ಬೆಂಗಳೂರು:ಸುಮಾರು 8000 ಕ್ಕೂ ಹೆಚ್ಚು ಮರಗಳಿಗೆ ತಾಯಿ ಸ್ವರೂಪವಾಗಿರುವ ಸಾಲುಮರದ ತಿಮ್ಮಕ್ಕಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಮ್ಮಕ್ಕಗೆ ನಿವೇಶನ ಕ್ರಯಪತ್ರವನ್ನು ಹಂಚಿಕೆ ಮಾಡಿದರು.
ಕೆಲ ದಿನಗಳ ಹಿಂದಷ್ಟೇ ಸಿಎಂ ಬೊಮ್ಮಾಯಿ ಅವರನ್ನು ತಿಮ್ಮಕ್ಕ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದಾದ ಬಳಿಕ ಸಿಎಂ ಸೂಚನೆ ಮೇರೆಗೆ ಬಿಡಿಎ, ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕಳಿಗೆ ನೀಡಿತ್ತು. ಇಂದು (ಜೂನ್​ 25) ಮುಂಜಾನೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಸಿಎಂ ಕರಾರು ಪತ್ರವನ್ನು ವಿತರಣೆ ಮಾಡಿದರು.

ಸಿಎಂ ಸೂಚನೆ ಮೇರೆಗೆ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಸಾಲುಮರದ ತಿಮ್ಮಕ್ಕ ಅವರಿಗೆ ಬುಧವಾರ ನಿವೇಶನ ಪತ್ರ ವಿತರಿಸಿದರು. ಈ ವೇಳೆ ಬಿಡಿಎ ಕಾರ್ಯದರ್ಶಿ ಆನಂದ್, ಉಮೇಶ್, ಆಯುಕ್ತ ರಾಜೇಶ್‌ಗೌಡ, ಉಪಕಾರ್ಯದರ್ಶಿ ಮಧು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆಯ ಮೇರೆಗೆ ಕೆಂಪೇಗೌಡ ಬಡಾವಣೆಯ 7ನೇ ಬ್ಲಾಕ್‌ನಲ್ಲಿ ನಿವೇಶನವನ್ನು ಗುರುತಿಸಿ ವಿತರಿಸಲಾಗುತ್ತಿದೆ ಎಂದು ವಿಶ್ವನಾಥ್ ಅವರು ಹೇಳಿದ್ದಾರೆ. ತಿಮ್ಮಕ್ಕಳಿಗೆ ಒಟ್ಟು 50×80 ಚದರ ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.
ಬಿಡಿಎ ನಿವೇಶನ ನೀಡಿರುವುದು ಸಂತಸದ ವಿಷಯ. ಎಲ್ಲರೂ ಪರಿಸರ ರಕ್ಷಣೆಯತ್ತ ಕಾಳಜಿ ವಹಿಸಬೇಕು ಎಂದು ಸಾಲುಮರದ ತಿಮ್ಮಕ್ಕ ಹೇಳಿದ್ದಾರೆ.
ಬಂಡಾಯ ನಾಯಕ ಏಕನಾಥ್​ ಶಿಂಧೆಗೆ ಸವಾಲು ಎಸೆದ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ

ಎಸ್ಸೆಸ್ಸೆಲ್ಸಿ ಪಾಸ್​ ಆಗಲ್ಲ ಎಂದು ಗೇಲಿ ಮಾಡಿದವರಿಗೆ ಈ ಹುಡುಗ ಕೊಟ್ಟ ತಿರುಗೇಟು ಹೇಗಿದೆ ನೋಡಿ!

VIDEO| ಜೀವದ ಹಂಗು ತೊರೆದು ವ್ಯಕ್ತಿಯ ಪ್ರಾಣ ಉಳಿಸಿದ ರೈಲ್ವೆ ಸಿಬ್ಬಂದಿ: ಮೆಚ್ಚುಗೆಯ ಮಹಾಪೂರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 16 =
Remember me
