ಬೆಂಗಳೂರು:ವಿವಿಧ ಜಿಲ್ಲೆಗಳ ವಿವಿಧ ಮಠಗಳ ಮೂವತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ನಗರದ ಡಾಲರ್ಸ್‌ ಕಾಲೋನಿಯಲ್ಲಿರುವ ಡಿಸಿಎಂ ನಿವಾಸಕ್ಕೆ ಆಗಮಿಸಿದ ರಾಮನಗರ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಶ್ರೀಗಳು; ಮಾಗಡಿ ತಾಲೂಕಿನಲ್ಲಿರುವ ಸಂಸ್ಕೃತ ವಿಶ್ವವಿದ್ಯಾಲಯವನ್ನು ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಮಾಡುವುದೂ ಸೇರಿ ಕೆಲವಾರು ವಿಷಯಗಳ ಕುರಿತು ಡಿಸಿಎಂ ಅವರ ಚರ್ಚೆ ನಡೆಸಿದರು.
ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಕನ್ನಡಿಗರನ್ನೇ ನೇಮಕ ಮಾಡುವುದು ಹಾಗೂ ಸಂಸ್ಕೃತ ಪ್ರಸರಣೆಗೆ ಸೂಕ್ತ ಪ್ರೋತ್ಸಾಹ ಹಾಗೂ ಬಯಲುಸೀಮೆಯ ಈ ಜಿಲ್ಲೆಗಳಿಗೆ ನೀರಾವರಿ ಒದಗಿಸುವ ಬಗ್ಗೆ ಸ್ವಾಮೀಜಿಗಳು ಡಿಸಿಎಂ ಜತೆ ಮಾತುಕತೆ ನಡೆಸಿದರು.
ವಿವಿಧ ಜಿಲ್ಲೆಗಳ ವಿವಿಧ ಮಠಗಳ ಮೂವತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಭೇಟಿಯಾಗಿ ಮಾಗಡಿ ತಾಲೂಕಿನಲ್ಲಿರುವ ಸಂಸ್ಕೃತ ವಿಶ್ವವಿದ್ಯಾಲಯವನ್ನು ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಮಾಡುವುದೂ ಸೇರಿ ಕೆಲವಾರು ವಿಷಯಗಳ ಕುರಿತು ಮಾತುಕತೆ ನಡೆಸಿದರು.pic.twitter.com/vxWl7V3Yew
— Vijayavani (@VVani4U)June 11, 2021

ಅಖಿಲ ಭಾರತ ಸನಾತನ ಮಠಾಧಿಪತಿಗಳ ಒಕ್ಕೂಟದ ಸೇವಾ ಟ್ರಸ್ಟ್‌ ವತಿಯಿಂದ ಕೊಳದ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಬಸವಲಿಂಗ ಸ್ವಾಮೀಜಿ, ತುಮಕೂರು ಹಿರೇಮಠದ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ, ಸೋಲೂರು ಚಿಲುಮ ಮಠದ ಶ್ರೀ ಬಸವಲಿಂಗ ಸ್ವಾಮೀಜಿ, ಭದ್ರಗಿರಿ ಮಠದ ಶ್ರೀ ವೀರಭದ್ರ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ತಮ್ಮಿಡಿಹಳ್ಳಿ ಮಠದ ಶ್ರೀ ಸಿದ್ದಲಿಂಗ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಅನೇಕ ಶ್ರೀಗಳು ಆಗಮಿಸಿದ್ದರು.ಸ್ವಾಮೀಜಿ ನೀಡಿದ ಮನವಿ ಪತ್ರ ಸ್ವೀಕರಿಸಿದ ಡಿಸಿಎಂ ಅವರು, ಅತಿ ಶೀಘ್ರದಲ್ಲೇ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಕೆಲಸಗಳನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. ನಮ್ಮ ಸರ್ಕಾರ ‌ನೀರಾವರಿ ಯೋಜನೆಗಳ ಅನುಷ್ಠಾಕ್ಕೆ ಆದ್ಯತೆ‌ ನೀಡಲಿದೆ‌ ಎಂದು‌ ಡಿಸಿಎಂ ಅವರು ಸ್ವಾಮೀಜಿಗಳಿಗೆ ಭರವಸೆ ನೀಡಿದರು.
ಲಸಿಕೆ ನೀಡುವಾಗ ಹರಟೆ ಹೊಡೀತಿದ್ದ ನರ್ಸ್‌ ಮಾಡಿದಳು ಎಡವಟ್ಟು- ಎರಡು ಡೋಸ್‌ ಒಟ್ಟಿಗೇ ಪಡೆದವನ ಕಥೆ ಹರೋಹರ!

ಮತಕ್ಕಾಗಿ ಹಿಂದೂ ಜತೆ ಮದುವೆ, ಗರ್ಭದಲ್ಲಿ ಬೇರೆಯವರ ಮಗು? ಸಂಸದೆಯ ಬಂಡವಾಳ ಬಯಲು!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:14 − seven =
Remember me
