ಬೆಂಗಳೂರು:ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ವಿ.ಆರ್ ಸುದರ್ಶನ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರಿಗೆ ಕಳುಹಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಅವರನ್ನು ಬೆಂಬಲಿಸುವ ಮತ್ತು ಪ್ರಚಾರ ಮಾಡುವ ಹಿನ್ನೆಲೆಯಲ್ಲಿ ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ರಾಜೀನಾಮೆ ಪತ್ರದಲ್ಲಿ ಸುದರ್ಶನ್​ ಬರೆದಿದ್ದಾರೆ.
ರಾಜೀನಾಮೆ ಪತ್ರದಲ್ಲಿ ಏನಿದೆ?ಅಖಿಲ ಭಾರತ ಕಾಂಗ್ರೆಸ್ ನ ಪರಂಪರೆ, ಪ್ರಯತ್ನ, ಸಾಧನೆಗಳ ಈ ಹಿನ್ನೆಲೆಯಲ್ಲಿ ಸುಮಾರು 24 ವರ್ಷಗಳ ನಂತರ ಆಂತರಿಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಸಲುವಾಗಿ ಎಐಸಿಸಿ ಅಧ್ಯಕ್ಷ ಪದವಿಗೆ ಚುನಾವಣೆ ನಡೆಸುತ್ತಿರುವುದು ಸ್ವಾಗರ್ತಾ. ಈ ಸಂದರ್ಭದಲ್ಲಿ ಭವಿಷ್ಯದಲ್ಲಿ ಭರವಸೆ ಮೂಡಿಸಿರುವ ಶ್ರೀ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರಗೆ ಪಾದಯಾತ್ರೆ ಮಾಡುತ್ತಿರುವುದು ಉತ್ತಮ ಪ್ರಯತ್ನ ಹಾಗೂ ಬೆಳವಣಿಗೆ.
ಎಐಸಿಸಿ ಅಧ್ಯಕ್ಷ ಪದವಿಗೆ ಸ್ಪರ್ಧಿಸಿರುವ ಶ್ರೀ ಮಲ್ಲಿಕಾರ್ಜುನ ಖರ್ಗೆ ಹಿರಿಯ ಅನುಭವಿ ನಾಯಕ ಅವರಿಗೆ ಅಭಿನಂಧನೆಗಳು ಹಾಗೂ ಶುಭಾಶಯಗಳು. ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಚಿವರಾಗಿ, ಕರ್ನಾಟಕ ವಿಧಾನಸಭಾ ವಿರೋಧ ಪಕ್ಷದ ನಾಯಕರಾಗಿ, ಕೆಪಿಸಿಸಿ ಅಧ್ಯಕ್ಷರಾಗಿ, ಎಐಸಿಸಿ , CWC ಸದಸ್ಯರಾಗಿ, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಸಚಿವರಾಗಿ, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿ, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಪರಿಣಾಮಕಾರಿಯಾಗಿ ಮತ್ತು ಜವಾಬ್ದಾರಿಯಾಗಿ ಕರ್ತವ್ಯ ನಿರ್ವಹಿಸಿ, ಅಪಾರ ಅನುಭವ ಹೊಂದಿದ್ದಾರೆ.
ಈ ಅನುಭವ ಮತ್ತು ಹಿರಿತನ ಪಕ್ಷಕ್ಕೆ ಭವಿಷ್ಯದಲ್ಲಿ ಸಂಘಟನೆಗೆ ಪ್ರಯೋಜನೆಕಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ದೇಶದ ಎಲ್ಲಾ ಕಾಂಗ್ರೆಸ್ ಸದಸ್ಯರು ಅವರ ಅಭ್ಯರ್ಥಿ ಆಯ್ಕೆ ಬೆಂಬಲಿಸಬೇಕೆಂದು ಮನವಿ ಮಾಡುತ್ತೇನೆ.
ಹಾಗೇಯೆ ಎಐಸಿಸಿ ಕೇಂದ್ರ ಚುನಾವಣಾ ಮಂಡಳಿ ಅಧ್ಯಕ್ಷರಾದ ಶ್ರೀ ಮಧುಸೂದನ್ ಮಿಸ್ತ್ರಿ ಅವರು ಚುನಾವಣಾ ಹಿನ್ನೆಲೆಯಲ್ಲಿ ಉತ್ತಮ ನಿಯಮಗಳನ್ಯಮಗಳನ್ನು ಪಾಲನೆ ಮಾಡಲು ತಿಳಿಸಿರುತ್ತಾರೆ. ಅದು ಕೂಡ ಸ್ವಾಗರ್ತಾ ಮತ್ತು ಅವರಿಗೆ ಅಭಿನಂದನೆಗಳು. ಶ್ರೀ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಸುವ ಮತ್ತು ಪ್ರಚಾರ ಮಾಡುವ ಹಿನ್ನೆಲೆಯಲ್ಲಿ ನಾನು ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ… ಎಂದು ಪತ್ರದಲ್ಲಿ ತಿಳಿಸಲಾಗಿದೆ.
1978ರಲ್ಲಿ ವೇಮಗಲ್ ಗ್ರಾಮಪಂಚಾಯಿತಿ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿರುವ ಸುದರ್ಶನ್, 1988ರಿಂದ 2006ರವರೆಗೆ ಮೂರು ಅವಧಿಗಳಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದರು. ಪರಿಷತ್ ಉಪಸಭಾಪತಿ ಹಾಗೂ ಸಭಾಪತಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
VIDEO: ‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’: ಕಾರ್ಣಿಕೋತ್ಸವದಲ್ಲಿ ‘ಯುವ ಸಿಎಂ’ ಕುರಿತು ಭವಿಷ್ಯವಾಣಿ…

ಪರೇಶ್​ ಮೇಸ್ತಾನದ್ದು ಕೊಲೆಯಲ್ಲ: ವರದಿಗೆ ಕಾಂಗ್ರೆಸ್​ನಿಂದ ಸಂಭ್ರಮ- ಬಿಜೆಪಿ ಕೆಂಡಾಮಂಡಲ; ನಾಯಕರು ಹೇಳ್ತಿರೋದೇನು?

ಬೆಟ್ಟಿಂಗ್​ ಜಾಹೀರಾತುದಾರರಿಗೆ ಶಾಕ್​ ನೀಡಿದ ಕೇಂದ್ರ ಸರ್ಕಾರ: ಇನ್ಮುಂದೆ ನಿಷೇಧ- ಇಲ್ಲದಿದ್ರೆ ಕಠಿಣ ಕ್ರಮ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:three × five =
Remember me
