ದಾವಣಗೆರೆ:ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಭರ್ಜರಿಯಾಗಿ ನಡೆಯುತ್ತಿದೆ. ಕಾಂಗ್ರೆಸ್​ನ ಬಹುತೇಕ ಎಲ್ಲಾ ನಾಯಕರೂ ಈ ಸಮಾವೇಶದಲ್ಲಿ ಜಮಾಯಿಸಿದ್ದಾರೆ. ಅತ್ತ ಸಂಸದ ರಾಹುಲ್​ ಗಾಂಧಿ ಕೂಡ ಸಮಾವೇಶದ ಕಡೆಗೆ ಹೊರಟಿದ್ದಾರೆ. ಆದರೆ ಕಾಂಗ್ರೆಸ್​ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಎಚ್​.ಮುನಿಯಪ್ಪ ಕಾರ್ಯಕ್ರಮಕ್ಕೆ ಹಾಜರು ಆಗಲಿಲ್ಲ, ಕಾರ್ಯಕ್ರಮದಲ್ಲಿ ಭಾಷಣ ಮಾಡಬೇಕಿದ್ದ ಖರ್ಗೆ ಗೈರಾಗಿದ್ದಾರೆ.
ಖರ್ಗೆ ಅವರ ಗೈರಿಗೆ ಕಾರಣ, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಂಗಳವಾರ ದೇಶದ 12 ಕಡೆಗಳಲ್ಲಿ ನಡೆಸಿರುವ ದಾಳಿ. ದೆಹಲಿಯಲ್ಲಿ ಮಂಗಳವಾರ ನಡೆದ ಬೆಳವಣಿಗೆ ಹಿನ್ನಲೆಯಲ್ಲಿ ಅನಿವಾರ್ಯ ಕಾರಣಕ್ಕಾಗಿ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಖರ್ಗೆ ಭಾಗವಹಿಸಿಲ್ಲ ಎಂದು ತಿಳಿದುಬಂದಿದೆ. ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ತಮ್ಮ ತಂದೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂಬ ಬಗ್ಗೆ ಸಿದ್ದರಾಮಯ್ಯ ಅವರ ಗಮನಕ್ಕೂ‌ ತರಲಾಗಿದೆ ಎಂದಿದ್ದಾರೆ.
ಇನ್ನು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಅವರ ಕುರಿತು ಹೇಳುವುದಾದರೆ, ಅವರಿಗೆ ಜ್ವರ ಬಂದಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಹಾಜರು ಆಗುತ್ತಿಲ್ಲ ಎನ್ನಲಾಗಿದೆ. ಆದರೆ ಮುನಿಯಪ್ಪನವರು ಜೆಡಿಎಸ್ ಸೇರುತ್ತಾರೆ ಎಂಬ ಮಾತುಗಳು ರಾಜಕೀಯ ಅಂಗಳದಲ್ಲಿ ಜೋರಾಗಿ ಕೇಳಿ ಬರುತ್ತಿದೆ. ಮುನಿಯಪ್ಪ ಅವರ ವಿರೋಧಿಗಳನ್ನು ಇತ್ತೀಚೆಗೆ ರಮೇಶ್ ಕುಮಾರ್ ಅವರು ಕಾಂಗ್ರೆಸ್‌ಗೆ ಕರೆತಂದಿದ್ದು, ಅವರನ್ನು ಸಿದ್ದರಾಮಯ್ಯನವರು ದೆಹಲಿಯಲ್ಲಿ ರಾಹುಲ್ ಗಾಂಧಿ ಸಮ್ಮುದಲ್ಲಿ ಸೇರಿಸಿಕೊಂಡಿದ್ದಾರೆ. ಇದರಿಂದ ಮುನಿಸಿಕೊಂಡಿರುವ ಮುನಿಯಪ್ಪನವರು ಕಾರ್ಯಕ್ರಮಕ್ಕೆ ಹಾಜರಾಗ್ತಿಲ್ಲ ಎನ್ನುವ ಗುಸುಗುಸು ರಾಜಕೀಯ ವಲಯದಲ್ಲಿ ಕೇಳಿಬಂದಿದೆ.
ಬೆಳಗಾವಿಯಲ್ಲಿ ರೆಡಿ, ಸೂರತ್​ನಲ್ಲಿ ಪ್ರಿಂಟ್​: ದಾವಣಗೆರೆಯಲ್ಲಿ ಮಿಂಚುತ್ತಿದೆ 3 ಕಿ.ಮೀ ಉದ್ದದ ಫೋಟೋ ಬಯೋಗ್ರಫಿ

ಮುರುಘಾ ಮಠಕ್ಕೆ ಭೇಟಿ ನೀಡಿದ ರಾಹುಲ್​ ಗಾಂಧಿಗೆ ಲಿಂಗದೀಕ್ಷೆ ನೀಡಿದ ಡಾ. ಶಿವಮೂರ್ತಿ ಮುರುಘಾ ಶರಣರು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:sixteen + 19 =
Remember me
