ಉಡುಪಿ:ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ರಂಗಸ್ಥಳದಲ್ಲೇ ನಿಧನರಾಗಿದ್ದಾರೆ.
ಹೃದಯಾಘಾತದಿಂದ ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿಸುವಾಗ ಸಾಧು ಕೊಠಾರಿ ಮೃತಪಟ್ಟರು. ಶಿರಿಯಾರದ ಕಾಜ್ರಲ್ಲಿ ಸಮೀಪ ಕಲ್ಬೆಟ್ಟು ಎನ್ನುವಲ್ಲಿ ಮಂಗಳವಾರ ಬೆಳಗಿನ ಜಾವ ಘಟನೆ ನಡೆದಿದೆ.
ಇದನ್ನೂ ಓದಿರಿ:ತಂಗಿಗಾಗಿ ಅಕ್ಕನನ್ನೇ ನಗ್ನಗೊಳಿಸಿದ! ಸಹಾಯಕ್ಕೆ ಕೇಳಿ ಬರಲಿ ಎಂದು ಕಾದಿದ್ದವನಿಗೆ ಕಾದಿತ್ತು ದೊಡ್ಡ ಶಾಕ್​!
ಮೇಳದ ಪ್ರಧಾನ ವೇಷಧಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಾಧು ಕೊಠಾರಿ, ಬೆಳಗಿನ ಜಾವ 3 ಗಂಟೆ ಸುಮಾರಿಗೆ ‘ಮಹಾಕಲಿ‌ ಮಗದೇಂದ್ರ’ ಪ್ರಸಂಗದಲ್ಲಿ ಮಾಗಧನಾಗಿ ಪ್ರದರ್ಶನ ನೀಡುತ್ತಿದ್ದ ವೇಳೆ ರಂಗದಲ್ಲೇ ಹೃದಯ ನೋವಿನಿಂದ ಕುಸಿದುಬಿದ್ದರು.
ತಕ್ಷಣ ವೇಷ ಕಳಚಿ ಪ್ರಧಾನ ಭಾಗವತ ಸದಾಶಿವ ಅಮೀನ್ ಹಾಗೂ ಮೇಳದ ಮ್ಯಾನೇಜರ್, ಕೊಠಾರಿ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುವಾಗ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.
ಇದನ್ನೂ ಓದಿರಿ:ಸಂಚಾರ ಪೊಲೀಸರ ಕಿರಿಕಿರಿ: ದಂಡ ವಸೂಲಿ ಹೆಸರಲ್ಲಿ ಕಿರುಕುಳ, ಕಾನೂನು ಅರಿವಿನ ಕೊರತೆ
ಕೊಠಾರಿ ಪ್ರಸ್ತುತ ಬಾರಕೂರಿನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದರು. ಸುಮಾರು 40 ವರ್ಷಕ್ಕೂ ಹೆಚ್ಚು ಕಾಲ ಯಕ್ಷ ತಿರುಗಾಟ ನಡೆಸಿ, ಬಡಗುತಿಟ್ಟಿನ ಉತ್ತಮ ಕಲಾವಿದರಾಗಿ ಗುರುತಿಸಿಕೊಂಡಿದ್ದರು. ಸಾಧು ಅವರನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.(ದಿಗ್ವಿಜಯ ನ್ಯೂಸ್​)
ಗೆಲ್ಲುತ್ತಿದ್ದಂತೆ ತನ್ನ ದುರ್ಬುದ್ಧಿ ತೋರಿದ ಗ್ರಾಪಂ ಸದಸ್ಯ: ಮಹಿಳೆಗೆ ಇಟ್ಟ ಬೇಡಿಕೆ ಮನಕುಲ ತಲೆತಗ್ಗಿಸುವಂಥದ್ದು!

ರಾಜ್ಯಕ್ಕೆ ಮತ್ತೆ ಕರೆಂಟ್ ಶಾಕ್?; ಯೂನಿಟ್​ಗೆ 1.39 ರೂ. ಹೆಚ್ಚಳಕ್ಕೆ ಶೀಘ್ರ ಪ್ರಸ್ತಾವನೆ

ಹೆಚ್ಚುತ್ತಿರುವ ರೂಪಾಂತರಿ ಕರೊನಾ ಮಾರಿ: ಇಂಗ್ಲೆಂಡ್​ನಲ್ಲಿ ಸಂಪೂರ್ಣ ಲಾಕ್​ಡೌನ್​ ಘೋಷಣೆ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + six =
Remember me
