಡಿ ಬಹಳ ದಿನಗಳ ಕಾಲ ರೈತರು ಮನೆಗಳಲ್ಲಿ ದಾಸ್ತಾನು ಮಾಡಲಾಗುವುದಿಲ್ಲ. ಹುಳದ ಕಾಟ ಮುಂತಾದ ಸಮಸ್ಯೆಗಳು ಶುರುವಾಗುತ್ತವೆ. ಹಾಗಾಗಿ ರೈತರು ಅಡ್ಡಾದಿಡ್ಡಿ ಬೆಲೆಗಳಿಗೆ ಮಾರಿ ಕೊಳ್ಳುತ್ತಿದ್ದಾರೆ.
ಸರ್ಕಾರ ಇಲ್ಲಿಯವರೆಗೂ ಖರೀದಿ ಕೇಂದ್ರಗಳನ್ನು ತೆರೆಯದೇ ನಿರ್ಲಕ್ಷ್ಯ ಮಾಡುತ್ತಿರುವುದು ರೈತ ವಿರೋಧಿ ನಿಲುವಾಗಿದೆ. ಇಂತಹ ಸಂದರ್ಭದಲ್ಲಿ ಎ.ಪಿ.ಎಂ.ಸಿ. ಕಾಯ್ದೆಯನ್ನು ತಿದ್ದುಪಡಿ ಮಾಡಿ ಎ.ಪಿ.ಎಂ.ಸಿ.ಗಳನ್ನೇ ಬರ್ಖಾಸ್ತು ಮಾಡಲು ಹೊರಟಿದೆ. ಕಳೆದ ಬಾರಿ ಸಹ ತೊಗರಿ ಖರೀದಿಯಲ್ಲೂ ಸರ್ಕಾರ ರೈತರಿಗೆ ಮೋಸ ಮಾಡಿತು.
ರಾಜ್ಯದಲ್ಲಿ ಮುಂಗಾರಿನ ಮಳೆಗಳು ಚೆನ್ನಾಗಿದ್ದರಿಂದ ಹೆಸರು, ಉದ್ದು ಮುಂತಾದ ದ್ವಿದಳ ಧಾನ್ಯಗಳ ಬೆಳೆ ಉತ್ತಮವಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ಕೊಯ್ಲು ನಡೆಯುತ್ತಿದೆ. ರೈತರ ಶ್ರಮಕ್ಕೆ ಈ ಬೆಲೆ ಕಡಿಮೆಯೆ. ಆದರೆ ಅಷ್ಟಾದರೂ ಸಿಗಲಿ ಎಂದಿದ್ದಾರೆ.
ಹೆಸರುಬೇಳೆ ಖರೀದಿಗೆ ರಾಜ್ಯ ಸರ್ಕಾರ ಖರೀದಿ ಕೇಂದ್ರಗಳನ್ನು ಈ ವರೆಗೂ ಆರಂಭಿಸದ ಕಾರಣ ನಾಡಿನ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ತಕ್ಷಣ@BJP4Karnatakaತನ್ನ ನಿರ್ಲಕ್ಷ ಧೋರಣೆಯನ್ನು ಬಿಟ್ಟು ಖರೀದಿ ಕೇಂದ್ರಗಳನ್ನು ತೆರೆಯುವ ಜೊತೆಗೆ ಕನಿಷ್ಠ ಬೆಂಬಲ ಬೆಲೆ ನೀಡಿ ಖರೀದಿಸಬೇಕೆಂದು@CMofKarnatakaಅವರನ್ನು ಒತ್ತಾಯಿಸುತ್ತೇನೆ.pic.twitter.com/oWHbLdEVe5
— Siddaramaiah (@siddaramaiah)September 8, 2020

ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಕೊರತೆ ಉಂಟಾಗಿದ್ದು, ರೈತರು ಮುಂದೇನು ಗತಿ ಎಂದು ಆತಂಕಕ್ಕೀಡಾಗಿದ್ದಾರೆ. ತಕ್ಷಣ ಸರ್ಕಾರ ಆದ್ಯತೆ ಮೇರೆಗೆ ಯೂರಿಯಾ ಆಮದು ಮಾಡಿಕೊಂಡು, ರೈತರಿಗೆ ಅಗತ್ಯ ಪ್ರಮಾಣದಲ್ಲಿ ವಿತರಿಸುವ ಕೆಲಸ ಮಾಡಬೇಕೆಂದು@CMofKarnatakaಅವರನ್ನು ಒತ್ತಾಯಿಸುತ್ತೇನೆ.pic.twitter.com/MAsecUpUFN
— Siddaramaiah (@siddaramaiah)September 8, 2020

ಆನ್​ಲೈನ್​ ಅವಾಂತರ- ಪ್ಯಾಂಟ್​ ಹಾಕದ ಅಪ್ಪ, ನಾನೂ ಹಾಕಿಲ್ಲ ಎಂದು ತೋರಿಸಿದ ಮತ್ತೊಬ್ಬ!

11ರ ಪೋರನಿಂದ 9 ವರ್ಷದ ಬಾಲಕಿಯ ಕೊಲೆ: ಕಾರಣ ಕೇಳಿದರೆ ಅಚ್ಚರಿ ಪಡ್ತೀರಾ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × one =
Remember me
