ಬೆಂಗಳೂರು: ಮಕ್ಕಳ ರಕ್ಷಣಾ ಪಡೆ ಮತ್ತು ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ಮಾಡಿ ಭಿಕ್ಷಾಟನೆ ಮಾಡುವವರನ್ನು ರಕ್ಷಣೆ ಮಾಡುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಮತ್ತು ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.
ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹಾಗೂ ಗೃಹಸಚಿವ ಜಂಟಿ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದ್ದಾರೆ. ಪ್ರಯಾಣಿಕರಿಗೆ ಹಿಂಸೆ ಕೊಡುವ, ಅವರ ಹಿಂದೆ ಬಿದ್ದು ಭಿಕ್ಷೆ ಬೇಡುವವರನ್ನು ಗುರುತಿಸಿ ರಕ್ಷಣೆ ಮಾಡಲಾಗುವುದು. ಎಲ್ಲಾ ಜಿಲ್ಲೆಗಳಲ್ಲೂ ಈ ಕಾರ್ಯಾಚರಣೆ ನಡೆಯಲಿದೆ. ಜಿಲ್ಲಾಧಿಕಾರಿಗಳ ಮಟ್ಟದ ಸಮಿತಿ ನಿರ್ದೇಶನದಲ್ಲಿ ಈ ಕೆಲಸ ಆಗಲಿದೆ ಎಂದು ಅವರು ಹೇಳಿದರು.
ಭಿಕ್ಷಾಟನೆ ನಿಷೇಧ ಎನ್ನುವುದು ನಗರಕ್ಕೆ ಸೀಮಿತ ಅಲ್ಲ. ಇಡೀ ರಾಜ್ಯಕ್ಕೆ ಅನ್ವಯ ಆಗಲಿದೆ. ಮೊದಲ‌ ಹಂತದಲ್ಲಿ ಬೆಂಗಳೂರಿನಲ್ಲಿ ತಾಯಿ, ಮಕ್ಕಳನ್ನ ರಕ್ಷಣೆ ಮಾಡುವ ಕೆಲಸ ಆಗಲಿದೆ. ಮೂರು ರೀತಿ ಭಿಕ್ಷುಕರು ಕಾಣಸಿಗುತ್ತಾರೆ. ವಯೋ ಸಹಜ, ಮನಸಿಕ ಅಸ್ವಸ್ಥರು, ತೃತಿಯ ಲಿಂಗಿಗಳು ಹಾಗೂ ಮಕ್ಕಳ ಭಿಕ್ಷಾಟನೆ ಕಂಡುಬರುತ್ತದೆ ಎಂಬ ಮಾಹಿತಿಯನ್ನು ಸಚಿವರು ನೀಡಿದರು.
ಕಾರ್ಮಿಕ ಇಲಾಖೆ, ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಇದಾಗಲೇ 80 ಮಕ್ಕಳನ್ನು ರಕ್ಷಿಸಿ ನಿರ್ಭಯ ಕೇಂದ್ರಕ್ಕೆ ಸೇರಿಸಲಾಗಿದೆ. ತಾಯಿ, ಮಗು ಸಂರಕ್ಷಣೆ ಮಾಡಿ, ಕಾನೂನಿನ ಚೌಕಟ್ಟಿನಲ್ಲಿ ರಕ್ಷಣೆ ಕೊಡಲಾಗುತ್ತದೆ. ನ್ಯಾಯಾಲಯದ ಸೂಚನೆ ಮೇರೆಗೆ ನಗರ ಪ್ರದೇಶಕ್ಕೆ ಸೀಮಿತವಾಗಿ, 18 ವರ್ಷದ ಒಳಗಿನ 720 ಮಕ್ಕಳನ್ನು ಗುರುತಿಸಿ ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ 8 ವಿಭಾಗಗಳಲ್ಲಿ ಎಸಿಪಿಗಳನ್ನುನೇಮಕ ಮಾಡಲಾಗಿದೆ. ಎಸಿಪಿಗಳು ಮಕ್ಕಳನ್ನು ರಕ್ಷಿಸಿ, ಮಕ್ಕಳ ರಕ್ಷಣಾ ಕೇಂದ್ರಕ್ಕೆ ಸೇರಿಸುತ್ತಿದ್ದಾರೆ ಎಂದರು.
ಭಿಕ್ಷಾಟನೆ ನಿಷೇಧ ಕಾಯ್ದೆ ಜಾರಿಗೆ ತರಲು ಸಮಾಜ ಕಲ್ಯಾಣ ಇಲಾಖೆ ಸಂಪೂರ್ಣ ಬದ್ದವಾಗಿದೆ. ತಾಯಿ, ಮಗು ಬೀದಿಯಲ್ಲಿ ಭಿಕ್ಷೆ ಬೇಡುವುದು ತಪ್ಪಿಸಲಾಗುವುದು. ಇದಕ್ಕೆ ಬೇಕಾದ ವಾಹನ, ಊಟ ಎಲ್ಲಾ ಆರ್ಥಿಕ ವ್ಯವಸ್ಥೆ ಮಾಡಲಾಗಿದೆ ಎಂದರು.

ಗಂಡಸರೇ ಹುಷಾರ್​! ಜೀನ್ಸ್​ ಧರಿಸಲು ಬಿಡುವುದಿಲ್ಲ ಎನ್ನುವ ಕಾರಣಕ್ಕೆ ಪತಿಯನ್ನೇ ಇರಿದು ಕೊಂದ ‘ಧರ್ಮಪತ್ನಿ’!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
