ಧಾರವಾಡ:ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ ಕೊಲೆ ಕೇಸ್​ನಲ್ಲಿ ಸಿಬಿಐ ಪೊಲೀಸರಿಂದ ಬಂಧನಕ್ಕೊಳಪಟ್ಟು, ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಇಂದು ಕೂಡ ಜಾಮೀನು ಸಿಕ್ಕಿಲ್ಲ.
ಹೈಕೋರ್ಟ್​ ಅರ್ಜಿಯ ವಿಚಾರಣೆಯನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ಇನ್ನೂ ಕೆಲವು ದಿನ ವಿನಯ್​ ಜೈಲಿನಲ್ಲಿಯೇ ಕಳೆಯಬೇಕಿದೆ. ಇವರು ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐ ಕಾಲಾವಕಾಶ ಕೇಳಿಕೊಂಡ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿದೆ.
ನ.5ರಂದು ಬಂಧನಕ್ಕೊಳಪಟ್ಟಿದ್ದ ವಿನಯ್​ ಕುಲಕರ್ಣಿಗೆ ಜಿಲ್ಲಾ ನ್ಯಾಯಾಲಯ ನ.9ರಂದು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ನಂತರ ನವೆಂಬರ್​ 23ರಂದು ನ್ಯಾಯಾಂಗ ಬಂಧನದ ಮೊದಲ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿತ್ತು. ಮತ್ತೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್​ ಆದೇಶಿಸಿತ್ತು.
2016ರ ಜೂನ್ 15ರಲ್ಲಿ ತನ್ನದೇ ಮಾಲೀಕತ್ವದ ಉದಯ್ ಜಿಮ್​ನಲ್ಲಿ ಯೋಗೀಶ್​ ಗೌಡ ಬರ್ಬರವಾಗಿ ಹತ್ಯೆಯಾಗಿದ್ದರು. ಈ ಸಂಬಂಧ ಸಿಬಿಐ ವಿಚಾರಣೆ ಕೈಗೆತ್ತಿಕೊಂಡಿದೆ. ಕೊಲೆ ಕೇಸ್​ನಲ್ಲಿ ವಿನಯ್​ ಕುಲಕರ್ಣಿ ಕೈವಾಡವಿರುವ ಮತ್ತು ಪ್ರಭಾವ ಬಳಸಿ ಕೇಸು ಮುಚ್ಚಿ ಹಾಕಿರುವ ಆರೋಪ ಇದೆ.
ಮರುಕಳಿಸಿದೆ ನಿರ್ಭಯಾ ಕೇಸ್​: ಕಬ್ಬಿಣದ ರಾಡ್​ ನೂಕಿಸಿ ಅತ್ಯಾಚಾರ ಎಸಗಿ ಕೊಲೆ!

ಉನ್ನತ ಹುದ್ದೆ ಏರುವ ಯೋಗವಿದೆ ಎಂದು ಹೇಳಿ ನ್ಯಾಯಾಧೀಶೆಗೂ ಟೋಪಿ ಹಾಕಿದ ಯುವರಾಜ!

ಮೂರು ಮಕ್ಕಳ ತಂದೆಯ ಪ್ರೀತಿಗೆ ಬಿದ್ದು ಮದುವೆಯಾಗಲಾರದೇ ತೊಳಲಾಡುತ್ತಿದ್ದೇನೆ- ಪ್ಲೀಸ್​ ಪರಿಹಾರ ಹೇಳಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − eleven =
Remember me
