ಬೆಂಗಳೂರು:ರೈಲ್ವೆ ಇಲಾಖೆಯಿಂದ ಕೆಲವೊಂದು ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಲವಾರು ರೈಲುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೆಲವು ರೈಲುಗಳ ಸಂಚಾರ ರದ್ದತಿ ಕುರಿತು ಮೊದಲೇ ಮಾಹಿತಿ ಇಲ್ಲದ್ದರಿಂದ ಪ್ರಯಾಣಿಕರು ಪರದಾಡುವಂತಾಗಿದೆ
ಯಾವ್ಯಾವ ರೈಲುಗಳು ಸ್ಥಗಿತಗೊಂಡಿವೆ?– ಬೆಂಗಳೂರು ಹಾಗೂ ಮಂಗಳೂರಿನ ನಡುವೆ ಸಂಚರಿಸುವ ರೈಲನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.
– ಸುಬ್ರಹ್ಮಣ್ಯ ರಸ್ತೆ ಹಾಗೂ ಮಂಗಳೂರು ಸೆಂಟ್ರಲ್‌ ಮಧ್ಯದ ಪ್ರಯಾಣಿಕರ ವಿಶೇಷ ರೈಲು (ಸಂಖ್ಯೆ 06488/06489), ಮಂಗಳೂರು ಸೆಂಟ್ರಲ್ ಹಾಗೂ ಕಬಕ ಪುತ್ತೂರು ಪ್ರಯಾಣಿಕರ ರೈಲುಗಳು (06487/06486) ಮಾ.17 ರಿಂದ 20ರವರೆಗೆ ಸಂಚರಿಸುವುದಿಲ್ಲ.
– ಯಶವಂತಪುರ–ಮಂಗಳೂರು ಎಕ್ಸ್‌ಪ್ರೆಸ್‌ ರೈಲು(16575/16576) ಮಾ.17 ಮತ್ತು 18ರಂದು ಇರುವುದಿಲ್ಲ. ಯವಂತಪುರ–ಮಂಗಳೂರು ಎಕ್ಸ್‌ಪ್ರೆಸ್‌(16539/16540) ರೈಲು ಮಾ.19 ಮತ್ತು 20ರಂದು ಸಂಚರಿಸುವುದಿಲ್ಲ.
– ಪಡೀಲ್ ಮತ್ತು ಕುಲಶೇಖರ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾಮಗಾರಿ ನಿರ್ವಹಿಸಲು ಮಾರ್ಚ್​ 17 ಮತ್ತು 18ರಂದು ಒಟ್ಟು 18 ರೈಲುಗಳ ಸಂಚಾರ ರದ್ದಾಗಿದೆ.
– ಪುಣೆ – ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲು (11097/11098) ಮಾ.19ರಂದು ಮತ್ತು 21ರಂದು ರದ್ದಾಗಿದೆ. ಯಶವಂತಪುರ ಹಾಗೂ ಕಾರವಾರ ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರ (16515/16516) ಮಾ.18 ಮತ್ತು 19ರಂದು ಇರುವುದಿಲ್ಲ.
– ಬೆಂಗಳೂರು–ಕಾರವಾರ ಎಕ್ಸ್‌ಪ್ರೆಸ್‌ (16595/16596), ಯಶವಂತಪುರ–ಕಣ್ಣೂರು ಎಕ್ಸ್‌ಪ್ರೆಸ್‌ (16511/16511), ಕೆಎಸ್ಆರ್ ಬೆಂಗಳೂರು – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ (16585/16586) ರೈಲುಗಳು ಸಂಚಾರ ಮಾ.19 ಮತ್ತು 20ರಂದು ಇರುವುದಿಲ್ಲ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ ಹೆಗಡೆ ತಿಳಿಸಿದ್ದಾರೆ.
ಅನುಮತಿ ಸಿಕ್ಕ ಕೂಡಲೇ ದಿಢೀರ್ ನಿರ್ಧಾರ ಕೈಗೊಂಡಿರಬಹುದು. ರೈಲು ಸಂಚಾರ ರದ್ದಾಗಿರುವುದು ತಾತ್ಕಾಲಿಕ ಅಷ್ಟೆ. ಜೋಡಿ ಮಾರ್ಗದ ಕಾಮಗಾರಿ ಒಮ್ಮೆ ಪೂರ್ಣಗೊಂಡರೆ ಅನುಕೂಲ ಆಗಲಿದೆ. ಪ್ರಯಾಣಿಕರು ಸಹಕರಿಸಬೇಕು’ ಎಂದು ನೈರುತ್ಯ ರೈಲ್ವೆ ವಿಭಾಗದ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಕೆಲಸ ಬೇಕೆಂದರೆ ಸೊಸೆಯನ್ನು ಹೊರಹಾಕು ಎಂದ ದೇವಾಲಯ- ಕಲಾವಿದನ ಬಾಳಲ್ಲಿ ಇದೆಂಥ ದುರಂತ?

‘ಜೇಮ್ಸ್’​ ಸಂಭ್ರಮಕ್ಕೆ ಅಡ್ಡಿಯಾದ ಹಿಜಾಬ್​: ಕಾರ್ಯಕ್ರಮ ಕ್ಯಾನ್ಸಲ್​- ಅಪ್ಪು ಅಭಿಮಾನಿಗಳ ಕಣ್ಣೀರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
