ಬೆಂಗಳೂರು:ಇಂದು ಎಸ್ಎಸ್ಎಲ್​ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಕೆಲ ವಿದ್ಯಾರ್ಥಿಗಳು ಕಡಿಮೆ ಅಂಕ ಗಳಿಸಿದ್ದರೆ, ಇನ್ನು ಕೆಲವರಿಗೆ ಪರೀಕ್ಷೆ ಬರೆಯಲು ಸಾಧ್ಯವಾಗಿರಲಿಲ್ಲ. ಇನ್ನು ಕೆಲವರು ಹಿಂದಿನ ವರ್ಷಗಳಲ್ಲಿ ತೇರ್ಗಡೆಯಾಗಿರಲಿಲ್ಲ. ಇವರಿಗೆಲ್ಲ ಅನುಕೂಲ ಆಗುವ ನಿಟ್ಟಿನಲ್ಲಿ ಪೂರಕ ಪರೀಕ್ಷೆಯ ದಿನಾಂಕ ಪ್ರಕಟಿಸಲಾಗಿದೆ.
ಜೂನ್ 27ರಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಆನ್​ಲೈನ್ ಮೂಲಕ ಕೂಡ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದ್ದು, ಮೇ 30ರವರೆಗೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 10:30ರಿಂದ 1:45ರ ತನಕ ಪರೀಕ್ಷೆ ನಡೆಯಲಿದೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷಗಳನ್ನು ನೀಡಲಾಗುತ್ತದೆ.
ಯಾರೆಲ್ಲಾ ಪರೀಕ್ಷೆ ಬರೆಯಬಹುದು?
2002-03ರಿಂದ 2021- 22ರ ಮುಖ್ಯ ಪರೀಕ್ಷೆವರೆಗೆ ಮತ್ತು 2002-2003ಕ್ಕೂ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಈ ಪೂರಕ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಳ್ಳಬಹುದು.
ಪೂರಕ ಪರೀಕ್ಷೆ ವೇಳಾಪಟ್ಟಿ ಹೀಗಿದೆ..ಜೂನ್‌ 27: ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ ಹಿಂದೂಸ್ತಾನಿ ಸಂಗೀತಜೂನ್‌ 28: ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ)
ಜೂನ್‌ 29 ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)ಜೂನ್‌ 30: ಸಮಾಜ ವಿಜ್ಞಾನಜುಲೈ 01: ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು) ಹಾಗೂ ಎನ್​​ಎಸ್​​ಕ್ಯೂಎಫ್​ ವಿಷಯಗಳು (ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್​ನೆಸ್ಜುಲೈ 02: ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್ಜುಲೈ 04: ಗಣಿತ, ಸಮಾಜಶಾಸ್ತ್ರ
ಪರೀಕ್ಷಾ ಶುಲ್ಕದ ಮಾಹಿತಿಒಂದು ವಿಷಯಕ್ಕೆ – 370 ರೂ.ಎರಡು ವಿಷಯಕ್ಕೆ – 461 ರೂ.ಮೂರು ಅಥವಾ ಮೂರಕ್ಕಿಂತ ಮೇಲ್ಪಟ್ಟು -620 ರೂ.ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಮಾತ್ರ ಪೂರಕ ಪರೀಕ್ಷೆಯ ಪರೀಕ್ಷಾ ಶುಲ್ಕದಿಂದ ವಿನಾಯಿತಿ ಇದೆ.
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ.85.63 ಉತ್ತೀರ್ಣ, ಈ ಬಾರಿಯೂ ಬಾಲಕಿಯರೇ ಮೇಲುಗೈ

ಎಸ್ಸೆಸ್ಸೆಲ್ಸಿ ಪರೀಕ್ಷೆ: 40 ಸಾವಿರ ವಿದ್ಯಾರ್ಥಿಗಳನ್ನ ಪಾಸ್​ ಮಾಡಿದ ಕೃಪಾಂಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + seven =
Remember me
