ತುಮಕೂರು:ಬೆಂಕಿಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ, ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ನಡೆದಿದೆ.
ತೇಜಾ (19) ಆತ್ಮಹತ್ಯೆ ಮಾಡಿಕೊಂಡು ವಿದ್ಯಾರ್ಥಿನಿ. ಈಕೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂದು ಬೆಳಗಿನಜಾವ 4.30ರ ಸುಮಾರಿನಲ್ಲಿ ಘಟನೆ ಸಂಭವಿಸಿದೆ.
ತೇಜಾ, ಪಾವಗಡದಲ್ಲಿ ಮೊದಲನೇ ವರ್ಷದ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದಳು. ಇದೇ ಮೇ 24-25 ರಂದು ಮದುವೆ ನಿಶ್ಚಯವಾಗಿತ್ತು‌. ಪೋಷಕರು ಮದುವೆ ಆಮಂತ್ರಣ ಪತ್ರಿಕೆಯನ್ನು ಎಲ್ಲಾ ಕಡೆ ಕೊಟ್ಟಿದ್ದರು‌.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈಕೆಗೆ ಮದುವೆ ಇಷ್ಟವಿರಲಿಲ್ಲವೋ ಅಥವಾ ಇನ್ನಾವ ಕಾರಣದಿಂದ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್)
ಪ್ರಿಯಕರನ ಲೈಂಗಿಕ ಆಸೆ ಈಡೇರಿಸಲು ಮಗಳನ್ನೇ ಆತನ ಬಳಿ ಬಿಟ್ಟ ಪಾಪಿ ತಾಯಿ!

ಅಪ್ಪನನ್ನು ಹೊರದಬ್ಬಿದ ಮಗನಿಗೆ ಕೋರ್ಟ್‌ ಛೀಮಾರಿ: ಜಡ್ಜ್‌ ಎದುರೇ ಕಾಲು ತೊಳೆದು ಕ್ಷಮೆ ಕೋರಿದ ವಂಶೋದ್ಧಾರಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
