ಬೆಂಗಳೂರು:ತಮಿಳುನಾಡಿಗೆ ಕಾವೇರಿ ಒಂದು ರಾಜಕೀಯ ದಾಳ. ಸ್ವಾತಂತ್ರ್ಯ ದೊರೆತಾಗಿನಿಂದ ಕಾವೇರಿ ಹೆಸರಿನಲ್ಲಿಯೇ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಕಾವೇರಿ ಜಲವಿವಾದ ನ್ಯಾಯಮಂಡಳಿ ತೀರ್ಪು ನೀಡಿ ನೀರಿನ ಹಂಚಿಕೆಯಾಗಿದೆ. ನೀರನ್ನು ನೀಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇದೆ. ನಮ್ಮ ರಾಜ್ಯದಲ್ಲಿ ಹುಟ್ಟಿರುವ ಕಾವೇರಿ, ಇಲ್ಲಿ ಬಿದ್ದ ಮಳೆಯ ಆಧಾರದ ಮೇಲೆ ನಾವು ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಯನ್ನು ರೂಪಿಸಲಾಗಿದೆ. ಇಷ್ಟೆಲ್ಲಾ ಇದ್ದರೂ ತಮಿಳುನಾಡು ತಕರಾರು ಮಾಡುತ್ತಿದೆ. ವಿವಿಧ ಅರ್ಜಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದರು.
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನಮ್ಮ ಪರವಾಗಿ ಆದೇಶ ನೀಡಿದೆ. ತಮಿಳುನಾಡು ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಹಾಕಿದ್ದಾರೆ. ಸರ್ವ ಪಕ್ಷ ಸಭೆ ನಡೆಸಿ ಒಗ್ಗಟ್ಟಿನಿಂದ ಇದನ್ನು ಎದುರಿಸಲು ತೀರ್ಮಾನ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಣಯ ಮಾಡಿದ್ದಾರೆ. ಇದಕ್ಕೆ ಯಾವುದೇ ಬೆಲೆ ಇಲ್ಲ ಹಾಗೂ ಕಾನೂನಿನ ಮಾನ್ಯತೆಯೂ ಇಲ್ಲ. ರಾಜಕೀಯ ತಂತ್ರವಷ್ಟೇ ಎಂದರು.
ಸರ್ವ ಪಕ್ಷ ಸಭೆಯಲ್ಲಿ ನಿರ್ಣಯಿಸಿದಂತೆ ಡಿಪಿಆರ್ ಪಡೆದು ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆದು ಯೋಜನೆ ಅನುಷ್ಠಾನಕ್ಕೆ ಎಲ್ಲ ಕ್ರಮವನ್ನು ಸರ್ಕಾರ ತೆಗೆದುಗೊಳ್ಳಲಿದೆ ಎಂದರು.
ಶಿವಸೇನೆ ನಾಯಕ ಸಂಜಯ ರಾವತ್ ಅವರು ‘ಬೆಳಗಾವಿ ಫೈಲ್ಸ್‘ ಬರಬೇಕು, ಅಲ್ಲಿಯೂ ಅನೇಕ ಘಟನೆಗಳು ನಡೆದಿವೆ ಎಂದು ಆರೋಪಿಸಿರುವ ಬಗ್ಗೆ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿ, ಬೆಳಗಾವಿ ವಿಷಯದ ಬಗ್ಗೆ ಈಗಾಗಲೇ ತೀರ್ಪು ನೀಡಲಾಗಿದೆ. 1956 ನಲ್ಲಿ ರಾಜ್ಯ ಪುನರ್ ವಿಂಗಡಣೆ ಆಯೋಗದ ಅನುಗುಣವಾಗಿ ಆಗಿದೆ. ಕನ್ನಡ ಮಾತನಾಡುವ ಸೊಲ್ಲಾಪುರ, ಅಕ್ಕಲ್ ಕೋಟೆ ಭಾಗಗಳು ಮಹಾರಾಷ್ಟ್ರದಲ್ಲಿ ಉಳಿದಿವೆ. ಈ ರೀತಿ ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಬೆಳಗಾವಿ ಹೆಸರಿನಲ್ಲಿ ಅಲ್ಲಿರುವ ಸಮಸ್ಯೆಗಳ ದಿಕ್ಕು ಬದಲಾಯಿಸಲು ಈ ಕೆಲಸವನ್ನು ಮಾತನಾಡುತ್ತಾರೆ ಎಂದರು.
ಉ.ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಗೆಲುವು: ಪತ್ನಿಯನ್ನು ಥಳಿಸಿ ಹೊರಹಾಕಿದ ಪತಿ- ಎತ್ತಣೆತ್ತಣ ಸಂಬಂಧ ಅಂತೀರಾ?

ಹಿಜಾಬ್‌ ಕೇಸ್‌- ಬಂದ್‌ಗೆ ಕರೆ ನೀಡಿದವರ ವಿರುದ್ಧ ನ್ಯಾಯಾಂಗ ನಿಂದನೆ ತೂಗುಕತ್ತಿ! ಹೈಕೋರ್ಟ್‌ಗೆ ವಕೀಲರಿಂದ ಅರ್ಜಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 6 =
Remember me
