ಬೆಂಗಳೂರು:ಈಗ ಎಲ್ಲೆಲ್ಲೂ ಡ್ರಗ್ಸ್‌ ಮಾಫಿಯಾದ್ದೇ ಮಾತು. ಸಿನಿಮಾ ರಂಗದಲ್ಲಿ ಡ್ರಗ್ಸ್‌ ಕುರಿತಂತೆ ವಿಪರೀತ ಚರ್ಚೆ ಶುರುವಾದ ಬೆನ್ನಲ್ಲೇ ಇದೀಗ ಇದು ರಾಜಕೀಯ ತಿರುವು ಪಡೆದುಕೊಂಡಿದೆ.
ಮಾಜಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಡಿ.ಸುಧಾಕರ ನಡುವೆ ಇದೀಗ ವಾಗ್ಯುದ್ಧವೇ ನಡೆಯುತ್ತಿದೆ.ನಿನ್ನೆ ಮಧ್ಯಾಹ್ನ ಕುಮಾರಸ್ವಾಮಿ ಅವರು ಟ್ವೀಟ್‌ ಮಾಡಿ, ಬೆಟ್ಟಿಂಗ್ ದಂಧೆ ಮಾಡುವವರಿಂದ ವಸೂಲಿ ಮಾಡಿದ ಹಣದಿಂದಲೇ ನನ್ನ ಸರಕಾರವನ್ನು ಬುಡಮೇಲು ಮಾಡಲಾಯಿತು ಎಂಬುದು ಸೂರ್ಯ-ಚಂದ್ರರಷ್ಟೇ ಸ್ಪಷ್ಟ. ಇದನ್ನು ಮುಂಬೈವೀರರು ಚೆನ್ನಾಗಿಯೇ ಬಲ್ಲರು. ಅದಕ್ಕೆ ಸಚಿವ ಸುಧಾಕರ್ ಹೊರತಲ್ಲ ಎಂದಿದ್ದರು.
ಇದಕ್ಕೆ ಕಿಡಿ ಕಾರಿರುವ ಡಾ ಸುಧಾಕರ್, ನಾನು ಯಾವ ಮುಂಬೈಗೂ ಹೋಗಿಲ್ಲ. ಡ್ರಗ್ ಮಾಫಿಯಾ ಹಣದಿಂದ ಈ ಸರ್ಕಾರ ಬಂದಿದ್ದರೆ, ಅದು ಖಂಡಿತ ಇರಬಾರದು. ಮಾಜಿ ಮುಖ್ಯಮಂತ್ರಿಗಳಾಗಿ ಇಂಥ ಗಂಭೀರ ಆರೋಪಗಳಿಗೆ ಪುರಾವೆಯನ್ನೂ ನೀಡಲೇಬೇಕಾಗುತ್ತದೆ. ಇದನ್ನು ತಾವು ಸಾಬೀತು ಮಾಡಿದರೆ ನಾನು ರಾಜೀನಾಮೆ ಕೊಡ್ತೀನಿ, ಆಗದಿದ್ದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವಿರಾ? ಎಂದು ಸವಾಲೆಸೆದಿದ್ದಾರೆ.
ಇದನ್ನೂ ಓದಿ:ಸಚಿವೆ ಶಶಿಕಲಾ ಜೊಲ್ಲೆಗೆ ಕರೊನಾ ಸೋಂಕು: ಮನೆಯಲ್ಲಿಯೇ ಕ್ವಾರಂಟೈನ್‌
‘ನಾನು ಮಾಜಿ ಮುಖ್ಯಮಂತ್ರಿ, ಮಾಜಿ ಪ್ರಧಾನಮಂತ್ರಿಯ ಮಗನಲ್ಲ, ಒಬ್ಬ ಸಾಮಾನ್ಯ ಶಾಲಾ ಶಿಕ್ಷಕನ ಮಗನಾಗಿ ಸ್ವಸಾಮರ್ಥ್ಯದಿಂದ, ಜನರ ಆಶೀರ್ವಾದದಿಂದ ರಾಜಕೀಯದಲ್ಲಿ ಸಕ್ರಿಯನಾಗಿದ್ದೇನೆ. ನಾನೆಂದೂ ಯಾರ ಹೆಸರಿನಲ್ಲೂ ರಾಜಕೀಯ ಮಾಡಿಲ್ಲ. ಎಲ್ಲರ ಹಿನ್ನೆಲೆಗಳನ್ನೂ ರಾಜ್ಯದ ಜನರು ಗ್ರಹಿಸಿದ್ದಾರೆ’ ಎಂದು ಕುಮಾರಸ್ವಾಮಿಗೆ ಕುಟುಕಿದ್ದಾರೆ ಸುಧಾಕರ್‌.
ಬಿಜೆಪಿ ಸಿದ್ಧಾಂತದ ಬಗ್ಗೆ ಮಾತನಾಡುವಷ್ಟು ಅರ್ಹತೆ ಸುಧಾಕರ್ ಅವರಿಗೆ ಬಂದಿದೆಯೇ ಎಂಬುದನ್ನು ಅವರ ಪಕ್ಷದ ಕಾರ್ಯಕರ್ತರು ಕೂಡ ಒಪ್ಪುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದರು. ಅದಕ್ಕೆ ತಿರುಗೇಟು ನೀಡಿರುವ ಸುಧಾಕರ್‌ ಅವರು, ಬಿಜೆಪಿ ಕಾರ್ಯಕರ್ತರ ಪರವಾಗಿ ಮಾತನಾಡಲು ನಮ್ಮಲ್ಲಿ ಅರ್ಹ ವಕ್ತಾರರು ಇದ್ದಾರೆ. ಪಕ್ಷದ ಸಿದ್ದಾಂತದ ಬಗ್ಗೆ ಅಥವಾ ನನ್ನ ಅರ್ಹತೆ ಬಗ್ಗೆ ನಮ್ಮ ಪಕ್ಷದ ಕಾರ್ಯಕರ್ತರು ನಿರ್ಣಯಿಸುತ್ತಾರೆ ಬಿಡಿ! ತಾವು ತಲೆಕೆಡಿಸಿಕೊಳ್ಳುವ ಅಗತ್ಯವೇನಿದೆ? ಎಂದು ಪ್ರಶ್ನಿಸಿದ್ದಾರೆ.
ನಸುಕಿನಲ್ಲಿಯೇ ಹಾಸನದಲ್ಲಿ ಗುಂಡಿನ ಸದ್ದು: ಜೋಡಿಕೊಲೆ ಆರೋಪಿ ಅರೆಸ್ಟ್‌

ಸೆಪ್ಟೆಂಬರ್‌ನಲ್ಲಿ ಬ್ಯಾಂಕ್‌ ರಜೆಗಳು ಎಷ್ಟಿವೆ? ಇಲ್ಲಿದೆ ನೋಡಿ ಮಾಹಿತಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − eight =
Remember me
