ಬೆಂಗಳೂರು:ಶಿಕ್ಷಕರ ಅನುಕೂಲಕ್ಕಾಗಿ ಅಭಿವೃದ್ಧಿ ಪಡಿಸಿರುವ ಶಿಕ್ಷಕ ಮಿತ್ರ ಆ್ಯಪ್ ಅನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಇಂದು ವಿಧಾನಸೌಧದಲ್ಲಿ ಬಿಡುಗಡೆ ಮಾಡಿದರು. ಇದು ರಾಜ್ಯದ ಎರಡೂವರೆ ಲಕ್ಷದಷ್ಟು ಶಿಕ್ಷಕರಿಗೆ ನೆರವಾಗಲಿದೆ ಎಂದು ಅವರು ಹೇಳಿದರು.
ಶಿಕ್ಷಕರ ಸಾರ್ವತ್ರಿಕ ವರ್ಗಾವಣೆ, ಕಚೇರಿ ಕೆಲಸ ಸೇರಿದಂತೆ ಎಲ್ಲಾ ಕಾರ್ಯಗಳನ್ನು ಒಂದೇ ಸೂರಿನಡಿ ಕಾರ್ಯ ನಿರ್ವಹಿಸುವ ಶಿಕ್ಷಣ ಇಲಾಖೆಯ ಆ್ಯಪ್‌ ಇದಾಗಿದೆ. ಶಿಕ್ಷಕರ ಆಡಳಿತಾತ್ಮಕ ಸಮಸ್ಯೆಗಳನ್ನು ಬಗೆಹರಿಸಲು ಇದನ್ನು ಅಭಿವೃದ್ಧಿ ಪಡಿಸಲಾಗಿದೆ.
ಮುಖ್ಯಮಂತ್ರಿ ಶ್ರೀ@BSYBJPರವರು ಇಂದು "ಶಿಕ್ಷಕ ಮಿತ್ರ" ಮೊಬೈಲ್ ಆ್ಯಪ್, ವಿದ್ಯಾವಿನೀತ ಹಾಗೂ ಶಿಕ್ಷಣ ಯಾತ್ರೆ ಪುಸ್ತಕಗಳನ್ನು ಬಿಡುಗಡೆ ಮಾಡಿದರು.
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಸಚಿವ@nimmasuresh, ವಿಧಾನ ಪರಿಷತ್ ಸದಸ್ಯರುಗಳಾದ@YAN_MLC,@ArunShahapurMLC, ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಉಪಸ್ಥಿತರಿದ್ದರು.pic.twitter.com/X7awcdv5c2
— CM of Karnataka (@CMofKarnataka)August 28, 2020

ಶಿಕ್ಷಕರು ತಮ್ಮ ಕೆಲಸಗಳಿಗಾಗಿ ಶಾಲೆಗಳಿಗೆ ರಜೆ ಹಾಕಿ ಇಲಾಖೆಯ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಸಲುವಾಗಿ ಶಿಕ್ಷಕರಿಗೆ ಅನುಕೂಲವಾಗುವಂತೆ 2019-20ರ ಆಯವ್ಯಯದಲ್ಲಿ ಪ್ರಕಟಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ತಂತ್ರಜ್ಞಾನಾಧಾರಿತವಾಗಿರುವ ಈ ಅಪ್ಲಿಕೇಷನ್‌ ತಯಾರಿಸಿದೆ. ಇದರ ಮೂಲಕ‌ ಶಿಕ್ಷಕರು ತಮ್ಮ ಸೇವಾ ವಿಷಯ ಹಾಗೂ ಸಮಸ್ಯೆಗಳನ್ನು ಬಗೆಹರಿಸಬಹುದು.ಇದರಿಂದ ಶಿಕ್ಷಕರ ಅಲೆದಾಟ ಮುಗಿಯಲಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನೂ ಆ್ಯಪ್ ಮೂಲಕ ಮಾಡಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು.
ಶಿಕ್ಷಕರು ಮೊಬೈಲ್‍ನಲ್ಲಿ ಈ ಆ್ಯಪ್‍ನ್ನು ಡೌನ್‌ಲೋಡ್‌ ಮಾಡಿಕೊಂಡು ತಾವು ಕುಳಿತಲ್ಲೇ ತಮ್ಮ ಸೇವಾ ವಿಷಯಗಳನ್ನು, ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು. ಅಲ್ಲದೆ, ನಿರ್ದಿಷ್ಟ ಸಮಸ್ಯೆಗಳನ್ನು ಇಂತಿಷ್ಟು ದಿನಗಳಲ್ಲಿ ಬಗೆಹರಿಸುವ ಬಗ್ಗೆ ಕಾಲಾವಕಾಶವನ್ನೂ ನಿರ್ಧರಿಸಲಾಗಿದೆ.
ಇದನ್ನೂ ಓದಿ:ಕರೊನಾಗೂ ಜಗ್ಗದೆ ಇವರಾದ್ರು ವಿಶ್ವದ ನಂ.1 ಕುಬೇರ: ಇತಿಹಾಸ ಬರೆದ ಸಿರಿವಂತನ ಡಿಟೇಲ್ಸ್‌ ಇಲ್ಲಿದೆ…
ಇದೇ ವೇಳೆ ವಿದ್ಯಾವಿನೀತ ಹಾಗೂ ಶಿಕ್ಷಣ ಯಾತ್ರೆ ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಕುರಿತು ನಾಡಿನ ಹಲವಾರು ಲೇಖಕರು ಬರೆದಿರುವ ವಿಮರ್ಶಾ ಕೃತಿ ‘ವಿದ್ಯಾವಿನೀತ’ ಹಾಗೂ ಸುರೇಶ್‌ಕುಮಾರ್‌ ಅವರು ಶಿಕ್ಷಣ ಸಚಿವರಾದ ನಂತರ ಇಲಾಖೆಯ ಕುರಿತು ವಿವಿಧ ಪತ್ರಿಕೆಗಳಿಗೆ ಬರೆದ ಲೇಖನಗಳ ಸಂಗ್ರಹ ‘ಶಿಕ್ಷಣ ಯಾತ್ರೆ’. ಶಿಕ್ಷಣ ಯಾತ್ರೆ ಪುಸ್ತಕದ ಲೇಖನಗಳು ಶಿಕ್ಷಕರಿಗೆ, ಪೋಷಕರಿಗೆ, ನಾಡಿನ ಜನರಿಗೆ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾಗಿವೆ ಎಂದು ಮುಖ್ಯಮಂತ್ರಿ ಹೇಳಿದರು.
ಡಿಜೆಹಳ್ಳಿ ಗಲಭೆಕೋರರಿಂದ ನಷ್ಟ ವಸೂಲಿಗೆ ಹೈಕೋರ್ಟ್‌ನಿಂದ ಕ್ಲೇಮ್ ಕಮಿಷನರ್‌ ನೇಮಕ

ವಿಡಿಯೋ: ಕೃಷಿಕರ ಕಮಾಲ್‌- ಬೈಕ್‌ನಿಂದ ಮೆಕ್ಕೆಜೋಳ ಬಿಡಿಸುವುದನ್ನು ನೋಡಿದ್ದೀರಾ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one + 1 =
Remember me
