ಬೆಂಗಳೂರು:ಕರೊನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಅವರ ಬೆಂಬಲಿಗರು ಇಂದು ದೇವರಿಗೆ 1001 ತೆಂಗಿನ ಕಾಯಿ ಒಡೆದಿದ್ದಾರೆ.
ಬೆಂಗಳೂರಿನ ವೈಯಾಲಿಕಾವಲ್‌ ಸಮೀಪವಿರುವ ತಿರುಮಲ ತಿರುಪತಿ ದೇವಸ್ಥಾನದ ಎದುರಿನಲ್ಲಿ ಶಿವಕುಮಾರ್‌ ಬೆಂಬಲಿಗರು 1001 ತೆಂಗಿನಕಾಯಿ ಒಡೆದು ಅವರು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ವಿಶೇಷ ಪೂಜೆ ಕೂಡ ಸಲ್ಲಿಸಲಾಯಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜ್ವರ ಮತ್ತು ಬೆನ್ನುನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಆಗಸ್ಟ್.23ರಂದು ಸ್ವತಃ ಡಿಕೆಶಿಯವರು ಕರೊನಾವೈರಸ್ ಸೋಂಕಿನ ತಪಾಸಣೆಗೆ ಒಳಗಾಗಿದ್ದರು. ಆಗಸ್ಟ್.25ರಂದು ಬಂದ ವೈದ್ಯಕೀಯ ವರದಿಯಲ್ಲಿ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ವೈದ್ಯಕೀಯ ವರದಿ ಹೊರ ಬರುತ್ತಿದ್ದಂತೆ ಡಿಕೆಶಿ ಬೆಂಗಳೂರಿನ ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು.
.@KPCCPresidentwho has tested positive , his followers praying Shivakumar's speedy recovery and were seen breaking 1001 coconuts Infront of TTD temple , Vaiyyalikaval of Bengaluru@santwana99@NewIndianXpresspic.twitter.com/WLCQ4Lwewz— Ashwini M Sripad/ಅಶ್ವಿನಿ ಎಂ ಶ್ರೀಪಾದ್🇮🇳 (@AshwiniMS_TNIE)August 27, 2020
.@KPCCPresidentwho has tested positive , his followers praying Shivakumar's speedy recovery and were seen breaking 1001 coconuts Infront of TTD temple , Vaiyyalikaval of Bengaluru@santwana99@NewIndianXpresspic.twitter.com/WLCQ4Lwewz
ತಿರುಮಲ ತಿರುಪತಿ ದೇವಸ್ಥಾನದ ಎದುರಿನಲ್ಲಿ 1001 ತೆಂಗಿನಕಾಯಿಗಳನ್ನು ಒಡೆಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಡಿ.ಕೆ.ಶಿವಕುಮಾರ್ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಸುಗುಣ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಆರ್.ರವೀಂದ್ರ ನೇತೃತ್ವದಲ್ಲಿ ವಿವಿಧ ವಿಭಾಗಗಳ ತಜ್ಞರ ವಿಶೇಷ ತಂಡವು ಡಿ.ಕೆ.ಶಿವಕುಮಾರ್ ಅವರ ಆರೋಗ್ಯ ಸ್ಥಿತಿಯ ಮೇಲೆ ನಿಗಾ ವಹಿಸಿದೆ.https://www.vijayavani.net/s-tiktok-ceo-resignation/
ಮಚ್ಚು ಹಿಡಿದು ಚಿನ್ನದಂಗಡಿಗೆ ನುಗ್ಗಿದವನ ಚಚ್ಚಿದಳು ಚಿಕ್ಕಮಗಳೂರು ಮಹಿಳೆ!
ನಾಯಿಗಳು ಕಚ್ಚಿ ತಿಂದ ಕರೊನಾ ಸೋಂಕಿತನ ಶವ!
ಪಾಕ್‌ಗೆ ಬಿಗ್‌ ಷಾಕ್‌: ಸಾಲವೂ ಬಂದ್‌, ತೈಲವೂ ಬಂದ್‌ ಎಂದ ಸೌದಿ ಅರೇಬಿಯಾ!
ಫ್ರಿಜ್‌ ಟ್ರೇ ಬಳಸಿ ಆನ್‌ಲೈನ್‌ ಕ್ಲಾಸ್‌: ಶಿಕ್ಷಕಿಯ ಪ್ಲ್ಯಾನ್‌ಗೆ ಅಪಾರ ಮೆಚ್ಚುಗೆ
ದಫನ್‌ ಆಗಿದ್ದವ ರಾತ್ರಿ ಹೆಂಡತಿಗೆ ಪ್ರತ್ಯಕ್ಷನಾಗಿ ನಾನೇ ನಿನ್ನ ಗಂಡ ಎಂದ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × 4 =
Remember me
