ಬೆಂಗಳೂರು:ಮಹಾಮಾರಿ ಕರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 7,8 ಮತ್ತು 9ನೇ ತರಗತಿ ಪರೀಕ್ಷೆಗಳನ್ನು ಮಾರ್ಚ್​ 31ರವರೆಗೆ ಮೂಂದೂಡುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್​ ಅವರು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ.
ಮಾರ್ಚ್​ 31ರ ನಂತರ ಕರೊನಾ ವೈರಸ್​ ಪರಿಸ್ಥಿತಿಯನ್ನು ನೋಡಿಕೊಂಡು ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ನಿಗದಿಪಡಿಸಲಾಗುವುದು ಎಂದು ಸಚಿವ ಸುರೇಶ್​ ಕುಮಾರ್​ ಹೇಳಿದ್ದಾರೆ.
ಕರೊನಾ ಭೀತಿಯಿಂದ ಈಗಾಗಲೇ ಎಲ್​.ಕೆ.ಜಿ ಮತ್ತು 1 ರಿಂದ 6ನೇ ತರಗತಿಯವರೆಗಿನ ಪರೀಕ್ಷೆಗಳನ್ನು ರದ್ದುಗೊಳಿಸಿ ಬೇಸಿಗೆ ರಜೆಯನ್ನು ಘೋಷಿಸಲಾಗಿದೆ. ಆಯಾ ತರಗತಿಗಳಲ್ಲಿ ಮಕ್ಕಳು ತೆಗೆದುಕೊಂಡ ಗ್ರೇಡ್​ಗಳ ಆಧಾರದ ಮೇಲೆ ಮುಂದಿನ ತರಗತಿಗೆ ಉತ್ತೀರ್ಣರನ್ನಾಗಿ ಮಾಡಲು ಶಿಕ್ಷಣ ಇಲಾಖೆ ಆಯಾ ಶಾಲೆಗೆ ಸೂಚಿಸಿದೆ.
ಇನ್ನೂ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಈಗಾಗಲೇ ಪರೀಕ್ಷಾ ಪೂರ್ವ ಸಿದ್ಧತೆ ಹೆಸರಿನಲ್ಲಿ ರಜೆಯನ್ನು ನೀಡಲಾಗಿದೆ. ವಿಧ್ಯಾರ್ಥಿಗಳು ಪರೀಕ್ಷೆಯ ದಿನ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆಯನ್ನು ಎದುರಿಸಲಿದ್ದಾರೆ. ಈ ವೇಳೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗದುಕೊಳ್ಳುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.


1ರಿಂದ 6ನೇ ತರಗತಿಯವರಿಗೆ ಬೇಸಿಗೆ ರಜೆ ರಾಜ್ಯದ ಎಲ್ಲ ಶಾಲೆಗಳಿಗೂ ಅನ್ವಯ: ಶಿಕ್ಷಣ ಇಲಾಖೆಯ ಹೊಸ ಸುತ್ತೋಲೆ

1- 6ನೇ ತರಗತಿ ಮಕ್ಕಳಿಗೆ ಮುಂದಿನ ವರ್ಗಕ್ಕೆ ಬಡ್ತಿ ನೀಡಿ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − six =
Remember me
