ಉಳ್ಳಾಲ (ದಕ್ಷಿಣ ಕನ್ನಡ):ಇವರ ಹೆಸರು ಅರ್ಥರ್‌ ಸುನಿಲ್‌ ಕುವೆಲ್ಲೊ. ಮೊನ್ನೆ ಭಾನುವಾರ ಮಧ್ಯರಾತ್ರಿ ಮೀನುಗಾರಿಕೆಗೆ ಹೋಗಿದ್ದರು. ಆದರೆ ದುರದೃಷ್ಟವಶಾತ್​ ಭಯಾನಕ ಬಿರುಗಾಳಿ ಬಂದು ಇವರು ಇದ್ದ ಬೋಟ್​ ನಾಪತ್ತೆಯಾಗಿಹೋಯಿತು.
45 ವರ್ಷದ ಅರ್ಥರ್​ ಅವರಿಗೆ ಶೋಧ ಕಾರ್ಯ ನಡೆದರೂ ಅವರು ಸಿಕ್ಕಿರಲಿಲ್ಲ. ಆಳಸಮುದ್ರದಲ್ಲಿ ಮೀನುಗಾರಿಕೆಗೆ ತೊಡಗಿಸಿಕೊಂಡಿದ್ದಾಗ ಈ ದುರ್ಘಟನೆ ನಡೆದಿತ್ತು. ಪರ್ಸಿನ್‌ ಬೋಟ್‌ನಲ್ಲಿ ಉಳ್ಳಾಲ ಉಳಿಯದ 29 ಮಂದಿ ಮೀನುಗಾರಿಕೆಗೆ ತೆರಳಿದ್ದರು.
ಉಳಿದವರು ಹೇಗೋ ಪ್ರಾಣಾಪಾಯದಿಂದ ಪಾರಾಗಿದ್ದರೂ ಅರ್ಥರ್​ ಅವರು ನಾಪತ್ತೆಯಾಗಿದ್ದರು. ನಿನ್ನೆ ಮಧ್ಯಾಹ್ನದ ಹೊತ್ತಿಗೆ ಈ ಬೋಟ್​ನ ಬೆಲ್ಟ್ ತುಂಡಾಗಿದ್ದ ಸ್ಥಿತಿಯಲ್ಲಿ ಸಿಕ್ಕಿತ್ತು. ಸಮುದ್ರಕ್ಕೆ ಬೀಸಿದ್ದ ಬಲೆ ಸಂಪೂರ್ಣ ಮುದ್ದೆಯಾಗಿತ್ತು. ಅರ್ಥರ್​ ಅವರಿಗೆ ಶೋಧ ಕಾರ್ಯ ಮುಂದುವರೆದಿದ್ದರೂ ಅವರು ಸಿಕ್ಕಿರಲಿಲ್ಲ.
ಇದನ್ನೂ ಓದಿ:ಕೇರಳ ಸಿಎಂ, ಮುಖಂಡರ ಗಡಗಡ ನಡುಗಿಸಿರುವ ಸ್ಮಗ್ಲಿಂಗ್​ ರಾಣಿಗೆ ಎದೆನೋವು! ಆಸ್ಪತ್ರೆಗೆ ದಾಖಲು
ನಂತರ ಇಂದು ಅರ್ಥರ್​ ಅವರು ಮಲ್ಪೆಯಲ್ಲಿ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಘಟನೆ ಕುರಿತು ಮಾಹಿತಿ ನೀಡಿರುವ ಅರ್ಥರ್​, ರಾತ್ರಿವರೆಗೆ ಬಲೆಯನ್ನು ಬಿಡಿಸುವ ಕಾಯಕದಲ್ಲಿ ತೊಡಗಿದ್ದೆವು. ಮಧ್ಯ ರಾತ್ರಿ ಸುಮಾರಿಗೆ ಗಾಳಿ ಮಳೆ ಹೆಚ್ಚಾಗಿ ಬೋಟ್​ಗೆ ಕಟ್ಟಿದ್ದ ಪಾತಿ ಹಗ್ಗ ತುಂಡಾಗಿ ಸಮುದ್ರ ಪಾಲಾಯಿತು. ಬಲೆ ಎಳೆಯಲೆಂದು ಪಾತಿಯಲ್ಲಿ ಕುಳಿತಿದ್ದೆ. ಆದ್ದರಿಂದ ಆ ಸನ್ನಿವೇಶದಲ್ಲಿ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.
ನಂತರ ಸತತ 30 ಗಂಟೆಗಳವರೆಗೆ ಸಮುದ್ರದಲ್ಲಿ ಏಕಾಂಗಿ ಹೋರಾಟ ನಡೆಸಿ ಪ್ರಾಣಾಪಾಯದಿಂದ ಪಾರಾಗಿದ್ದೇನೆ. ಇದೀಗ ಮಲ್ಪೆಗೆ ಬಂದು ಸೇರಿರುವುದಾಗಿ ಹೇಳಿದ್ದಾರೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.
ಪತ್ನಿಯ ಕರೆತಂದರು, ಬನಿಯನ್ ಧರಿಸಿದರು, ಗುಟ್ಕಾ ಜಗಿದರು, ಸ್ಮೋಕ್​ ಮಾಡಿದರು… ವಕೀಲರ ಈ ಪರಿಗೆ ಕೋರ್ಟ್​ ಕೆಂಡಾಮಂಡಲ

ನಿಮ್ಮ ಮಗಳು ಇಷ್ಟು ಹಾಟ್​ ಆಗಿದ್ದು ಯಾವಾಗ? ‘ರಸಿಕ’ ಟ್ರಂಪ್​ ವಿರುದ್ಧ ಪುಸ್ತಕ ಬರೆದ ವಕೀಲ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:7 − 2 =
Remember me
