ಬೆಂಗಳೂರು:ಕನ್ನಡ ನೆಲದಲ್ಲಿ ನಡೆಯುವಂತಹ ಯಾವುದೇ ಶಾಲೆಯಾಗಿರಲಿ ಅಲ್ಲಿ ಕನ್ನಡ ಭಾಷೆಯ ಬೋಧನೆ ಕಡ್ಡಾಯವಾಗಿ ಆಗಲೇಬೇಕು. ಈ ಸಂಬಂಧದ ಕಡ್ಡಾಯ ಕನ್ನಡ ಕಲಿಕಾ ವಿಧೇಯಕ-2015ರ ಅನುಷ್ಠಾನಕ್ಕೆ ಅನಾದರ ಇಲ್ಲವೇ ನಿರ್ಲಕ್ಷ್ಯ ತೋರುವ ಶಿಕ್ಷಣಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:ಭಾರತ-ಚೀನಾ ಗಡಿ ವಿವಾದ; ಮಧ್ಯಸ್ಥಿಕೆ ವಹಿಸಲು ಸಿದ್ಧವೆಂದ ಯುಎಸ್​ ಅಧ್ಯಕ್ಷ ಟ್ರಂಪ್​
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಬುಧವಾರ ಕಡ್ಡಾಯ ಕನ್ನಡ ಕಲಿಕಾ ವಿಧೇಯಕ-2015ರ ಅನುಷ್ಠಾನದ ಪರಾಮಾರ್ಶೆ ಕುರಿತು ರಾಜ್ಯದ ಎಲ್ಲ ಡಿಡಿಪಿಐಗಳೊಂದಿಗೆ ನಡೆದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಇದಕ್ಕಾಗಿ 2015ರಲ್ಲಿ ಜಾರಿಗೆ ತರಲಾದ ಕನ್ನಡ ಕಲಿಕಾ ಕಾಯ್ದೆಯ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಶಿಕ್ಷಣ ಇಲಾಖೆ ಕಟಿಬದ್ಧವಾಗಿದೆ ಎಂದು ಹೇಳಿದರು.
ಈ ನೆಲದ ಕಾನೂನಿನ ಅನುಷ್ಠಾನದ ವಿಷಯದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಶಿಕ್ಷಣ ಇಲಾಖೆಯೊಂದಿಗೆ ನಿರ್ವಹಿಸುತ್ತಿರುವ ಸಮನ್ವಯ ಜವಾಬ್ದಾರಿ ನಿಜಕ್ಕೂ ಪ್ರೇರಣಾದಾಯಕ ಸಂಗತಿಯಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರಗಳು ಜೋಡೆತ್ತಿನಂತೆ ಕೆಲಸ ಮಾಡಲಿವೆ ಎಂದು ಸುರೇಶ್ ಕುಮಾರ್ ಹೇಳಿದರು.
ಇದನ್ನೂ ಓದಿ:ವಲಸೆ ಕಾರ್ಮಿಕರನ್ನು ತವರಿಗೆ ಕಳುಹಿಸಲು 70 ಸಾವಿರ ರೂ. ಖರ್ಚು ಮಾಡಿ ವಿಮಾನ ಟಿಕೆಟ್​ ಖರೀದಿಸಿದ ರೈತ!
ಕನ್ನಡ ನೆಲದಲ್ಲಿ ಓದುವ ಪ್ರತಿಯೊಂದು ಮಗುವೂ ಕನ್ನಡವನ್ನು ಕಲಿಯಬೇಕು. ಅರ್ಹ ಶಿಕ್ಷಕರು ಈ ಮಕ್ಕಳಿಗೆ ಕನ್ನಡ ಕಲಿಸಬೇಕು. ಇದನ್ನು ಕರ್ನಾಟಕದ ಎಲ್ಲ ಖಾಸಗಿ ಶಿಕ್ಷಣ ಸಂಸ್ಥೆಗಳು ಅರ್ಥೈಸಿಕೊಂಡು ಮಕ್ಕಳ ಹಿತದೃಷ್ಟಿಯಿಂದ ಸರ್ಕಾರದ ಈ ಕ್ರಮವನ್ನು ಬೆಂಬಲಿಸಬೇಕು ಎಂದು ಸುರೇಶ್ ಕುಮಾರ್ ಹೇಳಿದರು.
ಸರ್ಕಾರಿ ಶಾಲೆಗಳ ಸಬಲೀಕರಣ ಕುರಿತಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವರದಿಯಂತೆ ನಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲೇ ಉಳಿಸಿಕೊಳ್ಳಲು ತಮ್ಮದೇ ಆದ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ. ಈಗ ಕೂಲಿ ಮಾಡಿ ಜೀವನ ಸಾಗಿಸುವವರೂ ಸಹ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಲು ಮುಂದಾಗಿದ್ದಾರೆ. ಅದಕ್ಕೆ ಅವರು ತಮ್ಮ ದುಡಿಮೆಯ ಶೇ. 40 ಭಾಗ ವೆಚ್ಚ ಮಾಡುತ್ತಿದ್ದಾರೆ. ಆದರೆ ಸರ್ಕಾರಿ ಶಾಲೆಗಳನ್ನೇ ಸಬಲೀಕರಣ ಮಾಡಿ ಖಾಸಗಿ ಶಾಲೆಗಳಿಗಿಂತ ಹೆಚ್ಚಿನ ಗುಣಮಟ್ಟವನ್ನು ಕಾಪಾಡಿಕೊಂಡರೆ ಅವರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದಕ್ಕೆ ಮುಂದಾದರೆ ಅವರೆಲ್ಲಾ ಖಾಸಗಿ ಶಾಲೆಗಳಿವೆ ವೆಚ್ಚ ಮಾಡುವ ಶೇ. 40 ಭಾಗ ಹಣವನ್ನು ತಮ್ಮ ಕುಟುಂಬದ ಅಭಿವೃದ್ಧಿಗೆ ವಿನಿಯೋಗಿಸಬಹುದಾಗಿದೆ ಎಂದು ಸುರೇಶ್‌ ಕುಮಾರ್ ಹೇಳಿದರು.
ಈ ವರ್ಷದಿಂದಲೇ 1000 ಉಭಯ ಮಾಧ್ಯಮ ಶಾಲೆಗಳ ಪ್ರಾರಂಭ: ಸುರೇಶ್ ಕುಮಾರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
