ಕೊಳ್ಳೇಗಾಲ:ಡ್ರಗ್ ದಂಧೆ ವಿಚಾರದಲ್ಲಿ ಯಾರೂ ಕೂಡ ರಾಜಕೀಯ ಮಾಡಬಾರದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.
ಶಾಸಕ ಜಮೀರ್ ಮೇಲೆ ಡ್ರಗ್ಸ್ ಮಾಫಿಯಾ ಆರೋಪ ಕೇಳಿಬರುತ್ತಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಡ್ರಗ್ಸ್ ದಂಧೆ ವಿಚಾರದಲ್ಲಿ ರಾಜಕೀಯ ಸಲ್ಲದು. ಡ್ರಗ್ಸ್ ಪಿಡುಗಿನ ವಿರುದ್ಧ ನಾವೆಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ. ಇಡೀ ಯುವ ಜನಾಂಗವನ್ನೇ ನಾಶ ಮಾಡುವ ದರಿದ್ರ ದಂಧೆ ಇದು. ಪಕ್ಷಗಳು, ರಾಜಕೀಯ ಮೀರಿ ನಾವೆಲ್ಲರೂ ಕೈ ಜೋಡಿಸಬೇಕಿದೆ. ಒಂದು ಮನಸ್ಸಿನಿಂದ ಎದುರಿಸದಿದ್ದರೇ ಭಸ್ಮಾಸುರನಾಗಿ ಎಲ್ಲರನ್ನೂ ಸುಡಲಿದೆ ಎಂದರು.
ಇದನ್ನೂ ಓದಿ:ಕರ್ನಾಟಕದಿಂದ ಮುಂಬೈಗೆ ಸೊಸೆಯಾಗಿ ತೆರಳಿದ್ದಾರೆ: ಒಗಟು ಮಾತು ಬಿಡಿಸಿ ಹೇಳಿದ ಪ್ರಶಾಂತ್​ ಸಂಬರಗಿ!
ಮಾಜಿ ಸಿಎಂ, ಕುಮಾರಸ್ವಾಮಿ ಹಾಗೂ ಸಿಎಂ ಯಡಿಯೂರಪ್ಪ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿ, ದಾಸರಹಳ್ಳಿ ಕ್ಷೇತ್ರದಲ್ಲಿ ಮಳೆಯಿಂದ ಬಹಳಷ್ಟು ಹಾನಿಯಾಗಿದ್ದು ತುರ್ತಾಗಿ ಹಣ ಬಿಡುಗಡೆ ಮಾಡಬೇಕೆಂದು ಸಿಎಂ ಯಡಿಯೂರಪ್ಪ ಅವರನ್ನು ಎಚ್ಡಿಕೆ ಭೇಟಿ ಮಾಡಿದ್ದು ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ಹೇಳಿದರು.
ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕುವ ವಿಚಾರದಲ್ಲಿ ಸಿದ್ದರಾಮಯ್ಯಗೆ ನಾನು ಸಂಪೂರ್ಣ ವಿಶ್ವಾಸ ಕೊಡುತ್ತೇನೆ. ಸರ್ಕಾರ ಬಹಳ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದು, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಕಾಂಗ್ರೆಸ್ ಅವರು ಉದ್ಯೋಗ ನೀಡಿ ಎಂಬ ಅಭಿಯಾನ ಕುರಿತ ಪ್ರಶ್ನೆಗೆ ಅವರಿಗೆ ಉದ್ಯೋಗ ನೀಡಲು ಸಾಧ್ಯವಿಲ್ಲ, ಕಷ್ಟವಿದೆ ಎಂದು ಸುರೇಶ್ ಕುಮಾರ್ ವ್ಯಂಗ್ಯ ಮಾಡಿದರು.
ಪ್ರೀತ್ಸಿ ಮದ್ವೆಯಾದ ದಂಪತಿಯ ಮರಣೋತ್ತರ ವರದಿಯಲ್ಲಿತ್ತು ಬಿಗ್​ ಟ್ವಿಸ್ಟ್​!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
