ಮಂಗಳೂರು:‘ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ ಆಗಬಹುದು’ ಎಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ ನೀಡಿದ್ದಾರೆ.
ಕರಾವಳಿಯ ಕಾರ್ನಿಕ ದೈವ ಕೊರಗಜ್ಜ ಕ್ಷೇತ್ರದ ಕಡೆ ಭಕ್ತರ ನಡಿಗೆ ಎಂಬ ಹೆಸರಿನಲ್ಲಿ ನಡೆದ ಹಿಂದೂ ಸಮಾಜದ ಒಗ್ಗಟ್ಟಿಗಾಗಿ ಮಂಗಳೂರಿನಲ್ಲಿ ಬೃಹತ್ ಪಾದಯಾತ್ರೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ಸಿನ ತುಷ್ಟೀಕರಣ ನೀತಿಯಿಂದ ಭಾರತದ ಧ್ವಜ ತುಂಡಾಯಿತು. ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ ಆಗಬಹುದು ಎಂದು ಅವರು ಹೇಳಿದರು.
ಇದಕ್ಕೆ ಕಾರಣ ನೀಡಿದ ಅವರು, ಈ ಮೂರು ಬಣ್ಣದ ಧ್ವಜ ಯಾರು ನಿರ್ಮಾಣ ಮಾಡಿದ್ದು, ಇದಕ್ಕೆ ಮೊದಲು ಯಾವ ಧ್ವಜ ಇತ್ತು ಎಂಬ ಬಗ್ಗೆ ವಿವರಿಸಿದರು. ಮೊದಲು ಬ್ರಿಟಿಷರ ಧ್ಬಜ ಇತ್ತು, ಅದಕ್ಕೂ ಮೊದಲು ಹಸಿರು ನಕ್ಷತ್ರ, ಚಂದ್ರನ ಧ್ವಜ ಇತ್ತು. ಅಕಸ್ಮಾತ್ ರಾಜ್ಯಸಭೆ, ಪಾರ್ಲಿಮೆಂಟ್ ನಲ್ಲಿ ಬಹುಮತ ಪಡೆದರೆ ಧ್ವಜ ಬದಲು ಮಾಡಬಹುದು. ಧ್ವಜ ಬದಲು ಮಾಡೋಕೆ ಆಗಲ್ಲ ಅಂತ ಏನೂ ಇಲ್ಲ. ಹೀಗೆಯೇ ಮುಂದುವರೆದರೆ ಹಿಂದೂ ಸಮಾಜ ಒಟ್ಟಾಗುತ್ತೆ ಎಂದು ನುಡಿದರು,
ಇವತ್ತು ಕಾಶ್ಮೀರ ಫೈಲ್ಸ್ ನಲ್ಲಿ ನೀವು ನೋಡೋದು ಸಣ್ಣ ತುಂಡಷ್ಟೇ. ದೇಶದಲ್ಲಿ ಧರ್ಮದ ಹತ್ಯೆ ಆದಾಗಲೂ ಷಂಡ ಕಾಂಗ್ರೆಸ್ ಒಪ್ಪಿಕೊಂಡಿತು. ಇವತ್ತು‌ ಅದೇ ರೀತಿ ಹಿಜಾಬ್ ಬಂದಿದೆ, ಕಿತಾಬ್ ಬೇಡ ಎಂದು ಹೇಳುತ್ತಿದ್ದಾರೆ. ಎಲ್ಲಾ ವ್ಯವಸ್ಥೆ ಕೊಟ್ಟರೂ ನಾವು ಪ್ರತ್ಯೇಕವಾದಿ ಅನ್ನೋ ಮನೋಭಾವ ಇದೆ. ಇದು ಈ ದೇಶವನ್ನು ಮುಂದೆ ತುಂಡು ಮಾಡುವ ಪ್ರಯತ್ನ ಎಂದು ವಾಗ್ದಾಳಿ ಮಾಡಿದರು.
ಇದೇ ವೇಳೆ ವಿಶ್ವಹಿಂದೂ ಪರಿಷತ್ ನೇತೃತ್ವದಲ್ಲಿ ಸಾವಿರಾರು ಭಕ್ತರು ಸುಮಾರು 15 ಕಿ.ಮೀ ನಡೆದುಕೊಂಡು ಬಂದು ಆದಿಕ್ಷೇತ್ರ ಕುತ್ತಾರು ತಲುಪಿದರು.
ಕಣ್ಣೆದುರೇ ಹಿಂದೂಗಳ ಶವಗಳ ರಾಶಿ, ಇಸ್ಲಾಂ ಒಪ್ಪಿಕೊಳ್ಳಲು ಬೆದರಿಕೆ… ಆಗಲೇ ಸರ್ಕಾರ ಮನಸ್ಸು ಮಾಡಿದ್ದರೆ…

ನಿದ್ದೆಗೆಡಿಸಿದ ‘ದಿ ಕಾಶ್ಮೀರ್​ ಫೈಲ್ಸ್’​: ಸಿನಿಮಾ ನೋಡಿ ಮರಳುತ್ತಿದ್ದ ಬಿಜೆಪಿ ಸಂಸದನ ಕಾರಿನ ಮೇಲೆ ಬಾಂಬ್‌!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
