ಬೆಂಗಳೂರು:ಈ ಬಾರಿಯ ಬಜೆಟ್​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭಾರಿ ಕೊಡುಗೆ ಸಿಕ್ಕಿದೆ. ಶಿಕ್ಷಕ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಶಿಕ್ಷಕರ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಆಗುವವರೆಗೆ ಸುಮಾರು 27,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಮೂಲಕ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ನಿರ್ವಹಿಸಲಾಗುತ್ತದೆ ಎಂದು ಬಜೆಟ್​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಷ್ಟೇ ಅಲ್ಲದೇ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ದಿಗೆ 500 ಕೋಟಿ ರೂ ಅನುದಾನ ಮೀಸಲಿಡಲಾಗಿದ್ದು, ಇದು ರಾಜ್ಯದಲ್ಲಿ ಮೊದಲ ಬಾರಿಗೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಆಯ್ದ ಪ್ರೌಢಶಾಲೆಗಳನ್ನು ಪಿಯು ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. ರಾಜ್ಯಾದ್ಯಂತ ಡಿಜಿಟಲ್​ ಗ್ರಂಥಾಲಯ ಸ್ಥಾಪನೆ, ಪ್ರತೀ ವರ್ಷ ಶಿಕ್ಷಕರಿಗೆ ಪುಲೆ ಪ್ರಶಸ್ತಿ ಘೋಷಣೆ,
ರಾಜ್ಯದ ಏಳು ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಕರ್ನಾಟಕ ತಂತ್ರಜ್ಞಾನ ಸಂಸ್ಥೆಗಳನ್ನಾಗಿ ಉನ್ನತೀಕರಣ ಮಾಡಲು ವಿದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಚಾಮರಾಜನಗರ, ಬೀದರ್ , ಹಾವೇರಿ , ಹಾಸನ, ಕೊಡಗು , ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ವಿನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಹೇಳಿದರು. ರಾಷ್ಟ್ರೀಯ ಶಿಕ್ಷಣ ನೀತಿ 2022ರ ಪ್ರಕಾರ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಮತ್ತು ವಯಸ್ಕ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ ಮಾಡಲು ಸರ್ಕಾರ ಯೋಜನೆ ಹಾಕಿಕೊಂಡಿದೆ.
ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣದ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಪೀಠೋಪಕರಣ ಒದಗಿಸಲು 100 ಕೋಟಿ ರೂ ಮೀಸಲಿಡಲಾಗಿದೆ. “ನೋಡಿ ಕಲಿ ಮಾಡಿ ತಿಳಿ” ಯೋಜನೆಯಡಿ ಕರ್ನಾಟಕದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್ -ಇನ್-ಎ-ಕಿಟ್ ವಿತರಣೆ ಮಾಡಲು ಕಾರ್ಯಕ್ರಮ ರೂಪಿಸಿದೆ.
ಸ್ನಾತ ಕೋತ್ತರ ವೈದ್ಯಕೀಯ ಕೋರ್ಸ್ ಗಳನ್ನು ಜಿಲ್ಲಾ ಮಟ್ಟದಲ್ಲಿ ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ. ಜೊತೆಗೆ ತುಮಕೂರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸ್ನಾತಕೋತ್ತರ ಪ್ರಾರಂಭಿಸಲಾಗುವುದು. ಸವಣೂರಿನಲ್ಲಿ ಹೊಸ ಆಯುರ್ವೆದ ಕಾಲೇಜು ಸ್ಥಾಪಿಸಲು ಯೋಜನೆ ಹಾಕಿಕೊಳ್ಳಲಾಗಿದೆ.
ಬಡವರಿಗೆ ಕೂಡ ವೈದ್ಯಕೀಯ ಶಿಕ್ಷಣ ಅವಕಾಶ ನೀಡುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದ್ದು, ಎಲ್ಲಾ ತಾಲೂಕಿನಲ್ಲಿ ನೀಟ್ ಪರೀಕ್ಷಾ ತರಬೇತಿ, ವೈದ್ಯಕೀಯ ಶಿಕ್ಷಣ ಪಡೆಯಲು ಇಚ್ಚಿಸುವ ಬಡ ವಿದ್ಯಾರ್ಥಿಗಳಿಗೆ ಬ್ಯಾಂಕ್‌ನಿಂದ ಶೈಕ್ಷಣಿಕ ಸಾಲ ಒದಗಿಸುವ ನೆರವು ನೀಡಲು ಸರ್ಕಾರ ಮುಂದಾಗಿದೆ.
ಶ್ರೀಮತಿ ಸಾವಿತ್ರಿಬಾಯಿ ಫುಲೆ ಅವರ ಹೆಸರಿನಲ್ಲಿ ರಾಜ್ಯಮಟ್ಟದ “ಆದರ್ಶ ಶಿಕ್ಷಕ/ಶಿಕ್ಷಕಿ” ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುವುದು. ಹಂಪಿ ಕನ್ನಡ ವಿಶ್ವವಿದ್ಯಾಲಯವನ್ನು ಇನ್ನಷ್ಟು ಬಲಪಡಿಸಲು ಹಾಗೂ ಮತ್ತಷ್ಟು ರಚನಾತ್ಮಕ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು. ಕೆ.ಪಿ.ಎಸ್.ಸಿ., ಯು.ಪಿ.ಎಸ್.ಸಿ., ಎಸ್.ಎಸ್.ಸಿ., ಬ್ಯಾಂಕಿಂಗ್, ರೈಲ್ವೆ, ಸಿ.ಡಿ.ಎಸ್., ನೀಟ್, ಜೆಇಇ ಮುಂತಾದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ “ಮುಖ್ಯಮಂತ್ರಿ ವಿದ್ಯಾರ್ಥಿ ಮಾರ್ಗದರ್ಶಿನಿ” ಎಂಬ ಹೊಸ ಯೋಜನೆಯಡಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ವೇದಿಕೆಯ ಮೂಲಕ ಉಚಿತ ಕೋಚಿಂಗ್ ಸೌಲಭ್ಯವನ್ನು ನೀಡಲಾಗುವುದು ಎಂದು ಸಿಎಂ ಹೇಳಿದರು.
ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಗುಡ್​ ನ್ಯೂಸ್​: ಗೌರವ ಧನ ಹೆಚ್ಚಳ

ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್​ ಪಾಸ್​ ವಿತರಣೆ, ಶ್ರೇಯೋಭಿವೃದ್ಧಿಗೆ 2,100 ಕೋಟಿ ರೂ. ಮೀಸಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + eleven =
Remember me
