ಬೆಂಗಳೂರು:ಖಾಸಗಿ ಅನುದಾನರಹಿತ ಶಾಲೆಗಳ ಶಿಕ್ಷಕರು ಹಾಗೂ ಶಿಕ್ಷಕೇತರರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಈ ಸಮುದಾಯಕ್ಕೆ ಸರ್ಕಾರದಿಂದ ಆರ್ಥಿಕ ಪ್ಯಾಕೇಜ್ ಘೋಷಿಸಬೇಕೆಂದು ಸಚಿವ ಎಸ್.ಸುರೇಶ್ ಕುಮಾರ್‌ ಮುಖ್ಯಮಂತ್ರಿಗಳನ್ನು ಮನವಿ ಮಾಡಿದ್ದಾರೆ.
ಶಿಕ್ಷಕರ ಪದವೀಧರ ಕ್ಷೇತ್ರಗಳ‌ ಶಾಸಕರ ನಿಯೋಗದೊಂದಿಗೆ ಇಂದು ಬೆಳಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಚಿವರು ಈ ಸಮುದಾಯದ ಸ್ಥಿತಿ ಶೋಚನೀಯವಾಗಿದ್ದು, ದೈನಂದಿನ ಜೀವನ ನಿರ್ವಹಣೆಯೂ ದುಸ್ತರವಾಗಿದೆ. ಜೀವನ ನಡೆಸಲು ಈ ಸಮುದಾಯದ ಹಲವಾರು‌ ಜನ ಹಣ್ಣು ತರಕಾರಿ ಮಾರುತ್ತಿದ್ದಾರೆ, ಕೂಲಿ ಕೆಲಸ‌ ಮಾಡಿದ್ದಾರೆ. ನಮ್ಮ ಮಕ್ಕಳ ಹಿತ ಕಾಯುವ ಸಮುದಾಯವನ್ನು ನಾವು ಘನತೆಯಿಂದ ನಡೆಸಿಕೊಳ್ಳುವುದು ಕರ್ತವ್ಯವಾಗಿದ್ದು, ಸರ್ಕಾರದ ಆರ್ಥಿಕ ಪ್ಯಾಕೇಜ್ ಈ ಸಮುದಾಯಕ್ಕೆ ಆತ್ಮ ವಿಶ್ವಾಸ ತುಂಬಲು ಸಹಕಾರಿಯಾಗಲಿದೆ ಎಂದರು.
ಸಚಿವರೊಂದಿಗೆ ವಿಧಾನ ಪರಿಷತ್ತಿನ ಸದಸ್ಯರಾದ ಡಾ.ವೈ.ಎ.ನಾರಾಯಣ ಸ್ವಾಮಿ, ಪುಟ್ಟಣ್ಣ, ಅರುಣ ಶಹಾಪುರ, ಶಶೀಲ್ ನಮೋಶಿ, ಸಂಕನೂರ, ಹನುಮಂತ ನಿರಾಣಿ, ಹಾಗೂ ಚಿದಾನಂದ ಗೌಡ ಉಪಸ್ಥಿತರಿದ್ದರು.
ಗೋಮಾತೆಯ ಅಪ್ಪುಗೆಯೇ ಚಿಕಿತ್ಸೆ: ತಾಸಿಗೆ 15 ಸಾವಿರ ರೂ. ಕೊಟ್ಟು ಹಸು ತಬ್ಬಿಕೊಳ್ಳುತ್ತಿರೋ ಅಮೆರಿಕನ್ನರು

ಹಣ್ಣು ಬೇಕಾ ಮಾವಿನಹಣ್ಣು…. ರೀಲ್‌ ಅಲ್ಲ ಇದು ರಿಯಲ್‌: ತೋಟದಲ್ಲಿ ಫುಲ್‌ ಬಿಜಿ ಈ ತುಮಕೂರು ಬೆಡಗಿ

ಮಗು ಇದ್ರೂ ಮತ್ತೊಂದು ಮದ್ವೆಯಾದ- ಇಬ್ಬರೂ ಪತ್ನಿಯರಿಂದ ಚಪ್ಪಲಿ, ಪೊರಕೆ ‘ಸೇವೆ’ ಮಾಡಿಸಿಕೊಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
