ಬೆಂಗಳೂರು:ರಾಜ್ಯದಲ್ಲಿ ಮತ್ತೆ ಮಳೆ ಆತಂಕ ಎದುರಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸೆ.27ರಿಂದ ಸೆ.29ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.
ರಾಜ್ಯದಲ್ಲಿ ಸೆಪ್ಟೆಂಬರ್ ಮೊದಲ ವಾರದಲ್ಲಿ ಮಳೆ ಅಬ್ಬರಿಸಿತ್ತು. ನಂತರ 15 ದಿನ ಬಿಡುವು ಕೊಟ್ಟಿತ್ತು. ಹವಾಮಾನದಲ್ಲಿ ಏಕಾಏಕಿ ಬದಲಾವಣೆ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಸೋಮವಾರ ರಾಜಧಾನಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ದಿನ ಬಿಡುವು ಕೊಟ್ಟಿದ್ದ ವರುಣ ಶನಿವಾರ(ಸೆ.24) ಬೆಂಗಳೂರಿನಲ್ಲಿ ಧಾರಾಕಾರವಾಗಿ ಸುರಿದಿತ್ತು. ಹವಾಮಾನ ಇಲಾಖೆ ಮಳೆ ಬೀಳುವ ಬಗ್ಗೆ ಯಾವುದೇ ಮುನ್ಸೂಚನೆ ನೀಡದಿದ್ದರೂ ಅರ್ಧ ಗಂಟೆ ಕಾಲ ಮಳೆಯಾಗಿತ್ತು. ಈಗ ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮಳೆ ಬೀಳುತ್ತಿದೆ.
ಗುಲಾಂ ನಬಿ ಆಜಾದ್​ರಿಂದ ಹೊಸ ಪಕ್ಷದ ಅನಾವರಣ! ಕಾಂಗ್ರೆಸ್​ ಮಾಜಿ ನಾಯಕನ ಮುಂದಿನ ನಡೆ ಏನು?

ಮೂರು ಷರತ್ತಿನಿಂದ ಪೈಲಟ್​ರನ್ನು ಕಟ್ಟು ಹಾಕಿದ ಗೆಹ್ಲೋಟ್​: ಖುರ್ಚಿ ಏರುವ ಮುನ್ನವೇ ರಂಗೇರಿದ ಫೈಟಿಂಗ್!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:3 − two =
Remember me
