ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್​ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ, ಟೈಪಿಸ್ಟ್, ಸ್ಟೆನೋಗ್ರಾಫರ್, ಪ್ರೊಸೆಸ್ ಸರ್ವರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು ಹುದ್ದೆಗಳು: 56 ಇವೆ.ಕಲಬುರಗಿಯ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ1, ಪ್ರವರ್ಗ2ಎ, ಪ್ರವರ್ಗ2ಬಿ, ಪ್ರವರ್ಗ3ಎ, ಪ್ರವರ್ಗ 3ಬಿ, ಸಾಮಾನ್ಯ ಅಭ್ಯರ್ಥಿಗಳಿಗೆ ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಇದರಲ್ಲಿ ಮಹಿಳೆ, ಗ್ರಾಮೀಣ ಅಭ್ಯರ್ಥಿ, ಮಾಜಿ ಸೈನಿಕ, ಕನ್ನಡ ಮಾಧ್ಯಮ, ಯೋಜನೆ ನಿರಾಶ್ರಿತರು, ಅಂಗವಿಕಲರಿಗೆ ಸ್ಥಾನಗಳನ್ನು ಪ್ರತ್ಯೇಕವಾಗಿರಿಸಲಾಗಿದೆ.
ಹುದ್ದೆ- ಸಂಖ್ಯೆ* ಜವಾನ (ಪ್ಯೂನ್) – 44* ಶೀಘ್ರಲಿಪಿಗಾರ (ಸ್ಟೆನೋಗ್ರ್ರಾಫರ್) – 8* ಟೈಪಿಸ್ಟ್ – 1* ಟೈಪಿಸ್ಟ್-ಕಾಪಿಯಿಸ್ಟ್ – 1* ಪ್ರೊಸೆಸ್ ಸರ್ವರ್ (ಆದೇಶ ಜಾರಿಕಾರರು) – 2
ವಿದ್ಯಾರ್ಹತೆ:ಎಸ್ಸೆಸ್ಸೆಲ್ಸಿ ಉತ್ತೀರ್ಣ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.ಕನ್ನಡ ಮತ್ತು ಇಂಗ್ಲಿಷ್ ಶೀಘ್ರಲಿಪಿ, ಕಿರಿಯ, ಹಿರಿಯ ಶ್ರೇಣಿ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:ಅರ್ಜಿ ಸಲ್ಲಿಕೆಯ ಕೊನೇ ದಿನಕ್ಕೆ ಅನುಗುಣವಾಗಿ ಕನಿಷ್ಠ 18 ವರ್ಷ, ಗರಿಷ್ಠ ಸಾಮಾನ್ಯವರ್ಗ – 35 ವರ್ಷ, 2ಎ/ 2ಬಿ/3ಎ/ 3ಬಿ- 38 ವರ್ಷ, ಎಸ್‍ಸಿ, ಎಸ್‍ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷ. ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.
ಆಯ್ಕೆ ಪ್ರಕ್ರಿಯೆ:ಹುದ್ದೆಗೆ ಅನುಗುಣವಾಗಿ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನ ನಡೆಸಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕ ಆಧರಿಸಿ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:ಎಸ್‍ಸಿ, ಎಸ್‍ಟಿ, ಪ್ರವರ್ಗ 1 ಮತ್ತು ಅಂಗವಿಕಲ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳು 200 ರೂ. ಶುಲ್ಕ ಪಾವತಿಸಬೇಕು. ಶುಲ್ಕವನ್ನು ಚಲನ್ ಮೂಲಕ ಪಾವತಿಸಲು 02.01.2021 ಕಡೇ ದಿನ.
ಅರ್ಜಿ ಸಲ್ಲಿಸಲು ಕೊನೇ ದಿನ: 31.12.2020ಅಧಿಸೂಚನೆಗೆ:https://bit.ly/36QBVFmಮಾಹಿತಿಗೆ:https://districts.ecourts.gov.in/kalaburagi
ಇನ್ನೂ ಹೆಚ್ಚಿನ ಉದ್ಯೋಗಗಳ ಮಾಹಿತಿಗೆ https://www.vijayavani.net/ ವಿಭಾಗದ ಅಂಕಣ ಕಾಲಂನಲ್ಲಿ ಉದ್ಯೋಗಮಿತ್ರ ಕ್ಲಿಕ್ಕಿಸಿ.
ಟೈಪಿಂಗ್, ಶೀಘ್ರಲಿಪಿ ಗೊತ್ತಾ? ಹಾಗಿದ್ದರೆ ನ್ಯಾಷನಲ್ ಏರೋಸ್ಪೇಸ್ ಲ್ಯಾಬ್​ನಲ್ಲಿದೆ ಉತ್ತಮ ಅವಕಾಶ

ಯಾವುದೇ ಪದವಿಧರರಾದರೂ ಬ್ಯಾಂಕ್ ಆಫ್ ಬರೋಡಾದಲ್ಲಿ ಕೆಲಸ ಖಾಲಿ ಇದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
