ತುಮಕೂರು:ತುಮಕೂರು ಮಹಾನಗರ ಪಾಲಿಕೆ ಮೇಯರ್ ಉಪ ಮೇಯರ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ.
ತುಮಕೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮೇಯರ್ ಆಗಿ ಕಾಂಗ್ರೆಸ್ ಕಾರ್ಪೋರೇಟರ್ ಪ್ರಭಾವತಿ ಸುದೀಶ್ವರ್ ಅವಿರೋಧ ಆಯ್ಕೆಯಾಗಿದ್ದಾರೆ. ಇವರು ಮಾತ್ರ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪ ಮೇಯರ್ ಆಗಿ ಜೆ.ಡಿ.ಎಸ್​ನ ಕಾರ್ಪೋರೇಟರ್ ನರಸಿಂಹಮೂರ್ತಿ ಆಯ್ಕೆಯಾಗಿದ್ದಾರೆ. ಉಪ ಮೇಯರ್ ಸ್ಥಾನಕ್ಕೆ ಜೆಡಿಎಸ್- ಬಿಜೆಪಿ ನಡುವೆ ಪೈಪೋಟಿ ಏರ್ಪಟ್ಟಿತ್ತು. ಬಿಜೆಪಿಯಿಂದ ಕಾರ್ಪೋರೇಟರ್ ಮಲ್ಲಿಕಾರ್ಜುನ ನಾಮಪತ್ರ ಸಲ್ಲಿಸಿದ್ದರು. ಆದರೆ ಕೊನೆ ಕ್ಷಣದಲ್ಲಿ ಸ್ಪರ್ಧೆಯಿಂದ ಇವರು ಹಿಂದೆ ಸರಿದರು.
ಈ ಹಿನ್ನೆಲೆಯಲ್ಲಿ ಉಪಮೇಯರ್ ಆಗಿ ಜೆಡಿಎಸ್ ನರಸಿಂಹಮೂರ್ತಿ ಅವಿರೋಧ ಆಯ್ಕೆಯಾದರು. ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು. (ದಿಗ್ವಿಜಯ ನ್ಯೂಸ್​)
ಮಂಗಳೂರು ಪಾಲಿಕೆ ಬಿಜೆಪಿ ತೆಕ್ಕೆಗೆ: ಜಯಾನಂದ ಅಂಚನ್ ಮೇಯರ್​, ಪೂರ್ಣಿಮಾ ಉಪ ಮೇಯರ್​

ಆತ್ಮಹತ್ಯೆಗೆ ಮುಂದಾದ ಯುವಕನ ಕಾಪಾಡಿದ ಫೇಸ್​ಬುಕ್​! ಉತ್ತರ ಪ್ರದೇಶ ಸರ್ಕಾರದ ಚಮತ್ಕಾರ…

ಕನ್ನಡದಲ್ಲಿ ಬರೆದ ಚೆಕ್​ ಅಮಾನ್ಯ: ಎಸ್​ಬಿಐಗೆ ಧಾರವಾಡದ ಗ್ರಾಹಕರ ಕೋರ್ಟ್​ನಿಂದ ದಂಡ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 − 5 =
Remember me
