ವಿಜಯಪುರ:ವಿಜಯಪುರದಲ್ಲಿ ಇದೇ 8ರಂದು ನಡೆದಿದ್ದ ಕೊಲೆ ಪ್ರಕರಣವೊಂದನ್ನು ಪೊಲೀಸರು ಭೇದಿಸಿದ್ದಾರೆ. ಏಕ್ತಾ ನಗರ ನಿವಾಸಿ ಪ್ರಕಾಶ ಹಳ್ಳಿ(40)ಮನೆಯಲ್ಲೇ ಕೊಲೆಯಾಗಿತ್ತು. ತನ್ನ ಪತಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಪತ್ನಿ, ಅಂಗನವಾಡಿ ಟೀಚರ್​ ರಾಜೇಶ್ವರಿ ಹೊಸಮನಿ ಗೋಳೋ ಎಂದು ಅತ್ತಿದ್ದಳು. ಆದರೆ ಇದು ಸಹಜ ಸಾವಲ್ಲ, ಬದಲಿಗೆ ಪತ್ನಿಯೇ ಕೊಲೆ ಮಾಡಿರುವುದು ಎಂದು ತಿಳಿದುಬಂದಿದೆ.
30 ವರ್ಷದ ರಾಜೇಶ್ವರಿ ಅಂಗನವಾಡಿಯಲ್ಲಿ ಟೀಚರ್​ ಆಗಿದ್ದಾಳೆ. ಈಕೆ 24 ವರ್ಷದ ರವಿ ತಳವಾರ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇವರ ಪ್ರೇಮಕ್ಕೆ ಪತಿ ಪ್ರಕಾಶ ಅಡ್ಡಿಯಾಗುತ್ತಿದ್ದರು ಎನ್ನುವ ಕಾರಣಕ್ಕೆ ಊಟದಲ್ಲಿ ನಿದ್ದೆಮಾತ್ರೆ ಕೊಟ್ಟು ನಂತರ ಸಾಯಿಸಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ರಾಜೇಶ್ವರಿ ಹೊಸಮನಿ, ರವಿ ತಳವಾರ ಜತೆ ಇವರಿಗೆ ಸಹಕರಿಸಿರುವ ಗುರುಪಾದ ದಳವಾಯಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಕೆಲ ವರ್ಷಗಳಿಂದ ಪ್ರಿಯಕರ ರವಿ ತಳವಾರನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ರಾಜೇಶ್ವರಿ. ಈ ಹಿಂದೆ ಮೂರು ಬಾರಿ ತಿಂಗಳುಗಟ್ಟಲೇ ರವಿ ಜೊತೆ ಓಡಿ ಹೋಗಿದ್ದಳು. ಇದೇ ವಿಚಾರಕ್ಕೆ ಮನೆಯಲ್ಲಿ ಆಗಾಗ ಗಲಾಟೆ ಆಗುತ್ತಿತ್ತು. ಜೂನ್ 8ರ ರಾತ್ರಿ ಮನೆಗೆ ಬಂದ ಗಂಡನಿಗೆ ಚಿಕನ್ ನಲ್ಲಿ ನಿದ್ರೆ ಮಾತ್ರೆ ಬೆರೆಸಿ ಕೊಟ್ಟಿದ್ದಳು.
ರಾತ್ರಿ ಪ್ರಕಾಶ ನಿದ್ರೆಗೆ ಜಾರಿದ ಬಳಿಕ ಪ್ರಿಯಕರ ರವಿ ಹಾಗೂ ಆತನ ಸ್ನೇಹಿತ ಗುರುಪಾದನನ್ನು ಫೋನ್ ಮಾಡಿ ಕರೆಸಿದ್ದಳು ಈಕೆ. ಪ್ರಕಾಶ ಎದೆಯ ಮೇಲೆ ಕುಳಿತಿದ್ದ ರವಿ, ಕಾಲು ಹಿಡಿದುಕೊಂಡಿದ್ದ ರಾಜೇಶ್ವರಿ, ವೇಲ್ ನಿಂದ ಕತ್ತಿಗೆ ಬಿಗಿದಿದ್ದ ಗುರುಪಾದ. ಮೂವರು ಆರೋಪಿಗಳು ಸೇರಿ ಪ್ರಕಾಶ ಕೊಲೆ ಮಾಡಿದ್ದರು.
ರಾತ್ರಿಯಿಡಿ ಗಂಡನ ಶವದೊಂದಿಗೆ ಇದ್ದು, ಬೆಳಗ್ಗೆದ್ದು ಗಂಡನಿಗೆ ಹಾರ್ಟ್ ಅಟ್ಯಾಕ್ ಆಗಿದೆ ಎಂದು ಬಿಂಬಿಸಿದ್ದಳು ರಾಜೇಶ್ವರಿ. ಗಂಡನ ಮನೆಯವರಿಗೆ ಸಂಶಯ ಬಂದು ದೂರು ನೀಡಿದ ಬಳಿಕ ಪೊಲೀಸರ ತನಿಖೆಯಲ್ಲಿ ಕೊಲೆಯಾಗಿರುವುದು ಬಹಿರಂಗಗೊಂಡಿದೆ.
ಮಗನ ಸಾವಿನ ಕುರಿತು ಪ್ರಕಾಶ ತಂದೆ ಲಕ್ಷ್ಮಣ ಸಂಶಯ ವ್ಯಕ್ತಪಡಿಸಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತನಿಖೆ ಮುಂದುವರೆದಿದೆ.(ದಿಗ್ವಿಜಯ ನ್ಯೂಸ್​)
ವಯಾಗ್ರ ತಂದ ಆಪತ್ತು- ಅತಿಯಾಗಿ ಸೇವಿಸಿ ಜೀವನಪೂರ್ತಿ ಪೇಚಿಗೆ ಸಿಲುಕಿದ ನವವಿವಾಹಿತ: ವೈದ್ಯರ ಎಚ್ಚರಿಕೆ
‘ಆ ಇನ್ಸ್‌ಪೆಕ್ಟರ್‌ನ ರೌಡಿಸಂ ನನ್ನತ್ರ ನಡಿಯಲ್ಲ, ಎಲ್ಲಾ ಮಾಡೇ ಬಂದವ ನಾನು… ಮೂರನೇ ಕಣ್ಣು ಬಿಟ್ರೆ ಅಷ್ಟೇ..’
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + twenty =
Remember me
