ಬೆಂಗಳೂರು:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ವತಿಯಿಂದ ನಾಳೆ (ಬುಧವಾರ) ಬಿಎಂಟಿಸಿ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ. ಅರ್ಧ ವೇತನ, ಅಧಿಕಾರಿಗಳಿಂದ ನಿಲ್ಲದ ಕಿರುಕುಳ, ಬಗೆಹರಿಯದ ರಜೆಗಳ ಸಮಸ್ಯೆ ಮುಂತಾದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಪ್ರತಿಭಟನೆ ನಡೆಯಲಿದೆ.
ಕಳೆದ ಡಿಸೆಂಬರ್​ನಿಂದ ಸಾರಿಗೆ ನೌಕರರಿಗೆ ಸರಿಯಾಗಿ ಸಂಬಳ ನೀಡುತ್ತಿಲ್ಲ. ಮುಷ್ಕರದ ನಂತರ ನೌಕರರ ಮೇಲೆ ಕಿರುಕುಳ ಹೆಚ್ಚಾಗಿದೆ. ಹೀಗಾಗಿ ನಾವು ನಾಳೆ ಸಾಂಕೇತಿಕವಾಗಿ ಒಂದು ದಿನ ಮುಷ್ಕರ ಮಾಡಲು ಮುಂದಾಗಿರುವುದಾಗಿ ನೌಕರರು ಹೇಳಿದ್ದಾರೆ.
ಆದರೆ ಈ ಪ್ರತಿಭಟನೆಯಿಂದ ನಾಳೆ ಬಸ್​ ಸಂಚಾರದಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣಸವದಿ ತಿಳಿಸಿದ್ದಾರೆ.ಸಾರಿಗೆ ನೌಕರರ ವೇತನ ಪಾವತಿಸುವಂತೆ ಸೂಚನೆ ನೀಡಲಾಗಿದೆ. ಅವರ ವೇತನದಲ್ಲಿ ಯಾವುದೇ ತೊಂದರೆ ಮಾಡುವುದಿಲ್ಲ. ನಾಳೆ ಬಸ್ ಸಂಚಾರದಲ್ಲಿಯೂ ವ್ಯತ್ಯಯವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ಕರೊನಾ ಹಿನ್ನೆಲೆಯಲ್ಲಿ ಆರ್ಥಿಕ ಸಂಷ್ಟದಿಂದ ವೇತನದಲ್ಲಿ ಕೊಂಚ ಏರುಪೇರಾಗಿತ್ತು. ಈಗ ಸಾರಿಗೆ ನೌಕರರ ವೇತನವನ್ನು ನೀಡಲಾಗುವುದು. ಇದಾಗಲೇ ನೌಕರರು ಹಲವು ಬೇಡಿಕೆಗಳನ್ನು ಸಲ್ಲಿಸಿದ್ದರು. ಈ ಪೈಕಿ ಕೆಲವು ಕಾರ್ಯಸಾಧು ಬೇಡಿಕೆಗಳನ್ನು ಈಡೇರಿಸಿದೆ. ಉಳಿದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಿದೆ ಎಂದರು.
ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು, ಆರೋಗ್ಯ ವಿಮೆ, ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ನೌಕರರಿಗೆ 30 ಲಕ್ಷ ಪರಿಹಾರ ನೀಡಬೇಕು, ತರಬೇತಿ ಅವಧಿ ಕಡಿತ, ಅಧಿಕಾರಿಗಳ ಕಿರುಕುಳ, ಕರ್ತವ್ಯದ ಅವಧಿ ಕಡಿತ ಮಾವುದೂ ಸೇರಿದಂತೆ 12 ಬೇಡಿಕೆಗಳನ್ನು ಮುಂದಿಟ್ಟು ನಡೆಸಿದ್ದ ಪ್ರತಿಭಟನೆಗೆ ಸರ್ಕಾರ ಮೂರು ತಿಂಗಳ ಕಾಲವಕಾಶ ಕೇಳಿತ್ತು. ಈಗಾಗಲೇ ಎರಡು ತಿಂಗಳು ಮುಗಿದಿದ್ದು, ಸರ್ಕಾರ ಯಾವುದೇ ಬೇಡಿಕೆ ಈಡೇರಿಸಿಲ್ಲ ಎನ್ನುವುದು ನೌಕರರ ಆರೋಪ.
ಕುಡಿದ ಅಮಲಲ್ಲಿ ಮರ್ಮಾಂಗವನ್ನೇ ಕಚ್ಚಿ ತುಂಡರಿಸಿದ ಭೂಪ- ಅದನ್ನು ಹಿಡಿದುಕೊಂಡೇ ಆಸ್ಪತ್ರೆಗೆ ದಾಖಲು

ಅಂತ್ಯಕ್ರಿಯೆ ಮುಗಿಸಿ ಬರುವಾಗ ಭೀಕರ ಅಪಘಾತ: 6 ಮಂದಿ ಸ್ಥಳದಲ್ಲೇ ಸಾವು

ಬಿಜೆಪಿ ಮುಖಂಡನ ಮುಖಕ್ಕೆ ಮಸಿ ಬಳಿದರೆ ಲಕ್ಷ ಬಹುಮಾನ: ಕಾಂಗ್ರೆಸ್‌ ನಾಯಕಿ ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
