ಬೆಂಗಳೂರು:ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ನಿಯೋಜನೆ ಮೇರೆಗೆ ಕಾರ್ಯ ನಿರ್ವಹಿಸುತ್ತಿರುವ ಮತ್ತು ಕಡ್ಡಾಯ ವರ್ಗಾವಣೆ ಹೊಂದಿದ ಶಿಕ್ಷಕರು ಮುಂದಿನ ಆದೇಶದವರೆಗೂ ಈಗ ಕಾರ್ಯ ನಿರ್ವಹಿಸುತ್ತಿರುವಲ್ಲೇ ಸೇವೆ ಮುಂದುವರಿಸಬೇಕಿದೆ.
ಇದನ್ನೂ ಓದಿ:ಗುಜರಾತ್‌ನಿಂದ ಬಿಹಾರಕ್ಕೆ ಹೊರಟಿದ್ದ ರೈಲು ತಲುಪಿದ್ದು ಕರ್ನಾಟಕಕ್ಕೆ!
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದು ಆದೇಶ ನೀಡಿದ್ದಾರೆ.
ಶಿಕ್ಷಕರ ಹೊಸ ವರ್ಗಾವಣಾ ನಿಯಂತ್ರಣ ಕಾಯ್ದೆಯ ನಿಯಮಗಳು ರೂಪುಗೊಳ್ಳುತ್ತಿದ್ದು, ಈ ನಿಯಮಗಳ ಆಧಾರದಲ್ಲಿ ಪ್ರಸಕ್ತ ಸಾಲಿನ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ.
ಇದನ್ನೂ ಓದಿ:ಪತ್ನಿಗೆ ಹಾವು ಕಚ್ಚಿಸಿ ಕೊಲೆಗೈದ ಪ್ರಕರಣ: ಆರೋಪಿ ಸಿಕ್ಕಿಬೀಳಲು ಆತನ ನಡೆಯೇ ಕಾರಣವಾಯ್ತು!
ಹೀಗಾಗಿ ಪ್ರಸ್ತುತ ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ನಿಯೋಜನೆ ಮೇರೆಗೆ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು, ಈ ಶೈಕ್ಷಣಿಕ ಸಾಲಿನಲ್ಲಿ ಕಡ್ಡಾಯವಾಗಿ ವರ್ಗಾವಣೆಗೊಳಗಾದ ಮತ್ತು ವರ್ಗಾವಣೆ ಹಿನ್ನೆಲೆಯಲ್ಲಿ ಸೇವೆಯಿಂದ ಬಿಡುಗಡೆ ಹೊಂದದಿರುವ ಶಿಕ್ಷಕರನ್ನು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲೇ ಮುಂದಿನ ಆದೇಶದವರೆಗೆ ಮುಂದುವರಿಸುವಂತೆ ಸಚಿವರು ಸೂಚಿಸಿದ್ದಾರೆ.
ತನ್ನ ದೇಶದ ನರಿಬುದ್ಧಿಯ ವಿರುದ್ಧವೇ ತಿರುಗಿಬಿದ್ದ ಚೀನಾ ಜನತೆ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + eleven =
Remember me
