ಬೆಂಗಳೂರು:ಯೂಕ್ರೇನ್‌ನಿಂದ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ವಿದೇಶಾಂಗ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಆರ್.ಟಿ.ನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಇಂದು ಬೆಳಿಗ್ಗೆ ಕೇಂದ್ರ ವಿದೇಶಾಂಗ ಸಚಿವರ ಜೊತೆ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರ ಭಾರತೀಯರ ವಾಪಸಾತಿಗೆ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ವಿಮಾನಯಾನ ಸ್ಥಗಿತಗೊಂಡಿರುವ ಕಾರಣ ಭೂಸಾರಿಗೆ ಮೂಲಕ ಭಾರತೀಯರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವ ಸಾಧ್ಯತೆಯ ಬಗ್ಗೆ ಪರಿಶೀಲಿಸಲಾಗುತ್ತಿದೆ. ಯೂಕ್ರೇನ್‌ನ ಪಶ್ಚಿಮ ಭಾಗದಲ್ಲಿ ರಕ್ಷಣಾ ಕಾರ್ಯಾಚರಣೆ ಮಾಡಬಹುದಾಗಿದೆ ಎಂಬ ಮಾಹಿತಿಯಿದ್ದು, ಭಾರತೀಯ ರಾಯಭಾರಿ ಕಚೇರಿಯೂ ಎಲ್ಲ ವಿದ್ಯಾರ್ಥಿಗಳ ಸಂಪರ್ಕದಲ್ಲಿರುವುದಾಗಿ ತಿಳಿಸಿದ್ದಾರೆ ಎಂದರು.
ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಊಟೋಪಚಾರದ ವ್ಯವಸ್ಥೆಗೂ ಮನವಿ ಮಾಡಿಕೊಳ್ಳಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಸಹಾಯವಾಣಿ ಪ್ರಾರಂಭಿಸಲಾಗಿದೆ. ಯುದ್ಧದ ಪರಿಸ್ಥಿತಿ ತಿಳಿಗೊಳ್ಳುವವರೆಗೆ ಎಲ್ಲ ವಿದ್ಯಾರ್ಥಿಗಳು ಎಚ್ಚರಿಕೆಯಿಂದಿರಲು ವಿದೇಶಾಂಗ ಸಚಿವರು ಸೂಚನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
–Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan)25 Feb 2022

ಎಂಬಿಬಿಎಸ್‌ ಕಲಿಯಲು ಯೂಕ್ರೇನ್‌, ರಷ್ಯಕ್ಕೆ ಹೋಗುವುದೇಕೆ? ಭಾರತದಲ್ಲಿ ಇಲ್ಲದ್ದು ಅಂಥದ್ದೇನಿದೆ ಅಲ್ಲಿ ಗೊತ್ತಾ?

ಮತ್ತೆ ನಿಜವಾಯ್ತಾ ಕೋಡಿಮಠ ಶ್ರೀಗಳ ಭವಿಷ್ಯ? ಅವರು ಹೇಳಿದ ದೇಶವೇ ಯೂಕ್ರೇನಾ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × four =
Remember me
