ಬೆಂಗಳೂರು:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ನಾಡಪ್ರಭು ಕೆಂಪೇಗೌಡರ’ ಬೃಹತ್​ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಮಾಜಿ ಪ್ರಧಾನಿ ಎಚ್​.ಡಿ.ದೇವೆಗೌಡರನ್ನೇ ಆಹ್ವಾನಿಸಿಲ್ಲ ಎಂದು ಜೆಡಿಎಸ್‌ ಆರೋಪಿಸಿ, ಟ್ವೀಟ್ ಮಾಡಿತ್ತು.
ಇದೀಗ ರಾಜ್ಯ ಬಿಜೆಪಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ, ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ನೀಡಲಾದ ಆಮಂತ್ರಣ ಪತ್ರಿಕೆಯ ಫೋಟೋವನ್ನು ಟ್ವೀಟ್ ಮಾಡಿದೆ. ಈ ಮೂಲಕ ಜೆಡಿಎಸ್ ಮಾಡಿರುವ ಆರೋಪವನ್ನು ತಳ್ಳಿ ಹಾಕಿದೆ.
ಪ್ರಧಾನಿಯಾಗಿದ್ದ ಕನ್ನಡಿಗ ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ನೀಡಲಾಗಿದೆ. ಅಲ್ಲದೆ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ದೂರವಾಣಿ‌ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯ ಸಾಧಕ ಬುದ್ಧಿ ಪ್ರದರ್ಶಿಸಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡುವ ಮೂಲಕ ಜೆಡಿಎಸ್​ನ ಆರೋಪವನ್ನು ವ್ಯಂಗ್ಯವಾಡಿದೆ.
ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ಶ್ರೀ ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ಹೋಗಿದ್ದು ಮಾತ್ರವಲ್ಲ, ಖುದ್ದು ಶ್ರೀ@BSBommaiಅವರೇ ದೂರವಾಣಿ‌ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ. (1/2)pic.twitter.com/VX3Jxe0fWL— BJP Karnataka (@BJP4Karnataka)November 11, 2022
ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ಶ್ರೀ ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ಹೋಗಿದ್ದು ಮಾತ್ರವಲ್ಲ, ಖುದ್ದು ಶ್ರೀ@BSBommaiಅವರೇ ದೂರವಾಣಿ‌ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ. (1/2)pic.twitter.com/VX3Jxe0fWL
ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಎಚ್​.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಜೆಡಿಎಸ್​ ಟ್ವೀಟ್ ಮಾಡಿತ್ತು.
ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಶ್ರೀ@H_D_Devegowdaಅವರನ್ನು ಶ್ರೀ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ@BJP4Karnatakaಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ.1/7pic.twitter.com/Zkr37zeSMl— Janata Dal Secular (@JanataDal_S)November 11, 2022
ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಶ್ರೀ@H_D_Devegowdaಅವರನ್ನು ಶ್ರೀ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ@BJP4Karnatakaಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ.1/7pic.twitter.com/Zkr37zeSMl
ಇದಕ್ಕೆ ಪ್ರತಿಯಾಗಿ, ಇದೀಗ ಬಿಜೆಪಿ ಕನ್ನಡದ ಅಸ್ಮಿತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಈ ಮಣ್ಣಿಗೆ ಸೇವೆ‌ ಸಲ್ಲಿಸಿದ ಸಾಧಕರಾದಿಯಾಗಿ ನಮ್ಮ ರಾಜ್ಯದ ಕಟ್ಟ ಕಡೆಯಲ್ಲಿರುವವರನ್ನೂ ಮರೆಯದೇ, ಹಿಂಬಾಲಿಸಿ ಗುರುತಿಸಿದ್ದು ಬಿಜೆಪಿ. ಕುಟುಂಬವನ್ನೇ ಪಕ್ಷವನ್ನಾಗಿಸಿಕೊಂಡ ಜೆಡಿಎಸ್‌ಗೆ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬುದು ಯಾವತ್ತಿಗೂ ಬಿಡಿಸಲಾಗದ ಒಗಟು ಎಂದು ಟ್ವೀಟ್ ಮಾಡಿದೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:nine + 11 =
Remember me
