ಬೆಂಗಳೂರು:ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಪತ್ನಿ ಮತ್ತು ನಾದಿನಿಯನ್ನು ಕೊಲೆ ಮಾಡಿ ಜೈಲುಪಾಲಾಗಿದ್ದ ಬೆಂಗಳೂರಿನ ಪ್ರಸಿದ್ಧ ವೀಣಾವಾದಕ ಬಿ.ಎಂ. ಚಂದ್ರಶೇಖರ್ ಅಲಿಯಾಸ್ ಚಂದ್ರುಗೆ ಸೆಷನ್ಸ್‌ ಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿದೆ.
2013ರಲ್ಲಿ ಈ ಘಟನೆ ನಡೆದಿತ್ತು. ಕುಡುಕನಾಗಿದ್ದ ಚಂದ್ರಶೇಖರ್‌ ಅವರು ಹಣ ನೀಡುವಂತೆ ಪತ್ನಿ ಪ್ರೀತಿ ಹಾಗೂ ನಾದಿನಿಗೆ ಒತ್ತಾಯ ಮಾಡಿದ್ದರು. ಆದರೆ ಇದಕ್ಕೆ ಅವರು ಒಪ್ಪದಿದ್ದಾಗ ಮದ್ಯ ಕುಡಿಸಿ ಕೊಲೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೆಷನ್ಸ್‌ ಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿದೆ. ಬೆಂಗಳೂರಿನ ಗಿರಿನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಜೀವಾವಧಿ ಶಿಕ್ಷೆಯ ಜತೆ ಅವರ ಮಗಳಿಗೆ ಲಕ್ಷ ರೂಪಾಯಿ ಪರಿಹಾರ ಹಣ ನೀಡುವಂತೆ ನ್ಯಾಯಾಧೀಶ ಗುರುರಾಜ್ ಸೋಮಕಳ್ಳರ್ ಆದೇಶಿಸಿದ್ದಾರೆ. ಒಂದು ವೇಳೆ ಹಣ ನೀಡಲು ಅವರು ವಿಫಲರಾದರೆ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಮಗುವಿನ ಭವಿಷ್ಯಕ್ಕೆ ಹಣ ಠೇವಣಿ ಇಡುವಂತೆ ಅವರು ನಿರ್ದೇಶಿಸಿದ್ದಾರೆ.
ಇಂಥ ಕೃತ್ಯ ಎಸಗಿದವನಿಗೆ ಜೀವಾವಧಿ ಶಿಕ್ಷೆ ಸಾಲದು. ಗಲ್ಲುಶಿಕ್ಷೆಯೇ ಆಗಬೇಕು ಎಂದು ಕೋರಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಸರ್ಕಾರಿ ವಕೀಲರಾಗಿರುವ ಸತ್ಯವತಿ ಹೇಳಿದ್ದಾರೆ.
ಕೈಯಲ್ಲಿ ಪಿಸ್ತೂಲ್‌- ಉಸಿರುಬಿಟ್ರೆ ಶೂಟ‌್ಔಟ್‌: 8 ವರ್ಷ ಕಾರುಬಾರು ನಡೆಸಿದ್ದ ಖತರ್ನಾಕ್‌ ಕಳ್ಳ ಸಿಕ್ಕಿಬಿದ್ದ

ಕ್ರಷರ್‌ ಜಿಲೆಟಿನ್‌ ಸ್ಫೋಟ: ಪರಾರಿಯಾಗಿದ್ದ ಬಿಜೆಪಿ ಮುಖಂಡ ಸಿಕ್ಕಿಬಿದ್ದ – ಇನ್ಸ್‌ಪೆಕ್ಟರ್‌, ಎಸ್‌ಐ ಅಮಾನತು

ನನ್ನ ಕಾಮನೆಗಳನ್ನು ಬಾಯಿಬಿಟ್ಟು ಹೇಳಿದ್ರೂ ಪತಿ ದೂರ ಹೋಗ್ತಿದ್ದಾರೆ, ದಾರಿ ತೋಚದಾಗಿದೆ… ಏನು ಮಾಡಲಿ?

VIDEO: ಶಿವಾಜಿ ಪ್ರತಿಮೆ ಅನಾವರಣಕ್ಕೆ ಪೊಲೀಸರು ತಡೆದಾಗ ಪ್ರಕೃತಿಯಿಂದಲೇ ನಡೆಯಿತು ಈ ವಿಸ್ಮಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 16 =
Remember me
